For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಸಿರಾಜ್ ಪ್ರದರ್ಶನಕ್ಕೆ ಮನಸೋತ ಪಾಕಿಸ್ತಾನದ ಪತ್ರಕರ್ತೆ

IND vs ENG: Pakistan journalist Zainab Abbas praised Mohammed Siraj after Lords test

ಇತ್ತೀಚೆಗಷ್ಟೇ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ 2 ಪಂದ್ಯಗಳು ಮುಗಿದಿದ್ದು ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲನೇ ಪಂದ್ಯ ಮಳೆಗೆ ಆಹುತಿಯಾಗುವ ವುದರ ಮೂಲಕ ಯಾವುದೇ ಫಲಿತಾಂಶ ಸಿಗದೇ ಡ್ರಾನಲ್ಲಿ ಅಂತ್ಯಗೊಂಡಿತು. ಹಾಗೂ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಐತಿಹಾಸಿಕ ಹಿನ್ನೆಲೆ ಇರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ 151 ರನ್‌ಗಳ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆಯನ್ನು ಸಾಧಿಸಿದೆ.

ಲಾರ್ಡ್ಸ್ ಅಂಗಳದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಲು ಕಾರಣರಾದ ಆಟಗಾರರಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್, ಎರಡನೇ ಇನ್ನಿಂಗ್ಸ್‌ನಲ್ಲಿಯೂ 4 ವಿಕೆಟ್‍ಗಳನ್ನು ಪಡೆದು ಮಿಂಚಿದರು. ಹೀಗೆ ಲಾರ್ಡ್ಸ್ ಅಂಗಳದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 8 ವಿಕೆಟ್‍ಗಳನ್ನು ಪಡೆದ ಮಹಮ್ಮದ್ ಸಿರಾಜ್ ಕುರಿತು ಇದೀಗ ಪಾಕಿಸ್ತಾನ ಮೂಲದ ಪತ್ರಕರ್ತೆ ಝೈನಬ್ ಅಬ್ಬಾಸ್ ಮೆಚ್ಚುಗೆಯ ಮಾತುಗಳನ್ನಾಡಿದ್ದು ಸಿರಾಜ್ ಪ್ರದರ್ಶನದ ಕುರಿತು ಹಾಡಿ ಹೊಗಳಿದ್ದಾರೆ.

'ಮೊಹಮ್ಮದ್ ಸಿರಾಜ್ ಪ್ರಸ್ತುತ ಕ್ರಿಕೆಟ್ ಜಗತ್ತಿನ ಅತ್ಯುತ್ತಮ ಬೌಲರ್‌ಗಳಲ್ಲಿ ಒಬ್ಬರು. ಮೊಹಮ್ಮದ್ ಸಿರಾಜ್ ಕಳೆದ ಬಾರಿಯ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಮತ್ತು ಪ್ರಸ್ತುತ ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ಅತ್ಯದ್ಭುತ ಪ್ರದರ್ಶನವನ್ನು ನೀಡುತ್ತಿದ್ದು ಸಿರಾಜ್ ಯಾವ ಪಿಚ್‌ನಲ್ಲಿ ಹೇಗೆ ಬೌಲಿಂಗ್ ಮಾಡಬೇಕು ಎಂಬ ಉಪಾಯವನ್ನು ಬಲ್ಲ ಆಟಗಾರನಾಗಿದ್ದಾರೆ. ಬೌಲಿಂಗ್‌ನ ಲೈನ್ & ಲೆಂತ್‌ನ್ನು ಬಹಳ ಅಚ್ಚುಕಟ್ಟಾಗಿ ನಿಭಾಯಿಸುವ ಸಿರಾಜ್ ಪ್ರದರ್ಶನ ನಿಜಕ್ಕೂ ಮನ ಗೆದ್ದಿದೆ' ಎಂದು ಪಾಕಿಸ್ತಾನದ ಪತ್ರಕರ್ತೆ ಝೈನಬ್ ಅಬ್ಬಾಸ್ ತಿಳಿಸಿದ್ದಾರೆ.

ಕ್ರಿಕೆಟ್ ಕಾಶಿ ಲಾರ್ಡ್ಸ್ ಅಂಗಳದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ವೇಗಿ ಮೊಹಮ್ಮದ್ ಸಿರಾಜ್ 8 ವಿಕೆಟ್ ಪಡೆದು ಕೊಳ್ಳುವುದರ ಮೂಲಕ ಹೊಸ ಮೈಲಿಗಲ್ಲೊಂದನ್ನು ನೆಟ್ಟಿದ್ದಾರೆ. ಮೊದಲನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದಿದ್ದ ಮೊಹಮ್ಮದ್ ಸಿರಾಜ್ ಎರಡನೇ ಇನ್ನಿಂಗ್ಸ್‌ನಲ್ಲಿಯೂ 4 ವಿಕೆಟ್‍ಗಳನ್ನು ಪಡೆದು ಮಿಂಚಿದ್ದಾರೆ. ಹೀಗಾಗಿ ಲಾರ್ಡ್ಸ್ ಅಂಗಳದಲ್ಲಿ ನಡೆದ ಈ ಪಂದ್ಯವೊಂದರಲ್ಲಿ 8 ವಿಕೆಟ್ ಪಡೆದ ಮೊಹಮ್ಮದ್ ಸಿರಾಜ್ 1982ರಲ್ಲಿ ಕಪಿಲ್ ದೇವ್ ಮಾಡಿದ್ದ ದಾಖಲೆಯನ್ನು ಸರಿದೂಗಿಸಿಕೊಂಡಿದ್ದಾರೆ. ಹೌದು ಲಾರ್ಡ್ಸ್ ಅಂಗಳದಲ್ಲಿ ಟೆಸ್ಟ್ ಪಂದ್ಯವೊಂದರಲ್ಲಿ 8 ವಿಕೆಟ್ ಪಡೆದ ಇಬ್ಬರು ಭಾರತೀಯರು ಎಂಬ ದಾಖಲೆ ಕಪಿಲ್ ದೇವ್ ಮತ್ತು ಮೊಹಮ್ಮದ್ ಸಿರಾಜ್ ಹೆಸರಿನಲ್ಲಿದೆ. 1982ರಲ್ಲಿ ಲಾರ್ಡ್ಸ್ ಅಂಗಳದಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ಕಪಿಲ್ ದೇವ್ 8 ವಿಕೆಟ್ ಪಡೆದಿದ್ದರು, ಇದಾದ ಬಳಿಕ ಬೇರೆ ಯಾವುದೇ ಭಾರತೀಯ ಬೌಲರ್ ಕೂಡ ಲಾರ್ಡ್ಸ್ ಅಂಗಳದಲ್ಲಿ 8 ವಿಕೆಟ್ ಪಡೆದ ಸಾಧನೆಯನ್ನು ಮಾಡಿರಲಿಲ್ಲ. ಆದರೆ ಇದೀಗ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೂಲಕ ಲಾರ್ಡ್ಸ್‌ನಲ್ಲಿ 8 ವಿಕೆಟ್ ಪಡೆದಿರುವ ಮೊಹಮ್ಮದ್ ಸಿರಾಜ್ 39 ವರ್ಷಗಳ ಹಳೆಯ ದಾಖಲೆಯನ್ನು ಸರಿದೂಗಿಸಿಕೊಂಡಿದ್ದಾರೆ.

Story first published: Thursday, August 19, 2021, 15:44 [IST]
Other articles published on Aug 19, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+