ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರು; ಆ ಸ್ಟಾರ್ ಆಟಗಾರರು ಹೊರಕ್ಕೆ?!

IND vs ENG: Prithvi Shaw and Suryakumar Yadav join Indian squad at Lords after completing quarantine

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಪಡೆದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ 3 ದಿನಗಳ ಆಟ ಈಗಾಗಲೇ ( ಆಗಸ್ಟ್ 15ಕ್ಕೆ ) ಮುಗಿದಿದ್ದು ಮೊದಲ ಇನ್ನಿಂಗ್ಸ್ ಮುಕ್ತಾಯವಾಗಿದೆ. ಇದೇ ಸಮಯದಲ್ಲಿ ಲಾರ್ಡ್ಸ್ ಅಂಗಳದಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಕಾಣಿಸಿಕೊಂಡಿದ್ದು ಮುಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆಯಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.

ಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರುಭಾರತ vs ಇಂಗ್ಲೆಂಡ್: ಟೀಮ್ ಇಂಡಿಯಾ ಸೇರಿದ ಇಬ್ಬರು ಹೊಸ ಆಟಗಾರರು

ಬುಧವಾರ ಆರಂಭವಾದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ವಿರಾಟ್ ಕೊಹ್ಲಿ ಪಡೆಗೆ ಬ್ಯಾಟಿಂಗ್ ಮಾಡುವ ಅವಕಾಶ ನೀಡಿದರು. ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಉತ್ತಮ ಆರಂಭವನ್ನು ಮಾಡಿದರು. ರೋಹಿತ್ ಶರ್ಮಾ 83 ರನ್ ಬಾರಿಸಿದರೆ ಕೆಎಲ್ ರಾಹುಲ್ ಅಬ್ಬರದ 129 ರನ್ ಬಾರಿಸುವುದರ ಮೂಲಕ ಶತಕ ಸಿಡಿಸಿ ಮಿಂಚಿದರು. ಇನ್ನುಳಿದಂತೆ ವಿರಾಟ್ ಕೊಹ್ಲಿ 42, ರವೀಂದ್ರ ಜಡೇಜಾ 40 ಮತ್ತು ರಿಷಭ್ ಪಂತ್ 37 ರನ್ ಗಳಿಸಿದ್ದು ಬಿಟ್ಟರೆ ಟೀಮ್ ಇಂಡಿಯಾದ ಇತರ ಯಾವುದೇ ಆಟಗಾರ ಕೂಡ ಎರಡಂಕಿ ಮುಟ್ಟುವಲ್ಲಿ ಸಫಲರಾಗಲಿಲ್ಲ.

ಅದರಲ್ಲಿಯೂ ಈ ಪಂದ್ಯದಲ್ಲಿ ಭಾರತದ ಆಟಗಾರರಾದ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರಾ ಮೇಲೆ ಕ್ರೀಡಾಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆ ಇತ್ತು. 2014ರ ಇಂಗ್ಲೆಂಡ್ ಪ್ರವಾಸದಲ್ಲಿ ಇದೇ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಶತಕ ಬಾರಿಸಿ ಮಿಂಚಿದ್ದ ಅಜಿಂಕ್ಯ ರಹಾನೆ ಈ ಬಾರಿ ಕೇವಲ 1 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು ಮತ್ತು ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತಿಯನ್ನು ಪಡೆದಿರುವ ಚೇತೇಶ್ವರ ಪೂಜಾರ ಕೇವಲ 9 ರನ್ ಕಲೆ ಹಾಕಿ ತಮ್ಮ ಕೆಟ್ಟ ಫಾರ್ಮ್‌ನ್ನು ಮುಂದುವರೆಸಿದರು.

ಭಾರತ vs ಇಂಗ್ಲೆಂಡ್: ಇಂಗ್ಲೆಂಡ್ ವಿರುದ್ಧ ನಾನೂ ಆಡುತ್ತೇನೆಂದು ಮೈದಾನಕ್ಕೆ ನುಗ್ಗಿದ ಜಾರ್ವೋ!ಭಾರತ vs ಇಂಗ್ಲೆಂಡ್: ಇಂಗ್ಲೆಂಡ್ ವಿರುದ್ಧ ನಾನೂ ಆಡುತ್ತೇನೆಂದು ಮೈದಾನಕ್ಕೆ ನುಗ್ಗಿದ ಜಾರ್ವೋ!

ಮೊದಲನೇ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರಾ ವಿಫಲರಾದಾಗಲೇ ಇಬ್ಬರನ್ನು ಸಹ ತಂಡದಿಂದ ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿಯೇ ಕೂಗು ಕೇಳಿಬಂದಿತ್ತು. ಈ ಇಬ್ಬರೂ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದರೂ ಸಹ ಪದೇಪದೆ ಅವಕಾಶ ನೀಡಿ ವ್ಯರ್ಥ ಪ್ರಯತ್ನ ಮಾಡುವ ಬದಲು ಟೀಮ್ ಇಂಡಿಯಾ ಸೇರಿರುವ ಯುವ ಆಟಗಾರರಿಗೆ ಅವಕಾಶಗಳನ್ನು ನೀಡುವುದು ಉತ್ತಮ ಎಂದು ಸಾಕಷ್ಟು ಕ್ರೀಡಾಭಿಮಾನಿಗಳು ಒತ್ತಾಯಿಸಿದ್ದರು. ಮೊದಲನೇ ಪಂದ್ಯದಲ್ಲಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರಾ ವಿಫಲರಾದರೂ ಸಹ ಎರಡನೇ ಪಂದ್ಯದಲ್ಲಿಯೂ ಅವರಿಗೆ ಅವಕಾಶ ನೀಡಿದ್ದಕ್ಕೆ ನೆಟ್ಟಿಗರು ಕಿಡಿಕಾರಿದ್ದರು.

ಭಾರತ vs ಇಂಗ್ಲೆಂಡ್: ಭಾರತೀಯರ ಪರಿಸ್ಥಿತಿ ನೋಡಿದರೆ ನಗು ಬರುತ್ತದೆ ಎಂದು ಕಾಲೆಳೆದ ಮಾಜಿ ಕ್ರಿಕೆಟಿಗಭಾರತ vs ಇಂಗ್ಲೆಂಡ್: ಭಾರತೀಯರ ಪರಿಸ್ಥಿತಿ ನೋಡಿದರೆ ನಗು ಬರುತ್ತದೆ ಎಂದು ಕಾಲೆಳೆದ ಮಾಜಿ ಕ್ರಿಕೆಟಿಗ

ಎರಡನೇ ಪಂದ್ಯದಲ್ಲಿಯೂ ಕಳಪೆ ಪ್ರದರ್ಶನ ನೀಡುತ್ತಿರುವ ಆಟಗಾರರಿಗೆ ಅವಕಾಶ ಕೊಟ್ಟು ಕ್ರಿಕೆಟ್ ವೀಕ್ಷಕರಲ್ಲಿ ಬೇಸರ ಮೂಡಿಸಿದ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ತಂಡದ ಆಟಗಾರರಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಲು ಮುಂದಾದಂತಿದೆ. ಹೌದು ಭಾರತ ಮತ್ತು ಇಂಗ್ಲೆಂಡ್ ನಡುವೆ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆ ಇತ್ತೀಚೆಗಷ್ಟೇ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಕಾಣಿಸಿಕೊಂಡಿದ್ದು ಮುಂದಿನ ಪಂದ್ಯಗಳಲ್ಲಿ ತಂಡ ಸೇರಿಕೊಳ್ಳುವ ಮುನ್ಸೂಚನೆ ಸಿಕ್ಕಂತಾಗಿದ್ದು ಇಬ್ಬರು ಸ್ಟಾರ್ ಆಟಗಾರರು ಹೊರಬೀಳುವ ಸಾಧ್ಯತೆಯಿದೆ.

ಮೂರನೇ ಟೆಸ್ಟ್‌ಗೆ ಯಾದವ್ ಮತ್ತು ಪೃಥ್ವಿ ಶಾ ಸೇರ್ಪಡೆಯಾಗಬಹುದು

ಮೂರನೇ ಟೆಸ್ಟ್‌ಗೆ ಯಾದವ್ ಮತ್ತು ಪೃಥ್ವಿ ಶಾ ಸೇರ್ಪಡೆಯಾಗಬಹುದು

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯಕ್ಕೆ ಟೀಮ್ ಇಂಡಿಯಾಕ್ಕೆ ಹೊಸದಾಗಿ ಸೇರಿಕೊಂಡಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಆಯ್ಕೆಯಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಶ್ರೀಲಂಕಾ ಪ್ರವಾಸವನ್ನು ಕೈಗೊಂಡಿದ್ದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಶ್ರೀಲಂಕಾ ಪ್ರವಾಸ ಮುಗಿದ ಬೆನ್ನಲ್ಲೇ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದರು. ಇಂಗ್ಲೆಂಡ್‌ಗೆ ಬಂದ ನಂತರ ಕ್ವಾರಂಟೈನ್ ನಿಯಮವನ್ನು ಪಾಲಿಸುತ್ತಿದ್ದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಎರಡನೇ ಟೆಸ್ಟ್ ಪಂದ್ಯದ ವೇಳೆ ಕ್ವಾರಂಟೈನ್ ಮುಗಿಸಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಕ್ವಾರಂಟೈನ್ ನಿಯಮವನ್ನು ಮುಗಿಸಿರುವ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಳ್ಳುವುದು ಖಚಿತ ಎನ್ನಲಾಗುತ್ತಿದೆ.

ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಹೊರಬೀಳುವ ಸಾಧ್ಯತೆ!

ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಹೊರಬೀಳುವ ಸಾಧ್ಯತೆ!


ಒಂದುವೇಳೆ ನೂತನ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಪಡೆದುಕೊಂಡರೆ, ತಂಡದಿಂದ ಇಬ್ಬರು ಆಟಗಾರರನ್ನು ಹೊರಗಿಡಬೇಕಾಗುತ್ತದೆ. ಮೊದಲನೇ ಮತ್ತು ಎರಡನೇ ಟೆಸ್ಟ್ ಪಂದ್ಯಗಳಲ್ಲಿನ ಟೀಮ್ ಇಂಡಿಯಾ ಆಟಗಾರರ ಪ್ರದರ್ಶನವನ್ನು ಗಮನಿಸಿದರೆ ಬ್ಯಾಟಿಂಗ್ ವಿಭಾಗದಲ್ಲಿ ಮೂರನೇ ಪಂದ್ಯಕ್ಕೆ ಭಾರೀ ಬದಲಾವಣೆಯನ್ನು ಮಾಡುವ ಸಾಧ್ಯತೆಗಳಿವೆ. ಮೊದಲ ಮತ್ತು ಎರಡನೇ ಟೆಸ್ಟ್ ಪಂದ್ಯಗಳಲ್ಲಿ ಭಾರತದ ಕೆಲ ಬ್ಯಾಟ್ಸ್‌ಮನ್‌ಗಳು ತೀರಾ ಕಳಪೆ ಪ್ರದರ್ಶನವನ್ನು ನೀಡಿದ್ದು ಅಂಥವರನ್ನು ತಂಡದಿಂದ ಕೈಬಿಡುವ ಸಾಧ್ಯತೆಗಳಿವೆ. ಅದರಲ್ಲಿಯೂ ಪ್ರಮುಖವಾಗಿ ಅಜಿಂಕ್ಯ ರಹಾನೆ ಮತ್ತು ಚೇತೇಶ್ವರ್ ಪೂಜಾರ ಮೂರನೇ ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಹೊರಗುಳಿಯುವ ಸಾಧ್ಯತೆಗಳು ಹೆಚ್ಚಿದ್ದು ಈ ಇಬ್ಬರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಮತ್ತು ಪೃಥ್ವಿ ಶಾ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ರಹಾನೆ ತಂಡದಿಂದ ಹೊರಗುಳಿದರೆ ಉಪನಾಯಕನ ಪಟ್ಟ ಯಾರಿಗೆ ಸಿಗಬಹುದು?

ರಹಾನೆ ತಂಡದಿಂದ ಹೊರಗುಳಿದರೆ ಉಪನಾಯಕನ ಪಟ್ಟ ಯಾರಿಗೆ ಸಿಗಬಹುದು?

ಕಳೆದ ಕೆಲ ಪಂದ್ಯಗಳಿಂದ ಟೀಮ್ ಇಂಡಿಯಾದ ಟೆಸ್ಟ್ ಕ್ರಿಕೆಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿದ್ದು ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ. ಹೀಗಾಗಿ ಅಜಿಂಕ್ಯ ರಹಾನೆ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದೇ ಆದಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ನೂತನ ಉಪ ನಾಯಕ ಸಿಗುವ ಸಾಧ್ಯತೆಗಳೂ ಇವೆ. ಈಗಾಗಲೇ ಕೆ ಎಲ್ ರಾಹುಲ್, ರೋಹಿತ್ ಶರ್ಮಾ ಮತ್ತು ರಿಷಭ್ ಪಂತ್ ಹೆಸರುಗಳು ಉಪನಾಯಕ ಸ್ಥಾನಕ್ಕೆ ಕೇಳಿಬರುತ್ತಿವೆ.

Story first published: Sunday, August 15, 2021, 10:48 [IST]
Other articles published on Aug 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X