R Ashwin: ವಿಶಾಖಪಟ್ಟಣಂನಲ್ಲಿ ದಾಖಲೆಗಳ ಟ್ರ್ಯಾಕ್ ಮೇಲೆ ನಡೆಯಲಿದೆ ಅಶ್ವಿನ್ ಪಯಣ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಶುಕ್ರವಾರ, ಫೆಬ್ರವರಿ 02 ರಂದು ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ಆರಂಭವಾಗಲಿದೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 28 ರನ್‌ಗಳಿಂದ ಹಿನ್ನಡೆ ಕಂಡಿರುವ ಟೀಮ್ ಇಂಡಿಯಾ ಎರಡನೇ ಪಂದ್ಯದಲ್ಲಿ ಪುಟಿದೇಳುವ ಮೂಲಕ ಸರಣಿಯನ್ನು ಸಮಬಲಗೊಳಿಸುವ ವಿಶ್ವಾಸದಲ್ಲಿದೆ.
ಗಾಯದ ಸಮಸ್ಯೆಯಿಂದಾಗಿ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಜಡೇಜಾ ಔಟಾಗಿರುವುದರಿಂದ ತಂಡದ ಸ್ಟಾರ್ ಸ್ಪಿನ್ ಬೌಲರ್ ಆರ್.ಅಶ್ವಿನ್ ಮೇಲೆ ದೊಡ್ಡ ಜವಾಬ್ದಾರಿ ಬೀಳಲಿದೆ.

ಅಶ್ವಿನ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಪಡೆದಿದ್ದರು. ಸರಣಿಯ ಎರಡನೇ ಪಂದ್ಯವನ್ನು ಟೀಂ ಇಂಡಿಯಾ ಗೆಲ್ಲಬೇಕಾದರೆ ಅಶ್ವಿನ್ ಉತ್ತಮ ಪ್ರದರ್ಶನ ನೀಡಬೇಕಿದೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಒಂದಲ್ಲ ಎರಡಲ್ಲ ಐದು ದೊಡ್ಡ ದಾಖಲೆಗಳನ್ನು ಮಾಡಬಹುದು. ಇಂತಹ ಪರಿಸ್ಥಿತಿಯಲ್ಲಿ ಅಶ್ವಿನ್ ಈ ಐದು ದಾಖಲೆಗಳನ್ನು ಮಾಡಲು ಏನು ಮಾಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ.
1- ಮೂರು ವಿಕೆಟ್ ಅವಶ್ಯಕತೆ
ಅಶ್ವಿನ್ ಇಂಗ್ಲೆಂಡ್ ವಿರುದ್ಧ 20 ಟೆಸ್ಟ್ ಪಂದ್ಯಗಳಲ್ಲಿ ಇದುವರೆಗೆ ಒಟ್ಟು 93 ವಿಕೆಟ್ ಪಡೆದಿದ್ದಾರೆ. ಭಾರತ ಪರ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ನಲ್ಲಿ ಭಗವತ್ ಚಂದ್ರಶೇಖರ್ ಅತಿ ಹೆಚ್ಚು ವಿಕೆಟ್ ಪಡೆದಿದ್ದರು. ಇವರು 23 ಟೆಸ್ಟ್ ಪಂದ್ಯಗಳಲ್ಲಿ 95 ವಿಕೆಟ್ ಪಡೆದಿದ್ದರು. ಅಶ್ವಿನ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಕೇವಲ ಮೂರು ವಿಕೆಟ್ ಪಡೆಯುವ ಮೂಲಕ ಸಫಲರಾದ್ದಲ್ಲಿ ಚಂದ್ರಶೇಖರ್ ಅವರ ದಾಖಲೆ ಮೀರಿ ನಿಲ್ಲಬಹುದು.
2- 4 ವಿಕೆಟ್ ಪಡೆದರೆ ಮಹತ್ವದ ಮೈಲುಗಲ್ಲು
ಆರ್ ಅಶ್ವಿನ್ ತಮ್ಮ ಇಡೀ ಟೆಸ್ಟ್ ವೃತ್ತಿಜೀವನದಲ್ಲಿ ಒಟ್ಟು 96 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 496 ವಿಕೆಟ್ ಪಡೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಕೇವಲ 4 ವಿಕೆಟ್ ಪಡೆದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ ಹೆಸರು 500 ವಿಕೆಟ್ ಪಡೆದು ಬೀಗಲಿದ್ದಾರೆ. ಆಗ ಅವರು 500 ವಿಕೆಟ್ ಪಡೆದ ವಿಶ್ವದ 9ನೇ ಮತ್ತು ಭಾರತದ ಎರಡನೇ ಬೌಲರ್ ಆಗಲಿದ್ದಾರೆ.

3- 100 ವಿಕೆಟ್ ಸನಿಹದಲ್ಲಿ ಅಶ್ವಿನ್
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಕ್ರಿಕೆಟ್ ಇತಿಹಾಸವು ತುಂಬಾ ಹಳೆಯದು. ಉಭಯ ದೇಶಗಳ ನಡುವಿನ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳಲ್ಲಿ ಜೇಮ್ಸ್ ಆಂಡರ್ಸನ್ ಹೆಸರು ಅಗ್ರಸ್ಥಾನದಲ್ಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಅವರು 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಪಂದ್ಯದಲ್ಲಿ ಅಶ್ವಿನ್ ಇನ್ನೂ 7 ವಿಕೆಟ್ ಪಡೆದರೆ ಅವರ ಮೊತ್ತ 100 ವಿಕೆಟ್ ಆಗಲಿದೆ.
4- ಅನಿಲ್ ಕುಂಬ್ಳೆ ದಾಖಲೆಗೆ ಅಪಾಯ
ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಆರ್ ಅಶ್ವಿನ್ ಇದುವರೆಗೆ ಆಡಿರುವ 96 ಟೆಸ್ಟ್ ಪಂದ್ಯಗಳಲ್ಲಿ 34 ಬಾರಿ ಐದು ವಿಕೆಟ್ ಕಬಳಿಸಿದ್ದಾರೆ. ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಐದು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರೆ, ಟೆಸ್ಟ್‌ನಲ್ಲಿ ಭಾರತದ ಪರ 35 ಬಾರಿ ಐದು ವಿಕೆಟ್‌ಗಳನ್ನು ಪಡೆದ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಮುರಿಯುತ್ತಾರೆ.
5- 8 ವಿಕೆಟ್ ಪಡೆದರೆ ಮತ್ತೊಂದು ಸಾಧನೆ
ಅನಿಲ್ ಕುಂಬ್ಳೆ ಇದುವರೆಗೆ ಭಾರತದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಭಾರತದ ನೆಲದಲ್ಲಿ ಅನಿಲ್ 350 ವಿಕೆಟ್ ಪಡೆದಿದ್ದಾರೆ. ಅಶ್ವಿನ್ 56 ಟೆಸ್ಟ್ ಪಂದ್ಯಗಳಲ್ಲಿ 343 ವಿಕೆಟ್ ಪಡೆದಿದ್ದಾರೆ. ಅಶ್ವಿನ್ ಕೇವಲ 8 ವಿಕೆಟ್ ಪಡೆಯುವ ಮೂಲಕ ಕುಂಬ್ಳೆ ಅವರನ್ನು ಹಿಂದಿಕ್ಕಲಿದ್ದು, ಭಾರತದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications