For Quick Alerts
ALLOW NOTIFICATIONS  
For Daily Alerts
 

IND vs ENG: 3ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ರಾಜ್‌ಕೋಟ್ ಕ್ರೀಡಾಂಗಣಕ್ಕೆ ಹೊಸ ಹೆಸರು; ಜಯ್ ಶಾ ಅನಾವರಣ

ಸದ್ಯ ನಡೆಯುತ್ತಿರುವ ಆತಿಥೇಯ ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಕ್ರಿಕೆಟ್ ಪ್ರೇಮಿಗಳು ಉಸಿರು ಬಿಗಿಹಿಡಿದು ವೀಕ್ಷಿಸುವಂತಾಗಿದೆ. ಇದು ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಸಾಬೀತಾಗಿದೆ.

ಮೊದಲ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ಅತ್ಯುತ್ತಮ ಕ್ರಿಕೆಟ್ ಆಡಿದ್ದು, ತಲಾ ಒಂದೊಂದು ಪಂದ್ಯವನ್ನು ಗೆದ್ದಿವೆ. ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್ 28 ರನ್‌ಗಳ ರೋಚಕ ಗೆಲುವು ಸಾಧಿಸಿದರೆ, ವಿಶಾಖಪಟ್ಟಣದಲ್ಲಿ ಆತಿಥೇಯ ಭಾರತ ತಂಡ 106 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಪುನರಾಗಮನ ಮಾಡಿತು.

ಇದೀಗ ಗುರುವಾರ, ಫೆಬ್ರುವರಿ 15ರಂದು ಆರಂಭವಾಗಲಿರುವ ಮೂರನೇ ಟೆಸ್ಟ್‌ ಪಂದ್ಯಕ್ಕಾಗಿ ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​(ಎಸ್‌ಸಿಎ) ಕ್ರೀಡಾಂಗಣಕ್ಕೆ ಕ್ರಿಕೆಟ್ ಸರಣಿ ಸ್ಥಳಾಂತರಗೊಳ್ಳಲಿದೆ.

IND vs ENG: Rajkot Stadium Gets New Name Ahead of 3rd Test; Jay Shah Unveil On Feb 14

ಆದಾಗ್ಯೂ, ಮೂರನೇ ಪಂದ್ಯ ಪ್ರಾರಂಭವಾಗುವ ಮೊದಲು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರಿಕೆಟ್ ಕ್ರೀಡಾಂಗಣವು ಹೊಸ ಹೆಸರನ್ನು ಸ್ವೀಕರಿಸಲು ಸಜ್ಜಾಗಿದೆ. ಈ ಕ್ರೀಡಾಂಗಣಕ್ಕೆ ಪ್ರಥಮ ದರ್ಜೆ ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಮಾಜಿ ಗೌರವ ಕಾರ್ಯದರ್ಶಿ ನಿರಂಜನ್ ಶಾ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಆಗಿರುವ ಜಯ್ ಶಾ ಅವರು ಫೆಬ್ರವರಿ 14ರಂದು ಮೂರನೇ ಟೆಸ್ಟ್‌ ಪಂದ್ಯಕ್ಕೆ ಮುಂಚಿತವಾಗಿ ಹೊಸ ಹೆಸರನ್ನು ಅನಾವರಣಗೊಳಿಸಲಿದ್ದಾರೆ.

"ಜಯ್ ಶಾ ಅವರು ಹೊಸ ಹೆಸರನ್ನು ಅನಾವರಣಗೊಳಿಸಲಿದ್ದಾರೆ ಮತ್ತು ಸಮಾರಂಭಕ್ಕಾಗಿ ನಾವು ಬಿಸಿಸಿಐ ಹಿರಿಯ ಅಧಿಕಾರಿಗಳಿಗೆ ಆಹ್ವಾನಗಳನ್ನು ಕಳುಹಿಸಿದ್ದೇವೆ. ಒಂದೆರಡು ದಿನಗಳಲ್ಲಿ, ನಾವು ಆಹ್ವಾನಿಸಿದ ಎಲ್ಲಾ ಗಣ್ಯರು ಮತ್ತು ಪದಾಧಿಕಾರಿಗಳಿಂದ ನಾವು ದೃಢೀಕರಣವನ್ನು ಪಡೆಯುತ್ತೇವೆ," ಎಂದು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಹಿಮಾಂಶು ಶಾ ಹೇಳಿದರು.

ಆಟಗಾರರಿಗೂ ಆಹ್ವಾನ ಕಳುಹಿಸಲಾಗುವುದು; ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ

ಇದಲ್ಲದೆ, ಭಾರತ ಮತ್ತು ಇಂಗ್ಲೆಂಡ್ ತಂಡಗಳ ಆಟಗಾರರು ಕೂಡ ಫೆಬ್ರವರಿ 14ರಂದು ಕ್ರೀಡಾಂಗಣಕ್ಕೆ ಆಗಮಿಸಲಿರುವ ಕಾರಣ, ಹೊಸ ಹೆಸರು ಅನಾವರಣ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗುತ್ತದೆ ಎಂದು ಹಿಮಾಂಶು ಶಾ ಆಶಿಸಿದರು.

ಗಮನಾರ್ಹವಾಗಿ, ಈ ವೇಳಾಪಟ್ಟಿಯು ಭಾರತ ಮತ್ತು ಇಂಗ್ಲೆಂಡ್ ತಂಡಗಳ ಎರಡೂ ಐಚ್ಛಿಕ ಅಭ್ಯಾಸ ಅವಧಿಗಳಿಗೆ ಅವಕಾಶವನ್ನು ಹೊಂದಿರುತ್ತದೆ ಎಂದರ್ಥ.

IND vs ENG: Rajkot Stadium Gets New Name Ahead of 3rd Test; Jay Shah Unveil On Feb 14

"ಈಗ ಇದನ್ನು ದೃಢೀಕರಿಸಲು ಸಾಧ್ಯವಿಲ್ಲ. ಆದರೆ ಆಹ್ವಾನಗಳನ್ನು ಕಳುಹಿಸಲಾಗುವುದು ಮತ್ತು ಆಟಗಾರರು ಸಹ ಇದಕ್ಕೆ ಹಾಜರಾಗಬಹುದು ಎಂದು ನಾವು ಭಾವಿಸುತ್ತೇವೆ," ಎಂದು ಹಿಮಾಂಶು ಶಾ ತಿಳಿಸಿದರು.

ನಿರಂಜನ್ ಶಾ ವೃತ್ತಿಜೀವನ

ಗಮನಾರ್ಹವಾಗಿ, 1965-66 ಮತ್ತು 1975-76ರ ನಡುವೆ ನಿರಂಜನ್ ಶಾ ಸೌರಾಷ್ಟ್ರ ತಂಡಕ್ಕಾಗಿ 12 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದರು. ಅವರು ಸುಮಾರು ನಾಲ್ಕು ದಶಕಗಳ ಕಾಲ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅಲ್ಲದೆ, ನಿರಂಜನ್ ಶಾ ಅವರು ಒಂದು ಕಾಲದಲ್ಲಿ ಬಿಸಿಸಿಐ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ನಿರಂಜನ್ ಶಾ ಅವರು ಸೌರಾಷ್ಟ್ರ ಕ್ರಿಕೆಟ್‌ಗೆ ನೀಡಿದ ಕೊಡುಗೆಗಳಿಗಾಗಿ ಶ್ಲಾಘಿಸಲ್ಪಟ್ಟಿದ್ದಾರೆ ಮತ್ತು ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ ಟೆಸ್ಟ್ ಸ್ಥಳದ ಸ್ಥಾನಮಾನವನ್ನು ಪಡೆಯಲು ಸಹಾಯ ಮಾಡುವಲ್ಲಿ ಅವರು ನಿರ್ಣಾಯಕ ಪಾತ್ರವನ್ನು ವಹಿಸಿದ್ದಾರೆ. ಈ ಕ್ರೀಡಾಂಗಣವು ಇಲ್ಲಿಯವರೆಗೆ ಎರಡು ಟೆಸ್ಟ್ ಪಂದ್ಯಗಳನ್ನು ಆಯೋಜಿಸಿದೆ.

ವಿಶೇಷವಾಗಿ, 2016ರಲ್ಲಿ ಈ ಮೈದಾನದಲ್ಲಿ ಆಡಿದ ಮೊದಲ ಟೆಸ್ಟ್ ಕೂಡ ಭಾರತ ಮತ್ತು ಇಂಗ್ಲೆಂಡ್ ನಡುವೆ ಅಗಿತ್ತು ಮತ್ತು ಪಂದ್ಯವು ಡ್ರಾನಲ್ಲಿ ಕೊನೆಗೊಂಡಿತು.

Story first published: Wednesday, February 7, 2024, 13:21 [IST]
Other articles published on Feb 7, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+