IND vs ENG: ಮುತ್ತಯ್ಯ ಮುರಳೀಧರನ್‌ರ 18 ವರ್ಷಗಳ ಹಳೆಯ ದಾಖಲೆ ಮುರಿದ ಆರ್ ಅಶ್ವಿನ್
ಶನಿವಾರ, ಮಾರ್ಚ್ 9ರಂದು ಧರ್ಮಶಾಲಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ 3ನೇ ದಿನದಂದು ಆತಿಥೇಯ ಭಾರತ ತಂಡ ಇನಿಂಗ್ಸ್ ಮತ್ತು 64 ರನ್‌ಗಳಿಂದ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿತು.
ಇದೇ ವೇಳೆ ಭಾರತದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ ಸ್ಮರಣೀಯ ಸಾಧನೆ ಮಾಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 5 ಐದು ವಿಕೆಟ್‌ಗಳನ್ನು ಪಡೆದು ಭಾರತ ತಂಡ ಗೆಲ್ಲಲು ಸಹಾಯ ಮಾಡಿದರು.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಭಾರತ ತಂಡ 4-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡ ಐದನೇ ಟೆಸ್ಟ್ ಪಂದ್ಯದಲ್ಲಿ 37 ವರ್ಷದ ರವಿಚಂದ್ರನ್ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ 14 ಓವರ್‌ಗಳಲ್ಲಿ 77 ರನ್ ನೀಡಿ 5 ವಿಕೆಟ್‌ಗಳ ಅಂಕಿಅಂಶ ದಾಖಲಿಸಿದರು.
ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್‌ನಲ್ಲಿ ರವಿಚಂದ್ರನ್ ಅಶ್ವಿನ್ 51 ರನ್ ನೀಡಿ 4 ವಿಕೆಟ್‌ಗಳನ್ನು ಪಡೆದಿದ್ದರು ಮತ್ತು ಒಟ್ಟಾರೆ ಪಂದ್ಯದಲ್ಲಿ 128 ರನ್‌ಗಳಿಗೆ 9 ವಿಕೆಟ್‌ಗಳ ಅಂಕಿಅಂಶಗಳನ್ನು ದಾಖಲಿಸಿದರು. ಅವರ 100ನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಪಂದ್ಯದ ಅಂಕಿಅಂಶಗಳೊಂದಿಗೆ ಬೌಲಿಂಗ್ ಮಾಡಿದರು.
ಗಮನಾರ್ಹವಾಗಿ, ಶ್ರೀಲಂಕಾದ ಲೆಜೆಂಡ್ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಅವರು 2006ರಲ್ಲಿ ಚಟ್ಟೋಗ್ರಾಮ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ತಮ್ಮ 100ನೇ ಟೆಸ್ಟ್ ಪಂದ್ಯದಲ್ಲಿ 141 ರನ್ ನೀಡಿ 9 ವಿಕೆಟ್‌ಗಳೊಂದಿಗೆ ದಾಖಲೆಯನ್ನು ಹೊಂದಿದ್ದರು.
ಇದೇ ವೇಳೆ ರವಿಚಂದ್ರನ್ ಅಶ್ವಿನ್ ಅವರು ಟೆಸ್ಟ್ ಸ್ವರೂಪದಲ್ಲಿ ತಮ್ಮ 36ನೇ ಐದು ವಿಕೆಟ್ ಸಾಧನೆಯನ್ನು ದಾಖಲಿಸಿದರು. ಇದು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡದ ಪರ ಅತಿ ಹೆಚ್ಚು 5-ವಿಕೆಟ್ ಗೊಂಚಲು ಪಡೆಯುವ ಮೂಲಕ ಲೆಜೆಂಡ್ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಮೀರಿಸಿದರು.
ಇದಲ್ಲದೆ, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು 5-ವಿಕೆಟ್ ಗೊಂಚಲು ಪಟ್ಟಿಯಲ್ಲಿ ಸರ್ ರಿಚರ್ಡ್ ಹ್ಯಾಡ್ಲೀ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಏರಿದರು. ಈ ಪಟ್ಟಿಯಲ್ಲಿ ಶೇನ್ ವಾರ್ನ್ (37) ಮತ್ತು ಮುತ್ತಯ್ಯ ಮುರಳೀಧರನ್ (67) ಅಗ್ರ ಎರಡು ಸ್ಥಾನದಲ್ಲಿದ್ದಾರೆ.

ಸರಣಿಯ ಪ್ರಮುಖ ವಿಕೆಟ್ ಟೇಕರ್ ಆದ ಆರ್ ಅಶ್ವಿನ್
ಇದಕ್ಕೂ ಮೊದಲು, ರವಿಚಂದ್ರನ್ ಅಶ್ವಿನ್ ಅವರು ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 500 ಟೆಸ್ಟ್ ವಿಕೆಟ್‌ಗಳನ್ನು ಪೂರ್ಣಗೊಳಿಸಿದರು ಮತ್ತು 98 ಟೆಸ್ಟ್‌ಗಳಲ್ಲಿ ಹೆಗ್ಗುರುತನ್ನು ಸಾಧಿಸಿದ ಎರಡನೇ ವೇಗದ ಬೌಲರ್ ಎನಿಸಿಕೊಂಡರು.
ಆರ್ ಅಶ್ವಿನ್ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ 24.80ರ ಸರಾಸರಿಯಲ್ಲಿ ಮತ್ತು 4.13ರ ಎಕಾನಮಿ ದರದಲ್ಲಿ ತಮ್ಮ ಹೆಸರಿಗೆ 26 ವಿಕೆಟ್‌ಗಳೊಂದಿಗೆ ಸರಣಿಯ ಪ್ರಮುಖ ವಿಕೆಟ್-ಟೇಕರ್ ಆಗಿ ಮುಗಿಸಿದರು.
ಶುಭ್ಮನ್ ಗಿಲ್ 110 ರನ್ ಮತ್ತು ರೋಹಿತ್ ಶರ್ಮಾ 103 ರನ್‌ಗಳ ಶತಕದ ನೆರವಿನಿಂದ ಭಾರತವು ಮೊದಲ ಇನಿಂಗ್ಸ್‌ನಲ್ಲಿ 259 ರನ್‌ಗಳ ಮುನ್ನಡೆ ಸಾಧಿಸಿತು. ಇದಕ್ಕೆ ಪ್ರತ್ಯುತ್ತರವಾಗಿ, ಇಂಗ್ಲೆಂಡ್ ತನ್ನ ಎರಡನೇ ಇನ್ನಿಂಗ್ಸ್‌ನಲ್ಲಿ 195 ರನ್‌ಗಳಿಗೆ ಸರ್ವಪತನ ಕಂಡಿತು ಮತ್ತು ಇನ್ನಿಂಗ್ಸ್ ಮತ್ತು 64 ರನ್‌ಗಳ ಅಂತರದಿಂದ ಸೋಲನುಭವಿಸಿತು.
ಇನ್ನು ಕುಲದೀಪ್ ಯಾದವ್ 7 ವಿಕೆಟ್ ಮತ್ತು 30 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ಐದು ಪಂದ್ಯಗಳ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ 89ರ ಸರಾಸರಿಯಲ್ಲಿ 712 ರನ್ ಗಳಿಸುವ ಮೂಲಕ ಯಶಸ್ವಿ ಜೈಸ್ವಾಲ್ ಸರಣಿಶ್ರೇಷ್ಠ ಪ್ರಶಸ್ತಿ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications