ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ತೃತೀಯ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಸ್ಥಾನ, ಈ ಸ್ಟಾರ್ ಆಟಗಾರ ಹೊರಬೀಳುವ ಸಾಧ್ಯತೆ!

IND vs ENG: Ravichandran Ashwin likely to replace Ravindra Jadeja in third test

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಗೀಡಾಗಿರುವ ವಿಷಯವಾಗಿದೆ. 5 ಟೆಸ್ಟ್ ಪಂದ್ಯಗಳ ಪೈಕಿ ಈಗಾಗಲೇ 2 ಟೆಸ್ಟ್ ಪಂದ್ಯಗಳು ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದೇ ದೊಡ್ಡ ಸಾಧನೆಯಲ್ಲ; ಸುನಿಲ್ ಗವಾಸ್ಕರ್ ಮಾತಿನ ಮರ್ಮವೇನು?ಲಾರ್ಡ್ಸ್‌ನಲ್ಲಿ ಶತಕ ಬಾರಿಸುವುದೇ ದೊಡ್ಡ ಸಾಧನೆಯಲ್ಲ; ಸುನಿಲ್ ಗವಾಸ್ಕರ್ ಮಾತಿನ ಮರ್ಮವೇನು?

ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಆಗಮನದಿಂದಾಗಿ ಯಾವುದೇ ಫಲಿತಾಂಶವಿಲ್ಲದೇ ನೀರಸ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸಿತು. ಹೀಗೆ ಲಾರ್ಡ್ಸ್ ಅಂಗಳದಲ್ಲಿ ಇಂಗ್ಲೆಂಡ್ ತಂಡವನ್ನು ಸದೆಬಡಿಯುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ಆಗಸ್ಟ್ 25ರಂದು ಲೀಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಸೆಣಸಾಡಲು ಸಜ್ಜಾಗುತ್ತಿದೆ.

ಐಪಿಎಲ್: ಆರ್‌ಸಿಬಿ ತಂಡ ಸೇರಿದ 3 ಹೊಸ ಆಟಗಾರರು; ವಿಶ್ವದ ನಂ.2 ಬೌಲರ್‌ ಬೆಂಗಳೂರು ತೆಕ್ಕೆಗೆಐಪಿಎಲ್: ಆರ್‌ಸಿಬಿ ತಂಡ ಸೇರಿದ 3 ಹೊಸ ಆಟಗಾರರು; ವಿಶ್ವದ ನಂ.2 ಬೌಲರ್‌ ಬೆಂಗಳೂರು ತೆಕ್ಕೆಗೆ

ಇದೀಗ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ತೃತೀಯ ಟೆಸ್ಟ್ ಕುರಿತು ಪ್ರಮುಖ ಸುದ್ದಿಯೊಂದು ಹರಿದಾಡುತ್ತಿದ್ದು ಇಂಗ್ಲೆಂಡ್ ವಿರುದ್ಧದ ಮೊದಲೆರಡು ಪಂದ್ಯದಲ್ಲಿ ಅವಕಾಶ ಸಿಗದೇ ಬೆಂಚ್ ಕಾದಿದ್ದ ರವಿಚಂದ್ರನ್ ಅಶ್ವಿನ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಹೌದು ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಕೈ ತಪ್ಪಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಜಡೇಜಾ ಜಾಗಕ್ಕೆ ಅಶ್ವಿನ್

ಜಡೇಜಾ ಜಾಗಕ್ಕೆ ಅಶ್ವಿನ್

ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಪ್ರಸ್ತುತ ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಆಟಗಾರರಾಗಿ ಮಿಂಚು ಹರಿಸುತ್ತಿದ್ದಾರೆ. ಈ ಹಿಂದೆ ಇಬ್ಬರೂ ಸಹ ಹಲವಾರು ಪಂದ್ಯಗಳಲ್ಲಿ ಒಟ್ಟಿಗೆ ಆಟವಾಡಿದ್ದಾರೆ. ಆದರೆ ಇಂಗ್ಲೆಂಡ್ ವಾತಾವರಣದಲ್ಲಿ ಓರ್ವ ಸ್ಪಿನ್ ಬೌಲರ್ ತಂಡದಲ್ಲಿದ್ದರೆ ಸಾಕು ಎಂಬ ಕಾರಣಕ್ಕೆ ಮೊದಲೆರಡು ಟೆಸ್ಟ್ ಪಂದ್ಯದಿಂದ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಟ್ಟು ರವೀಂದ್ರ ಜಡೇಜಾಗೆ ಆಡುವ ಅವಕಾಶವನ್ನು ನೀಡಲಾಗಿತ್ತು. ಅದೇ ರೀತಿ ಇದೀಗ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾರನ್ನು ತಂಡದಿಂದ ಹೊರಗಿಟ್ಟು ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಅವಕಾಶವನ್ನು ನೀಡುವ ಸಾಧ್ಯತೆಗಳು ಹೆಚ್ಚಿವೆ.

ಜಡೇಜಾರನ್ನು ತಂಡದಿಂದ ಹೊರ ಹಾಕಲು ಇದೆ ಬಲಿಷ್ಠ ಕಾರಣ

ಜಡೇಜಾರನ್ನು ತಂಡದಿಂದ ಹೊರ ಹಾಕಲು ಇದೆ ಬಲಿಷ್ಠ ಕಾರಣ

ಟೀಮ್ ಇಂಡಿಯಾಗೆ ರವೀಂದ್ರ ಜಡೇಜಾರನ್ನು ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗಿಡುವುದಕ್ಕೆ ಬಲಿಷ್ಠ ಕಾರಣವೊಂದಿದೆ. ಇಂಗ್ಲೆಂಡ್ ವಿರುದ್ಧದ ಮೊದಲನೇ ಮತ್ತು ಎರಡನೇ ಟೆಸ್ಟ್ ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದ ರವೀಂದ್ರ ಜಡೇಜಾ ಒಂದು ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿ ಮಿಂಚಿದರು ಆದರೆ, ಬೌಲಿಂಗ್ ವಿಭಾಗದಲ್ಲಿ ಜಡೇಜಾ ಅಕ್ಷರಶಃ ಸೋತಿದ್ದಾರೆ. ಹೌದು ಎರಡೂ ಪಂದ್ಯಗಳ ಪೈಕಿ 44 ಓವರ್ ಬೌಲಿಂಗ್ ಮಾಡಿರುವ ರವೀಂದ್ರ ಜಡೇಜಾ ಯಾವುದೇ ವಿಕೆಟ್ ಪಡೆಯದೇ ನಿರಾಸೆ ಮೂಡಿಸಿದ್ದಾರೆ. ಹೀಗಾಗಿ ಇದೊಂದು ಕಾರಣವನ್ನಿಟ್ಟುಕೊಂಡು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಿಂದ ರವೀಂದ್ರ ಜಡೇಜಾ ಅವರನ್ನು ಕೈಬಿಡುವ ಸಾಧ್ಯತೆಯಿದೆ.

ಅಶ್ವಿನ್ ತಂಡದಲ್ಲಿರಬೇಕು ಎಂಬ ಕೂಗು ಜೋರಾಗಿತ್ತು

ಅಶ್ವಿನ್ ತಂಡದಲ್ಲಿರಬೇಕು ಎಂಬ ಕೂಗು ಜೋರಾಗಿತ್ತು

ರವಿಚಂದ್ರನ್ ಅಶ್ವಿನ್ ಅವರನ್ನು ಮೊದಲೆರಡು ಪಂದ್ಯಗಳಲ್ಲಿ ತಂಡಕ್ಕೆ ಸೇರಿಸಿಕೊಳ್ಳದೇ ಕೈಬಿಟ್ಟಿದ್ದರ ಕುರಿತು ಭಾರತದ ಕ್ರೀಡಾಭಿಮಾನಿಗಳು ದೊಡ್ಡ ಮಟ್ಟದಲ್ಲಿಯೇ ಬೇಸರವನ್ನು ವ್ಯಕ್ತಪಡಿಸಿದ್ದರು. ಇಂಗ್ಲೆಂಡ್ ಪಿಚ್‌ಗಳಲ್ಲಿ ರವಿಚಂದ್ರನ್ ಅಶ್ವಿನ್ ವಿಕೆಟ್ ತೆಗೆಯಬಲ್ಲ ಬೌಲರ್ ಆಗಿದ್ದು ಇಂತಹ ಆಟಗಾರನನ್ನು ತಂಡದಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ನೆಟ್ಟಿಗರು ಮತ್ತು ಕ್ರಿಕೆಟ್ ಅಭಿಮಾನಿಗಳು ವಿರಾಟ್ ಕೊಹ್ಲಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೆ ರವಿಚಂದ್ರನ್ ಅಶ್ವಿನ್ ಅವರಿಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಅವಕಾಶ ನೀಡಲೇಬೇಕು ಎಂದು ಹಲವಾರು ಕ್ರೀಡಾ ಪಂಡಿತರು ಮತ್ತು ಮಾಜಿ ಆಟಗಾರರೂ ಸಹ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು.

Story first published: Saturday, August 21, 2021, 22:39 [IST]
Other articles published on Aug 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X