IND vs ENG: ಇಂಗ್ಲೆಂಡ್ ವಿರುದ್ಧ ಭಾರತ ಎ ತಂಡದಲ್ಲಿ ಸ್ಥಾನ ಪಡೆದ ಸ್ಫೋಟಕ ದಾಂಡಿಗ ರಿಂಕು ಸಿಂಗ್
ಬುಧವಾರ, ಜನವರಿ 24ರಿಂದ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯಕ್ಕಾಗಿ ವೈಟ್ ಬಾಲ್ ಸ್ಪೆಷಲಿಸ್ಟ್ ಬ್ಯಾಟರ್ ರಿಂಕು ಸಿಂಗ್ ಅವರನ್ನು ಮಂಗಳವಾರ ಭಾರತ ಎ ತಂಡಕ್ಕೆ ಆಯ್ಕೆ ಮಾಡಲಾಗಿದೆ.
ಮಧ್ಯಮ ಕ್ರಮಾಂಕದ ಹೊಡಿಬಡಿ ದಾಂಡಿಗ ಟಿ20 ಸ್ವರೂಪದಲ್ಲಿ ಅವರ ಫಿನಿಶಿಂಗ್ ಆಟಕ್ಕೆ ಹೆಸರುವಾಸಿಯಾಗಿದ್ದಾರೆ. ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಭಾರತಕ್ಕಾಗಿ ತಮ್ಮ ಏಕದಿನ ಚೊಚ್ಚಲ ಪಂದ್ಯವನ್ನು ಆಡಿದರು. ಅಲ್ಲಿ ಅವರು 17 ಮತ್ತು 38 ರನ್ ಗಳಿಸಿ ಎರಡು ಪಂದ್ಯಗಳನ್ನು ಆಡಿದ್ದರು.

ಉತ್ತರಪ್ರದೇಶದ ಎಡಗೈ ಬ್ಯಾಟರ್ ರಿಂಕು ಸಿಂಗ್ ಈವರೆಗೆ 44 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 57.57ರ ಸರಾಸರಿಯಲ್ಲಿ 3109 ರನ್ ಗಳಿಸಿದ್ದಾರೆ. ಕಳೆದ ವಾರ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೊದಲ ನಾಲ್ಕು ದಿನಗಳ ಪಂದ್ಯವನ್ನು ಭಾರತ ಎ ತಂಡ ಡ್ರಾ ಮಾಡಿಕೊಂಡಿತ್ತು.
ಇಂಗ್ಲೆಂಡ್ ಲಯನ್ಸ್ ವಿರುದ್ಧ ಭಾರತ ಎ ತಂಡ
ಅಭಿಮನ್ಯು ಈಶ್ವರನ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ತಿಲಕ್ ವರ್ಮಾ, ಕುಮಾರ್ ಕುಶಾಗ್ರ, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್, ಅರ್ಶ್‌ದೀಪ್ ಸಿಂಗ್, ತುಷಾರ್ ದೇಶಪಾಂಡೆ, ವಿದ್ವತ್ ಕಾವೇರಪ್ಪ, ಉಪೇಂದ್ರ ಯಾದವ್, ಆಕಾಶ್ ದೀಪ್, ಯಶ್ ದಯಾಳ್, ರಿಂಕು ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications