ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs ENG: ಟಿ20 ವಿಶ್ವಕಪ್ ಸೆಮಿಸ್‌ನಲ್ಲಿ ರೋಹಿತ್, ಕೊಹ್ಲಿಗಿದೆ ದೊಡ್ಡ ದಾಖಲೆ ನಿರ್ಮಿಸುವ ಅವಕಾಶ

IND vs ENG: Rohit Sharma And Virat Kohli Have A Chance To Create A Big Record In World Cup Knockout Stages

ಐಸಿಸಿ ಪುರುಷರ ಟಿ20 ವಿಶ್ವಕಪ್ 2022ರ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಇಂದು(ಗುರುವಾರ, ನವೆಂಬರ್ 10) ಅಡಿಲೇಡ್ ಓವಲ್‌ನಲ್ಲಿ ನಿರ್ಣಾಯಕ ಪಂದ್ಯವನ್ನು ಆಡಲಿದೆ.

ಅಡಿಲೇಡ್‌ ಓವಲ್‌ನಲ್ಲಿ ನಡೆದ ತಮ್ಮ ಕೊನೆಯ ಸೂಪರ್ 12 ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ರೋಹಿತ್ ಶರ್ಮಾ ತಂಡವು ಮಳೆ-ಬಾಧಿತ ಪಂದ್ಯದಲ್ಲಿ ಗೆದ್ದು ಬೀಗಿತ್ತು.

IND vs ENG: ಸೆಮಿಫೈನಲ್‌ನಲ್ಲಿ ಹೇಗಿರಲಿದೆ ಭಾರತದ ಆಡುವ 11ರ ಬಳಗ; ಪಂತ್ or ಕಾರ್ತಿಕ್?IND vs ENG: ಸೆಮಿಫೈನಲ್‌ನಲ್ಲಿ ಹೇಗಿರಲಿದೆ ಭಾರತದ ಆಡುವ 11ರ ಬಳಗ; ಪಂತ್ or ಕಾರ್ತಿಕ್?

ಇನ್ನು ವಿರಾಟ್ ಕೊಹ್ಲಿಗೆ ಅಡಿಲೇಡ್ ಓವಲ್ ಅತ್ಯಂತ ನೆಚ್ಚಿನ ಮೈದಾನವಾಗಿದ್ದು, ಈವರೆಗೆ ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯಗಳಲ್ಲಿ ಭಾರತ ತಂಡಕ್ಕೆ ದೊಡ್ಡ ರನ್ ಗಳಿಸಿದವರಲ್ಲಿ ಒಬ್ಬರಾಗಿದ್ದಾರೆ. ಐಸಿಸಿ ಟೂರ್ನಿಗಳ ನಾಕೌಟ್ (ಸೆಮಿಫೈನಲ್-ಫೈನಲ್) ಹಂತಗಳಲ್ಲಿ ಅತ್ಯುತ್ತಮ ಪ್ರದರ್ಶನದ ವಿಷಯದಲ್ಲಿ ವಿರಾಟ್ ಕೊಹ್ಲಿಗಿಂತ ರೋಹಿತ್ ಶರ್ಮಾ ಹಿಂದೆ ಉಳಿದಿಲ್ಲ.

ಸಚಿನ್ ತೆಂಡೂಲ್ಕರ್ 15 ಪಂದ್ಯಗಳಲ್ಲಿ 657 ರನ್‌

ಸಚಿನ್ ತೆಂಡೂಲ್ಕರ್ 15 ಪಂದ್ಯಗಳಲ್ಲಿ 657 ರನ್‌

ನವೆಂಬರ್ 10, ಗುರುವಾರದಂದು ಅಡಿಲೇಡ್ ಓವಲ್‌ನಲ್ಲಿ ನಡೆಯುವ ಹೈ-ವೋಲ್ಟೇಜ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ತಮ್ಮ ಬ್ಯಾಟಿಂಗ್ ಸೂಪರ್‌ಸ್ಟಾರ್‌ಗಳು ಫಾರ್ಮ್‌ಗೆ ಬರುತ್ತಾರೆ ಎಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮತ್ತು ತಂಡದ ಮ್ಯಾನೇಜ್‌ಮೆಂಟ್ ಆಶಿಸುತ್ತಿದೆ.

ಭಾರತದ ಲೆಜೆಂಡರಿ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ನಿರೀಕ್ಷೆಯಂತೆ ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯಗಳಲ್ಲಿ ಆಡಿರುವ 15 ಪಂದ್ಯಗಳಲ್ಲಿ 50ಕ್ಕಿಂತ ಹೆಚ್ಚು ಸರಾಸರಿಯಲ್ಲಿ 657 ರನ್‌ಗಳನ್ನು ಗಳಿಸುವ ಮೂಲಕ ಭಾರತದ ಸ್ಕೋರಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಐಸಿಸಿ ಟೂರ್ನಿಗಳ ನಾಕೌಟ್ ಪಂದ್ಯಗಳೆಂದರೆ, ವಿಶ್ವಕಪ್ ಕ್ವಾರ್ಟರ್ ಫೈನಲ್, ಸೆಮಿಫೈನಲ್ ಮತ್ತು ಫೈನಲ್‌ಗಳು ಪಂದ್ಯಗಳು, ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅನ್ನು ಕೂಡ ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅಬ್ಬರಿಸಿ ತಂಡವನ್ನು ಗೆಲ್ಲಿಸಿ, ಫೈನಲ್‌ನಲ್ಲಿ ಅದೇ ಫಾರ್ಮ್ ಮರುಕಳಿಸಿದರೆ ದೊಡ್ಡ ದಾಖಲೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ.

ವಿರಾಟ್ ಕೊಹ್ಲಿ 15 ಪಂದ್ಯಗಳಲ್ಲಿ 570 ರನ್

ವಿರಾಟ್ ಕೊಹ್ಲಿ 15 ಪಂದ್ಯಗಳಲ್ಲಿ 570 ರನ್

ಸದ್ಯ ಕ್ರಿಕೆಟ್ ಕ್ರಿಕೆಟ್ ಆಡುತ್ತಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 15 ಮತ್ತು 13 ಪಂದ್ಯಗಳಲ್ಲಿ ಕ್ರಮವಾಗಿ 570 ಮತ್ತು 535 ರನ್‌ಗಳೊಂದಿಗೆ ಸ್ಪರ್ಧೆಯಲ್ಲಿದ್ದಾರೆ. ವಾಸ್ತವವಾಗಿ ವಿಶ್ವಕಪ್ ನಾಕೌಟ್ ಪಂದ್ಯಗಳಲ್ಲಿ ಶತಕ ಬಾರಿಸಿರುವ, ಪ್ರಸ್ತುತ ತಂಡದಲ್ಲಿರುವ ಏಕೈಕ ಭಾರತೀಯ ಬ್ಯಾಟರ್ ಅಂದರೆ ರೋಹಿತ್ ಶರ್ಮಾ. ಹೀಗಾಗಿ ಮಾಜಿ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿಹಾಕುವ ಅವಕಾಶ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗಿದೆ.

ಈ ಎಲ್ಲಾ ಅಂಕಿಸಂಖ್ಯೆಗಳು ದೊಡ್ಡ ಪಂದ್ಯದಲ್ಲಿ ಇಬ್ಬರು ಸ್ಟಾರ್ ಬ್ಯಾಟರ್‌ಗಳು ಅಬ್ಬರಿಸುವ ಸೂಚನೆ ನೀಡುತ್ತಿವೆ. ಆದರೆ ಐಸಿಸಿ ಟೂರ್ನಿಗಳ ಹೆಚ್ಚಿನ ಒತ್ತಡದ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರ ಇತ್ತೀಚಿನ ದಾಖಲೆಯು ಕಳವಳಕ್ಕೆ ಕಾರಣವಾಗಿದೆ. ಭಾರತದ ಅಗ್ರ ಕ್ರಮಾಂಕವು ನಾಕೌಟ್ ಪಂದ್ಯಗಳಲ್ಲಿ ತನ್ನ ಖ್ಯಾತಿಯನ್ನು ಉಳಿಸಿಕೊಳ್ಳಲು ವಿಫಲವಾಗಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಇತಿಹಾಸ ಮರುಕಳಿಸುವ ಸಾಧ್ಯತೆ ಇದೆ.

ಇತ್ತೀಚಿನ ದೊಡ್ಡ ಪಂದ್ಯಗಳ ದುರಂತಗಳು

ಇತ್ತೀಚಿನ ದೊಡ್ಡ ಪಂದ್ಯಗಳ ದುರಂತಗಳು

2019ರ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮ್ಯಾಂಚೆಸ್ಟರ್‌ನಲ್ಲಿ ಮಳೆ-ಬಾಧಿತ ದಿನದಂದು ಭಾರತ 240 ರನ್ ಬೆನ್ನಟ್ಟಿತ್ತು. ಫೈನಲ್‌ನಲ್ಲಿ ಸ್ಥಾನ ಕಾಯ್ದಿರಿಸಲು ಭಾರತಕ್ಕೆ ಇದು ಉತ್ತಮ ಅವಕಾಶವಾಗಿತ್ತು. ಆದರೆ ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕೈಕೊಟ್ಟಿದ್ದರಿಂದ ತಂಡ ನಿರಾಸೆಯಿಂದ ತವರಿಗೆ ಮರಳಿತು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ತಲಾ 1 ರನ್ ಗಳಿಸಿ ಔಟಾದರು. ರವೀಂದ್ರ ಜಡೇಜಾ ಮತ್ತು ಎಂಎಸ್ ಧೋನಿಯ ಪ್ರಯತ್ನವೂ ಸಾಕಾಗಲಿಲ್ಲ, ಏಕೆಂದರೆ ಅಗ್ರ ಕ್ರಮಾಂಕದ ವೈಫಲ್ಯದಿಂದ ಭಾರತವು ತುಂಬಾ ಹಿನ್ನಡೆ ಅನುಭವಿಸಿತ್ತು.

2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಪಾಕ್ ಎದುರು ಸೋಲು

2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಪಾಕ್ ಎದುರು ಸೋಲು

2021ರಲ್ಲಿ ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ರೋಹಿತ್ ಶರ್ಮಾ 34 ಮತ್ತು 30 ರನ್ ಗಳಿಸಿದರೆ, ನಾಯಕನಾಗಿದ್ದ ವಿರಾಟ್ ಕೊಹ್ಲಿ 44 ಮತ್ತು 13 ರನ್‌ಗಳಿಗೆ ಔಟಾದರು. ಭಾರತವು ಸೌತಾಂಪ್ಟನ್‌ನಲ್ಲಿ ನಡೆದ ದೊಡ್ಡ ಫೈನಲ್‌ನಲ್ಲಿ 8 ವಿಕೆಟ್‌ಗಳಿಂದ ಸೋತಿತು.

2017ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತದ ಅಗ್ರ ಕ್ರಮಾಂಕವು ಪಾಕಿಸ್ತಾನದ ಬಿಗಿ ಬೌಲಿಂಗ್ ದಾಳಿ ಎದುರಿಸಲು ವಿಫಲವಾಯಿತು. ಲಂಡನ್‌ನ ಓವಲ್‌ನಲ್ಲಿ ಭಾರತ ತಂಡವು 339 ರನ್‌ಗಳ ಗುರಿ ಬೆನ್ನತ್ತಿ 151 ರನ್‌ಗಳ ಅಂತರದಿಂದ ಸೋತಿದ್ದ ಪಂದ್ಯದಲ್ಲಿ ರೋಹಿತ್ ಶರ್ಮಾ ಸೊನ್ನೆ ಸುತ್ತಿದರೆ, ವಿರಾಟ್ ಕೊಹ್ಲಿ ಕೇವಲ 5 ರನ್ ಗಳಿಸಿದರು. ಆದರೆ ಇಂದಿನ ಪಂದ್ಯದಲ್ಲಿ ಈ ಇಬ್ಬರೂ ದಿಗ್ಗಜ ಬ್ಯಾಟರ್‌ಗಳ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಇದೆ.

Story first published: Thursday, November 10, 2022, 11:37 [IST]
Other articles published on Nov 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X