ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಲಾರ್ಡ್ಸ ಪಂದ್ಯಕ್ಕೆ ಸಾಕ್ಷಿಯಾಗಿದ್ದಾರೆ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಲಾರ್ಡ್ಸ್ ಕ್ರೀಡಾಂಗಣದಲ್ಲಿ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಎರಡನೇ ಪಂದ್ಯವನ್ನೂ ಗೆದ್ದು ಏಕದಿನ ಸರಣಿಯನ್ನು ವಶಕ್ಕೆ ಪಡೆಯಲು ಭಾರತ ಸಿದ್ಧವಾಗಿದೆ. ಈ ಪಂದ್ಯವನ್ನು ಭಾರತದ ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಕ್ರೀಡಾಂಗಣದಲ್ಲೇ ಇದ್ದು ವೀಕ್ಷಿಸುತ್ತಿದ್ದಾರೆ.

2002ರಲ್ಲಿ ನಡೆದಿದ್ದ ನಾಟ್‌ವೆಸ್ಟ್ ಸರಣಿಯ ಫೈನಲ್ ಪಂದ್ಯದಲ್ಲಿ ಭಾರತ ಐತಿಹಾಸಿಕ ಗೆಲುವು ಸಾಧಿಸಿ ಇಂದಿಗೆ ಭರ್ತಿ 20 ವರ್ಷಗಳಾಗಿದೆ. ಇದೀಗ ಎರಡು ದಶಕದ ಬಳಿಕ ಅದೇ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ದಿಗ್ಗಜ ಕ್ರಿಕೆಟಿಗರು ಈ ಪಂದ್ಯಕ್ಕೆ ಸಾಕ್ಷಿಯಾಗುತ್ತಿದ್ದಾರೆ. ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹೊರತುಪಡಿಸಿ ಸುರೇಶ್ ರೈನಾ, ಹರ್ಭಜನ್ ಸಿಂಗ್ ಕೂಡ ಈ ಪಂದ್ಯಕ್ಕೆ ಸಾಕ್ಷಿಯಾಗಿದ್ದಾರೆ.

ಐಪಿಎಲ್ ಆಡಿದ್ದು ಪ್ಲಸ್ ಪಾಯಿಂಟ್; ಈ ತಂಡವೇ ಟಿ20 ವಿಶ್ವಕಪ್‌ ಗೆಲ್ಲುತ್ತೆ ಎಂದು ಭವಿಷ್ಯ ನುಡಿದ ಮೈಕೆಲ್ ವಾನ್ಐಪಿಎಲ್ ಆಡಿದ್ದು ಪ್ಲಸ್ ಪಾಯಿಂಟ್; ಈ ತಂಡವೇ ಟಿ20 ವಿಶ್ವಕಪ್‌ ಗೆಲ್ಲುತ್ತೆ ಎಂದು ಭವಿಷ್ಯ ನುಡಿದ ಮೈಕೆಲ್ ವಾನ್

326 ರನ್‌ಗಳ ಗುರಿ ನೀಡಿದ್ದ ಇಂಗ್ಲೆಂಡ್

2002ರಲ್ಲಿ ನಡೆದಿದ್ದ ನಾಟ್‌ವೆಸ್ಟ್ ಸರಣಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ಭರ್ಜರಿ 325 ರನ್ ಬಾರಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ್ದ ಭಾರತಕ್ಕೆ ಶತಕದ ಜೊತೆಯಾಟದ ಮೂಲಕ ಉತ್ತಮ ಆರಂಭ ದೊರೆತಿತ್ತು. ಆದರೆ ನಂತರ ಮಧ್ಯಮ ಕ್ರಮಾಂಕ ವೈಫಲ್ಯ ಅನುಭವಿಸಿದ ಕಾರಣ ಸೋಲಿನ ಸನಿಹಕ್ಕೆ ತಲುಪಿತ್ತು. ಆದರೆ ಕೆಳ ಕ್ರಮಾಂಕದಲ್ಲಿ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಅಮೋಘ ಪ್ರದರ್ಶನ ನೀಡುವ ಮೂಲಕ ಭಾರತ ತಂಡದ ಗೆಲುವಿಗೆ ಕಾರಣವಾಗಿದ್ದರು. ಕ್ರಿಕೆಟ್ ಇತಿಹಾಸದಲ್ಲಿ ಭಾರತ ಕಂಡ ಶ್ರೇಷ್ಟ ಗೆಲುವುಗಳಲ್ಲಿ ಇದು ಕೂಡ ಒಂದಾಗಿದೆ.

Breaking: IND vs WI; ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

ಲಾರ್ಡ್ಸ್ ಅಂಗಳದಲ್ಲಿ ಸರಣಿ ಗೆಲುವಿನತ್ತ ಭಾರತ ಚಿತ್ತ

ಲಾರ್ಡ್ಸ್ ಅಂಗಳದಲ್ಲಿ ಸರಣಿ ಗೆಲುವಿನತ್ತ ಭಾರತ ಚಿತ್ತ

ಇದೀಗ ಭಾರತ ಮತ್ತೊಮ್ಮೆ ಲಾರ್ಡ್ಸ್ ಅಂಗಳದಲ್ಲಿ ಇಂಗ್ಲೆಂಡ್ ತಂಡವನ್ನು ಎದುರಿಸುತ್ತಿದೆ. ಈಗಾಗಲೇ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಭಾರತ ಲಾರ್ಡ್ಸ್ ಮೈದಾನಲದಲ್ಲಿ ನಡೆಯುತ್ತಿರುವ ಈ ಪಂದ್ಯವನ್ನು ಗೆದ್ದರೆ ಸರಣಿಯನ್ನು ತನ್ನ ವಶಕ್ಕೆ ಪಡೆದಂತಾಗುತ್ತದೆ. ಎರಡನೇ ಪಂದ್ಯದಲ್ಲಿಯೂ ಬೌಲಿಂಗ್‌ಲಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತ ಇಂಗ್ಲೆಂಡ್ ದಾಂಡಿಗರಿಗೆ ಸವಾಲಾಗಿದೆ. ಇನ್ನು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಅಮೋಘ ಗೆಲುವು ಸಾಧಿಸಿತ್ತು. ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಶಮಿ ಮಾರಕ ದಾಳಿಗೆ ನಲುಗಿದ್ದ ಇಂಗ್ಲೆಂಡ್ ಕೇವಲ 110 ರನ್ ಮಾತ್ರವೇ ಗಳಿಸಿತ್ತು. ಇದನ್ನು ಬೆನ್ನಟ್ಟಿದ ಭಾರತ ಯಾವಿದೇ ವಿಕೆಟ್ ಕಳೆದುಕೊಳ್ಳದೆ 10 ವಿಕೆಟ್‌ಗಳ ಅಂತರದಿಂದ ಪಂದ್ಯವನ್ನು ಗೆದ್ದುಕೊಂಡಿತ್ತು.

ಎರಡನೇ ಪಂದ್ಯದಲ್ಲಿ ಆಡುತ್ತಿದ್ದಾರೆ ಕೊಹ್ಲಿ

ಎರಡನೇ ಪಂದ್ಯದಲ್ಲಿ ಆಡುತ್ತಿದ್ದಾರೆ ಕೊಹ್ಲಿ

ಗಾಯದ ಕಾರಣದಿಂದಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ತೊಡೆ ನೋವಿಗೆ ಒಳಗಾಗಿದ್ದ ಕೊಹ್ಲಿ ಎರಡನೇ ಪಂದ್ಯಕ್ಕೂ ಅಲಭ್ಯವಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಭಾರತ ತಂಡದ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಅಭಿಮಾನಿಗಳಿಗೆ ಕಾಡುತ್ತಿದ್ದ ಪ್ರಶ್ನೆಗಳಿಗೆ ಉತ್ತರ ದೊರೆದಂತಾಗಿದೆ.

West Indies ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ | *Cricket | OneIndia Kannada
ಭಾರತ ಆಡುವ ಬಳಗ

ಭಾರತ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

ಬೆಂಚ್: ಅಕ್ಷರ್ ಪಟೇಲ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಶ್ರೇಯಸ್ ಐಯ್ಯರ್, ಶಾರ್ದೂಲ್ ಠಾಕೂರ್

ಇಂಗ್ಲೆಂಡ್: ಜೇಸನ್ ರಾಯ್, ಜಾನಿ ಬೈರ್‌ಸ್ಟೋ, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್(ನಾಯಕ, ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರೇಗ್ ಓವರ್‌ಟನ್, ಡೇವಿಡ್ ವಿಲ್ಲಿ, ಬ್ರೈಡನ್ ಕಾರ್ಸೆ, ರೀಸ್ ಟೋಪ್ಲಿ

ಬೆಂಚ್: ಮ್ಯಾಥ್ಯೂ ಪಾರ್ಕಿನ್ಸನ್, ಸ್ಯಾಮ್ ಕರಾನ್, ಫಿಲಿಪ್ ಸಾಲ್ಟ್, ಹ್ಯಾರಿ ಬ್ರೂಕ್

Story first published: Friday, July 15, 2022, 10:08 [IST]
Other articles published on Jul 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X