IND vs ENG: ಇಲ್ಲಿದೆ ವಾಂಖೆಡೆ ಮೈದಾನದ ಸಂಪೂರ್ಣ ಅಂಕಿ ಅಂಶ
ಟಿ20 ವಿಶ್ವಕಪ್ ಪಂದ್ಯದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ ವಿರುದ್ಧ ಕಾದಾಟ ನಡೆಸಲಿದೆ. ಈ ಪಂದ್ಯಕ್ಕಾಗಿ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ. ಹಲವು ಐತಿಹಾಸಿಕ ಪಂದ್ಯಗಳಿಗೆ ಸಾಕ್ಷಿಯಾಗಿರುವ ಅಂಗಳದಲ್ಲಿ ಹೈವೋಲ್ಟೇಜ್ ಫೈಟ್ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸತತ ಎರಡನೇ ಬಾರಿಗೆ ಫೈನಲ್‌ಗೆ ಪ್ರವೇಶಿಸುವ ಕನಸು ಭಾರತ ತಂಡದ್ದಾಗಿದೆ. ವಾಂಖೆಡೆ ಅಂಗಳದಲ್ಲಿ ಅಂಕಿ ಅಂಶಗಳು ಏನು ಹೇಳುತ್ತವೆ. ಇಲ್ಲಿದೆ ವರದಿ.
ಟೀಮ್ ಇಂಡಿಯಾ ಸೂಪರ್ 8 ಹಂತದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದಾಖಲೆಯ ಮೊತ್ತವನ್ನು ಚೇಸ್ ಮಾಡಿ ಆತ್ಮವಿಶ್ವಾಸದಿಂದ ಸೆಮಿಫೈನಲ್ ಪ್ರವೇಶಿಸಿದೆ. ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಸಂಘಟಿತ ಆಟದ ಪ್ರದರ್ಶನ ನೀಡಿ ವಿಂಡೀಸ್ ತಂಡವನ್ನು ಮಣಿಸಿದೆ. ಈಗ ಗುರುವಾರ ನಡೆಯಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ ವಿರುದ್ಧ ಕಾದಾಟವನ್ನು ನಡೆಸಲಿದೆ.

ಟೀಮ್ ಇಂಡಿಯಾಕ್ಕೆ ವಾಂಖೆಡೆ ಮೈದಾನ ಲಕ್ಕಿ ಆಗಿದೆ. ಈ ಮೈದಾನದಲ್ಲಿ ಸುಮಾರು 10 ವರ್ಷಗಳಿಂದ ಭಾರತ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದ್ದರಿಂದ ದೊಡ್ಡ ಮೊತ್ತವನ್ನು ಈ ಮೈದಾನದಲ್ಲಿ ನೋಡಬಹುದಾಗಿದೆ. ಈ ಮೈದಾನದಲ್ಲಿ ಈಗಾಗಲೇ 13 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಿದೆ. ಈ ವೇಳೆ 6 ಬಾರಿ 200ಕ್ಕೂ ಹೆಚ್ಚು ರನ್‌ಗಳು ದಾಖಲಾಗಿವೆ. ಭಾರತವೂ ಸಹ ಈ ಮೈದಾನದಲ್ಲಿ 2 ಬಾರಿ 200ಕ್ಕೂ ಹೆಚ್ಚು ದಾಖಲಿಸಿದೆ.
ಈ ಮೈದಾನದಲ್ಲಿ ದಾಖಲಾದ ಗರಿಷ್ಠ ಮೊತ್ತ ಎಷ್ಟು?
ಇದೇ ವಿಶ್ವಕಪ್‌ನಲ್ಲಿ ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ 254 ರನ್ ಗಳಿಸಿದ್ದೇ ಗರಿಷ್ಠ ಮೊತ್ತವಾಗಿದೆ.
ಮೊದಲು ಬ್ಯಾಟಿಂಗ್ ಮಾಡಿದ ತಂಡ ಎಷ್ಟು ಪಂದ್ಯಗಳನ್ನು ಗೆದ್ದಿದೆ?
ವಾಂಖೆಡೆ ಮೈದಾನದಲ್ಲಿ ನಡೆದಿರುವ 13 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ 7 ಪಂದ್ಯಗಳನ್ನು ಗೆದ್ದರೆ, ಚೇಸ್ ಮಾಡಿದ ತಂಡ 6 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಈ ಮೈದಾನದಲ್ಲಿ ಅತಿ ಹೆಚ್ಚು ರನ್ ಬಾರಿಸಿದ್ದು ಯಾರು?
ವಾಂಖೆಡೆ ಮೈದಾನದಲ್ಲಿ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಬಾರಿಸಿದ್ದಾರೆ. ಇವರು ಆಡಿದ ಮೂರು ಟಿ20 ಪಂದ್ಯಗಳಲ್ಲಿ 197 ರನ್ ಸಿಡಿಸಿದ್ದಾರೆ. ಈ ವೇಳೆ 2 ಅರ್ಧಶತಕಗಳು ಸೇರಿವೆ.
ವಾಂಖೆಡೆ ಮೈದಾನದಲ್ಲಿ ಭಾರತದ ದಾಖಲೆ ಹೇಗೆದೆ?
ಭಾರತ ಒಟ್ಟು ಈ ಮೈದಾನದಲ್ಲಿ 7 ಪಂದ್ಯಗಳನ್ನು ಆಡಿದ್ದು, 5 ರಲ್ಲಿ ಜಯ ಸಾಧಿಸಿದೆ.
ಮುಂಬೈನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ್ದು ಯಾರು?
ಈ ಮೈದಾನದಲ್ಲಿ ವೆಸ್ಟ್ ಇಂಡೀಸ್ ತಂಡದ ಶಿಮ್ರೋನ್ ಹೆಟ್ಮೆಯರ್ ಆಡಿದ 4 ಪಂದ್ಯಗಳಲ್ಲಿ 16 ಸಿಕ್ಸರ್ ಸಿಡಿಸಿದ್ದಾರೆ.
ವಾಂಖೆಡೆಯಲ್ಲಿ ದಾಖಲಾದ ಕನಿಷ್ಠ ಸ್ಕೋರ್ ಎಷ್ಟು?
ಫೆಬ್ರವರಿ 2, 2025ರಲ್ಲಿ ಇಂಗ್ಲೆಂಡ್ ಈ ಮೈದಾನದಲ್ಲಿ 97 ರನ್ ಬಾರಿಸಿದ್ದೇ ಕನಿಷ್ಠ ಸ್ಕೋರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications