IND v ENG Semifinal: ಮುಂಬೈನಲ್ಲಿ ನಿರ್ಮಾಣವಾದ ಟಾಪ್ 5 ದಾಖಲೆಗಳು
ಟೀಮ್ ಇಂಡಿಯಾ ಮೂರನೇ ಟಿ20 ವಿಶ್ವಕಪ್ ಪ್ರಶಸ್ತಿಯತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಮುಂಬೈನಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಪಡೆ ಅಮೋಘ ಪ್ರದರ್ಶನ ನೀಡಿ ಫೈನಲ್‌ಗೆ ಅರ್ಹತೆ ಪಡೆದಿದೆ. ಭಾರೀ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ಟೀಮ್ ಇಂಡಿಯಾ 254 ರನ್‌ಗಳನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಸಫಲವಾಗಿದೆ.
ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 253 ರನ್ ಕಲೆ ಹಾಕಿತು. ಸಂಜು ಸ್ಯಾಮ್ಸನ್ ಮತ್ತೆ ತಂಡಕ್ಕೆ ಆಧಾರವಾದರು. ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡದ ಪರ ಜಾಕಬ್ ಬೆಥೆಲ್ ಅಮೋಘ ಬ್ಯಾಟಿಂಗ್ ನಡೆಸಿದರೂ ಸಹ ತಂಡಕ್ಕೆ ಗೆಲುವಿನ ಮಾಲೆ ತೊಡಿಸಲಿಲ್ಲ. ಇಂಗ್ಲೆಂಡ್ ಸವಾಲಿನ ಮೊತ್ತವನ್ನು ಚೇಸ್ ಮಾಡುವಲ್ಲಿ ವಿಫಲವಾಗಿ 7 ರನ್‌ಗಳ ವಿರೋಚಿತ ಸೋಲು ಕಂಡಿತು. ಈ ಪಂದ್ಯ ದಾಖಲೆಯ ಪುಟಕ್ಕೆ ಎಂಟ್ರಿ ನೀಡಿದೆ. ಸೆಮಿಫೈನಲ್ ಪಂದ್ಯದಲ್ಲಿ ದಾಖಲಾದ 5 ದೊಡ್ಡ ದಾಖಲೆಗಳ ಬಗ್ಗೆ ವರದಿ ಇಲ್ಲಿದೆ.

ಟಿ20 ವಿಶ್ವಕಪ್ ಪಂದ್ಯದಲ್ಲಿ ಅತಿ ಹೆಚ್ಚು ರನ್
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಒಟ್ಟು 499 ರನ್‌ಗಳು ದಾಖಲಾದವು. ಟಿ20 ವಿಶ್ವಕಪ್ ಇತಿಹಾಸದಲ್ಲಿ ಇದು ಒಂದು ಪಂದ್ಯದಲ್ಲಿ ಗಳಿಸಿದ ಅತ್ಯಧಿಕ ರನ್‌ಗಳ ಸಂಖ್ಯೆ ಇದಾಗಿದೆ. ಇದಕ್ಕೂ ಮೊದಲು ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು 2016 ರಲ್ಲಿ 459 ರನ್ ಗಳಿಸಿದ್ದವು.
ಬೆಥೆಲ್ ಅವರ ವಿಶ್ವ ದಾಖಲೆ
ಟಿ20 ವಿಶ್ವಕಪ್ ಇತಿಹಾಸದಲ್ಲಿ ಇಂಗ್ಲೆಂಡ್ ಪರ ಯಾವೊಬ್ಬ ಬ್ಯಾಟರ್ ಮಾಡದ ಸಾಧನೆಯನ್ನು ಜಾಕಬ್ ಬೆಥೆಲ್ ಮಾಡಿದರು. ಇವರು ಸವಾಲಿನ ಮೊತ್ತವನ್ನು ಹಿಂಬಾಲಿಸುವಾಗ ಜಸ್ಟ್ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಮಿಂಚಿದರೆ, 45 ಎಸೆತಗಳಲ್ಲಿ ಶತಕ ಬಾರಿಸಿ ಆರ್ಭಟಿಸಿದರು. ಇದು ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಪರ ಅತ್ಯಂತ ವೇಗದ ಅರ್ಧಶತಕವಾಗಿದೆ.
34 ಸಿಕ್ಸರ್ ದಾಖಲೆ
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಒಟ್ಟು 34 ಸಿಕ್ಸರ್‌ಗಳನ್ನು ಬಾರಿಸಿದವು. ಇದರಲ್ಲಿ ಭಾರತ 19, ಇಂಗ್ಲೆಂಡ್ 15 ಸಿಕ್ಸರ್ ಸಿಡಿಸಿದವು. ಈ ಮೂಲಕ ದಾಖಲೆ ನಿರ್ಮಿಸಿದವು. ಇದಕ್ಕೂ ಮೊದಲು ಟಿ20 ವಿಶ್ವಕಪ್‌ನ ಒಂದೇ ಪಂದ್ಯದಲ್ಲಿ 31 ಸಿಕ್ಸರ್ ದಾಖಲಾಗಿದ್ದವು. ಅದು ಸಹ ಇದೇ ಟೂರ್ನಿಯಲ್ಲಿ ದಾಖಲಾಗಿತ್ತು. ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ತಂಡಗಳು ಕಾದಾಟ ನಡೆಸಿದಾಗ ಈ ದಾಖಲೆ ಮೂಡಿ ಬಂದಿತ್ತು.
ಅತಿ ಹೆಚ್ಚು ಸಿಕ್ಸರ್
ಈ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾ ಒಟ್ಟಾರೆಯಾಗಿ 88 ಸಿಕ್ಸರ್‌ಗಳನ್ನು ಬಾರಿಸಿದೆ. ಇದೇ ವಿಶ್ವಕಪ್‌ನಲ್ಲಿ ವೆಸ್ಟ್ ಇಂಡೀಸ್ 76 ಸಿಕ್ಸರ್ ಬಾರಿಸಿದ ಹಿರಿಮೆ ಹೊಂದಿದೆ.
ಟಿ20 ವಿಶ್ವಕಪ್‌ನಲ್ಲಿ 250+ ಸ್ಕೋರ್
ಬ್ಯಾಟಿಂಗ್ ಪಿಚ್‌ನಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ 253 ರನ್ ಕಲೆ ಹಾಕಿತು. ಈ ಮೂಲಕ ಟಿ20 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬಾರಿ 250ಕ್ಕೂ ಹೆಚ್ಚು ರನ್‌ಗಳನ್ನು ಕಲೆ ಹಾಕಿದ ಹೆಗ್ಗಳಿಕೆ ತನ್ನದಾಗಿಸಿಕೊಂಡಿದೆ. ಟೂರ್ನಿಯಲ್ಲಿ ಭಾರತ 6 ಬಾರಿ ಈ ಸಾಧನೆ ಮಾಡಿದೆ. ಮೂರು ಬಾರಿ ಈ ಸಾಧನೆ ಮಾಡಿರುವ ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications