ಇಂಗ್ಲೆಂಡ್ ಪ್ರವಾಸಕ್ಕೆ ಭುವನೇಶ್ವರ್ ಆಯ್ಕೆಯಾಗದಿರಲು ಕಾರಣ ಬಹಿರಂಗ

ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಮುಂಬರುವ ಸುದೀರ್ಘ ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿಲ್ಲ. ಇದು ಕೆಲವರಲ್ಲಿ ಅಚ್ಚರಿಯನ್ನು ಮೂಡಿಸಿದ್ದರೆ ಇನ್ನೂ ಕೆಲವರು ನಿರೀಕ್ಷಿಸಿದ್ದರು. ಈಗ ಭುವನೇಶ್ವರ್ ಕುಮಾರ್ ಈ ಮಹತ್ವದ ಟೆಸ್ಟ್ ಸರಣಿಗೆ ಆಯ್ಕೆಯಾಗದಿರಲು ಕಾರಣವೇನೆಂದು ಚರ್ಚೆಯಾಗುತ್ತಿದೆ.
ವರದಿಯ ಪ್ರಕಾರ ಭುವನೇಶ್ವರ್ ಕುಮಾರ್ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಐದು ಪಂದ್ಯಗಳಲ್ಲಿ ಭಾಗಿಯಾಗದಿರಲು ಫಿಟ್‌ನೆಸ್ ಬಗ್ಗೆ ಆಯ್ಕೆ ಮಂಡಳಿಗೆ ಇರುವ ಅನುಮಾನ ಕಾರಣ ಎನ್ನಲಾಗಿದೆ. ಸುದೀರ್ಘ ಮಾದರಿಯಲ್ಲಿ ಇಂಗ್ಲೆಂಡ್‌ನ ಸುದೀರ್ಘ ಪ್ರವಾಸಕ್ಕೆ ಭುವನೇಶ್ವರ್ ಸಮರ್ಥರಿರುವ ಬಗ್ಗೆ ಪ್ರಶ್ನೆಗಳು ಮೂಡಿದ ಕಾರಣ ಅವರ ಆಯ್ಕೆಯನ್ನು ಕೈಬಿಡಲಾಯಿತು ಎನ್ನಲಾಗಿದೆ.
ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ಟೀಮ್ ಇಂಡಿಯಾ ತಂಡದಲ್ಲಿ ಆರು ವೇಗಿಗಳನ್ನು ಆಯ್ಕೆ ಮಾಡಲಾಗಿದೆ. ಜಸ್‌ಪ್ರೀತ್ ಬೂಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಈ ಪ್ರವಾಸಕ್ಕೆ ಆಯ್ಕೆಯಾದ ಭಾರತೀಯ ಬೌಲರ್‌ಗಳಾಗಿದ್ದಾರೆ.
ಐಎಎನ್‌ಎಸ್ ವರದಿಯ ಪ್ರಕಾರ ಭುವನೇಶ್ವರ್ ಕುಮಾರ್ ಭಾರತೀಯ ಟೆಸ್ಟ್ ತಂಡಕ್ಕೆ ಆಯ್ಕೆಯಾಗದಿರಲು ಮತ್ತೊಂದು ಕಾರಣವಿದೆ. 2018ರ ಜನವರಿ ಬಳಿಕ ಭುವನೇಶ್ವರ್ ಕುಮಾರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ಭುವಿ ಸುದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿ ಸಾಮರ್ಥ್ಯದ ಬಗ್ಗೆ ಸ್ಪಷ್ಟತೆಯಿಲ್ಲದಿರುವುದು ಕೂಡ ಕಾರಣ ಎನ್ನಲಾಗಿದೆ.
ಕಳೆದ ಐಪಿಎಲ್ ಆವೃತ್ತಿಯಲ್ಲಿ ಗಾಉಗೊಂಡ ನಂತರ ಹೊರಗುಳಿದಿದ್ದ ಭುವನೇಶ್ವರ್ ಕುಮಾರ್ ಇಂಗ್ಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದರು. ಹೀಗಾಗಿ ಭುವಿ ಸದ್ಯದಲ್ಲಿಯೇ ಸುದೀರ್ಘ ಮಾದರಿಯ ಕ್ರಿಕೆಟ್‌ಗೂ ಮರಳುವ ವಿಶ್ವಾಸ ಅಭಿಮಾನಿಗಳಲ್ಲಿ ಮೂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications