ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ಗುಡ್ ನ್ಯೂಸ್: ನಾಯಕ ಶುಭಮನ್ ಗಿಲ್ ಫಿಟ್
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರು ಏಕದಿನ ಪಂದ್ಯಗಳ ಎರಡನೇ ಪಂದ್ಯ ಕಾರ್ಡಿಫ್‌ನಲ್ಲಿ ಗುರುವಾರ ನಡೆಯಲಿದೆ. ಟಿ20 ಸರಣಿಯಲ್ಲಿ ನೀರಸ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿ 6 ವಿಕೆಟ್ ಜಯ ಸಾಧಿಸಿದೆ.
ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಸ್ನಾಯು ಸೆಳೆತಕ್ಕೆ ಒಳಗಾಗಿ ಮೈದಾನದಿಂದ ಹೊರ ನಡೆದಿದ್ದರು. ಇವರ ಗಾಯದ ಬಗ್ಗೆ ಅಭಿಮಾನಿಗಳಲ್ಲಿ ಒಂದು ಪ್ರಶ್ನೆ ಮೂಡಿತ್ತು. ಎರಡನೇ ಏಕದಿನ ಪಂದ್ಯದಲ್ಲಿ ಇವರು ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿತ್ತು. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಶುಭಮನ್ ಗಿಲ್ ಅವರ ನಾಯಕತ್ವದಲ್ಲಿ ಟೀಮ್ ಇಂಡಿಯಾ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಅವರಿಗೆ ಗಾಯ ಕಾಣಿಸಿಕೊಂಡಿತು. ಅಜೇಯ 80 ರನ್ ಬಾರಿಸಿ ಮುನ್ನುಗುತ್ತಿದ್ದಾಗ ಗಿಲ್ ಅವರು ಮೈದಾನವನ್ನು ಬಿಟ್ಟು ಹೊರನಡೆದರು.
ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಮೈದಾನದಿಂದ ಹೊರ ನಡೆಯುತ್ತಿದ್ದಂತೆ ಇವರು ಮತ್ತೆ ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆಗಳು ಅಭಿಮಾನಿಗಳ ಮನಸ್ಸಿನಲ್ಲಿ ಮೂಡಿದ್ದವು. ಆದರೆ ಈಗ ಈ ಬಗ್ಗೆ ಸ್ಪಷ್ಟತೆ ಸಿಕ್ಕಿದೆ. ಶುಭಮನ್ ಗಿಲ್ ತಮಗೆ ಆದ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಇವರು ಗುರುವಾರ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕೆ ಇಳಿಯಲು ಸಜ್ಜಾಗಿದ್ದಾರೆ.
ಸರಣಿ ಗೆಲುವಿನ ಕನಸಿನಲ್ಲಿ ಭಾರತ
ಮೊದಲ ಏಕದಿನ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ಭಾರತ 1-0 ಮುನ್ನಡೆ ಸಾಧಿಸಿದೆ. ಎರಡನೇ ಏಕದಿನ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ಮತ್ತೊಂದು ಗೆಲುವನ್ನು ದಾಖಲಿಸುವ ಆಸೆ ಭಾರತ ತಂಡದ್ದಾಗಿದೆ. ಈ ವೇಳೆ ಭಾರತ ಸಂಘಟಿತ ಆಟವನ್ನು ಆಡಿ ಗೆಲುವು ಸಾಧಿಸುವತ್ತ ಚಿತ್ತ ನೆಟ್ಟಿದೆ.
ಟೀಮ್ ಇಂಡಿಯಾದ ಪರ ಕಣಕ್ಕೆ ಇಳಿಯಲಿರುವ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರುಗಳ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇವರು ಮೊದಲ ಏಕದಿನ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರ ಮೇಲೆ ಒತ್ತಡವಿದೆ. ಇವರು ಎರಡನೇ ಏಕದಿನ ಪಂದ್ಯದಲ್ಲಿ ಬಿಗ್ ಇನಿಂಗ್ಸ್ ಕಟ್ಟಿ ತಮ್ಮ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳುವ ಅನಿವಾರ್ಯತೆ ಇದೆ. ಈ ಮೂಲಕ ಈ ಆಟಗಾರರು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಕನಸು ಕಾಣುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications

