ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಾಹುಲ್ ಬದಲು ಈ ಆಟಗಾರನಿಗೆ ಆರಂಭಿಕನ ಸ್ಥಾನ ನೀಡಿ ಎಂದ ಸಲ್ಮಾನ್ ಬಟ್

IND vs ENG: Shubman Gill should continue batting as opener says former cricketer
ಪಂತ್ ಗೆ ಬುದ್ದಿ ಹೇಳಿದ ಪಾಕ್ ಆಟಗಾರ | Oneindia Kannada

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯವನ್ನು ಗೆಲ್ಲುವುದರ ಮೂಲಕ ಸಮಬಲವನ್ನು ಸಾಧಿಸಿವೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಯಾವುದೇ ಫಲಿತಾಂಶವಿಲ್ಲದೇ ಮಳೆಯ ಕಾರಣದಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತ್ತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 151 ರನ್‌ಗಳ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿತ್ತು. ನಂತರ ಇತ್ತೀಚೆಗಷ್ಟೇ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಇಂಗ್ಲೆಂಡ್ 76 ರನ್‌ಗಳ ಇನ್ನಿಂಗ್ಸ್ ಗೆಲುವನ್ನು ದಾಖಲಿಸಿತು.

ಪೂಜಾರ ಕಳಪೆ ಬ್ಯಾಟಿಂಗ್ ಬಗ್ಗೆ ಡ್ರೆಸಿಂಗ್ ರೂಮ್‌ನಲ್ಲಿ ಆಗುತ್ತಿದ್ದ ಚರ್ಚೆಯನ್ನು ಬಹಿರಂಗಪಡಿಸಿದ ರೋಹಿತ್ ಶರ್ಮಾಪೂಜಾರ ಕಳಪೆ ಬ್ಯಾಟಿಂಗ್ ಬಗ್ಗೆ ಡ್ರೆಸಿಂಗ್ ರೂಮ್‌ನಲ್ಲಿ ಆಗುತ್ತಿದ್ದ ಚರ್ಚೆಯನ್ನು ಬಹಿರಂಗಪಡಿಸಿದ ರೋಹಿತ್ ಶರ್ಮಾ

ಹೀಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸರಣಿಯಲ್ಲಿ ಇಂಗ್ಲೆಂಡ್ ಸಮಬಲವನ್ನು ಸಾಧಿಸಿದೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನವನ್ನು ನೀಡಿದ್ದರು, ಆದರೆ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್‌ಗಳ ದಾಳಿಯ ಮುಂದೆ ಮಂಕಾದ ಭಾರತದ ಬ್ಯಾಟ್ಸ್‌ಮನ್‌ಗಳು ಅಕ್ಷರಶಃ ವಿಫಲರಾದರು. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಸೆಪ್ಟೆಂಬರ್‌ 2ರಿಂದ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ತೃತೀಯ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಬೇಕೆಂದು ಹಲವಾರು ಮಾಜಿ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ಆಡುತ್ತೇನೆ ಆದರೆ ಟಿ ಟ್ವೆಂಟಿ ವಿಶ್ವಕಪ್ ಅನುಮಾನ ಎಂದು ಶಾಕ್ ನೀಡಿದ ಇಂಗ್ಲೆಂಡ್‌ನ ಸ್ಟಾರ್ ಆಟಗಾರಐಪಿಎಲ್ ಆಡುತ್ತೇನೆ ಆದರೆ ಟಿ ಟ್ವೆಂಟಿ ವಿಶ್ವಕಪ್ ಅನುಮಾನ ಎಂದು ಶಾಕ್ ನೀಡಿದ ಇಂಗ್ಲೆಂಡ್‌ನ ಸ್ಟಾರ್ ಆಟಗಾರ

ಈ ಕುರಿತು ಇದೀಗ ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಬಟ್ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಕೆಲವು ಬದಲಾವಣೆಗಳು ಆಗಬೇಕಿದೆ ಎಂದು ಈ ಕೆಳಕಂಡ ಮಹತ್ವದ ಸಲಹೆಯನ್ನು ಟೀಮ್ ಇಂಡಿಯಾಕ್ಕೆ ನೀಡಿದ್ದಾರೆ.

ಆರಂಭಿಕ ಆಟಗಾರನಾಗಿ ಶುಬ್ಮನ್ ಗಿಲ್ ಕಣಕ್ಕಿಳಿಯಲಿ

ಆರಂಭಿಕ ಆಟಗಾರನಾಗಿ ಶುಬ್ಮನ್ ಗಿಲ್ ಕಣಕ್ಕಿಳಿಯಲಿ

ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕದಲ್ಲಿ ಕೆಲ ಬದಲಾವಣೆಗಳಾಗಬೇಕು ಎಂದು ಸಲ್ಮಾನ್ ಬಟ್ ಅಭಿಪ್ರಾಯಪಟ್ಟಿದ್ದಾರೆ. ಕೆ ಎಲ್ ರಾಹುಲ್ ಅವರನ್ನು ಆರಂಭಿಕ ಆಟಗಾರನಾಗಿ ಕಣಕ್ಕಿಳಿಸುವ ಬದಲು ಶುಬ್ಮನ್ ಗಿಲ್‌ಗೆ ತಂಡದಲ್ಲಿ ಸ್ಥಾನ ನೀಡಿ ಆತನನ್ನು ಆರಂಭಿಕ ಆಟಗಾರನಾಗಿ ಕಣಕ್ಕಿಳಿಸಬೇಕು ಮತ್ತು ಕೆ ಎಲ್ ರಾಹುಲ್ ಅವರಿಗೆ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ನೀಡಬೇಕು ಎಂದು ಸಲ್ಮಾನ್ ಬಟ್ ಅಭಿಪ್ರಾಯಪಟ್ಟಿದ್ದಾರೆ. ಹೇಗಿದ್ದರೂ ಶುಬ್ಮನ್ ಗಿಲ್ ಟೀಮ್ ಇಂಡಿಯಾದ ಆರಂಭಿಕ ಆಟಗಾರನಾಗಿ ಕಳೆದ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಸರಣಿಗಳಲ್ಲಿ ಉತ್ತಮ ಆಟವನ್ನಾಡಿದ ಅನುಭವವನ್ನು ಹೊಂದಿದ್ದಾರೆ. ಹೀಗಾಗಿ ಶುಬ್ಮನ್ ಗಿಲ್ ಆರಂಭಿಕ ಆಟಗಾರನಾಗಿ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಬೇಕು ಎಂದು ಸಲ್ಮಾನ್ ಬಟ್ ಅಭಿಪ್ರಾಯ ತಿಳಿಸಿದ್ದಾರೆ.

ಕೆಎಲ್ ರಾಹುಲ್ ಯಾವ ಕ್ರಮಾಂಕದಲ್ಲಾದರೂ ಆಡಬಲ್ಲ ಆಟಗಾರ

ಕೆಎಲ್ ರಾಹುಲ್ ಯಾವ ಕ್ರಮಾಂಕದಲ್ಲಾದರೂ ಆಡಬಲ್ಲ ಆಟಗಾರ

ಹೀಗೆ ಸ್ಕೇಲ್ ರಾಹುಲ್ ಬದಲು ಶುಬ್ಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿರುವ ಸಲ್ಮಾನ್ ಬಟ್ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕು ಎಂದು ಸಲಹೆ ನೀಡಿದರು. ಕೆಎಲ್ ರಾಹುಲ್ ಆರಂಭಿಕ ಆಟಗಾರನಾಗಿಯೂ ಆಡುತ್ತಾರೆ ಮತ್ತು ಮಧ್ಯಮ ಕ್ರಮಾಂಕದಲ್ಲಿ ಆಡಬಲ್ಲ ಆಟಗಾರನಾಗಿದ್ದಾರೆ, ಹೀಗಾಗಿ ಕೆ ಎಲ್ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದ ಆಟಗಾರನಾಗಿ ಕಣಕ್ಕಿಳಿಸಿದರೆ ಟೀಮ್ ಇಂಡಿಯಾಗೆ ಲಾಭದಾಯಕವಾಗಲಿದೆ ಎಂದು ಸಲ್ಮಾನ್ ಬಟ್ ಅಭಿಪ್ರಾಯಪಟ್ಟಿದ್ದಾರೆ.

ನಾಲ್ಕನೇ ಟೆಸ್ಟ್ ಯಾವಾಗ?

ನಾಲ್ಕನೇ ಟೆಸ್ಟ್ ಯಾವಾಗ?

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಎರಡೂ ತಂಡಗಳು 1-1 ಸಮಬಲ ಸಾಧಿಸಿವೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ನಿರೀಕ್ಷೆ ಮತ್ತು ಕುತೂಹಲಗಳು ದುಪ್ಪಟ್ಟಾಗಿದ್ದು ಈ ನಾಲ್ಕನೇ ಟೆಸ್ಟ್ ಪಂದ್ಯ ಓವಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್‌ 2ರಿಂದ 6ರವರೆಗೆ ನಡೆಯಲಿದೆ.

Story first published: Monday, August 30, 2021, 14:30 [IST]
Other articles published on Aug 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X