ಭಾರತ vs ಇಂಗ್ಲೆಂಡ್: ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರಮುಖ ಮೈಲಿಗಲ್ಲು ಸಾಧಿಸಿದ ಸ್ಟುವರ್ಟ್ ಬ್ರಾಡ್

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಆರಂಬಿಕ ಹಿನ್ನಡೆಯ ಹೊರತಾಗಿಯೂ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಅದ್ಬುತ ಬ್ಯಾಟಿಂಗ್ ಪ್ರದರ್ಶಿಸಿದೆ. ಇನ್ನು ಇಂಗ್ಲೆಂಡ್ ತಂಡದ ಪರವಾಗಿ ಅನುಭವಿ ಆಟಗಾರ ಜೇಮ್ಸ್ ಆಂಡರ್ಸನ್ ಹೊರತುಪಡಿಸಿ ಉಳಿದ ಬೌಲರ್‌ಗಳು ಮಿಂಚಲು ವಿಫಲವಾದರು.
ಇನ್ನು ಇಂಗ್ಲೆಂಡ್ ತಂಡದ ಮತ್ತೋರ್ವ ವೇಗಿ ಸ್ಟುವರ್ಟ್ ಬ್ರಾಡ್ ಓವರ್‌ನಲ್ಲಿ ವಿಶ್ವದಾಖಲೆಯ ರನ್ ಕೊಟ್ಟ ಕೆಟ್ಟ್ ದಾಖಲೆಯನ್ನು ಕೂಡ ಈ ಪಂದ್ಯದಲ್ಲಿ ಬರೆದಿದ್ದಾರೆ. ಆದರೆ ಈ ಕೆಟ್ಟ ದಾಖಲೆ ಬರೆಯುವ ಮುನ್ನ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಟುವರ್ಟ್ ಬ್ರಾಡ್ ಶ್ರೇಷ್ಠ ಮೈಲಿಗಲ್ಲೊಂದನ್ನು ಸಾಧಿಸುವಲ್ಲಿ ಯಶಸ್ವಿಯಾದರು.

550 ವಿಕೆಟ್‌ಗಳ ಮೈಲಿಗಲ್ಲು ದಾಟಿದ ಬ್ರಾಡ್
ಸ್ಟುವರ್ಟ್ ಬ್ರಾಡ್ ಶನಿವಾರ ಟೆಸ್ಟ್ ಕ್ರಿಕೆಟ್‌ನಲ್ಲಿ 550 ವಿಕೆಟ್ ಸಂಪಾದಿಸಿದ ಸಾಧನೆ ಮಾಡಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಕೇವಲ ಮೂರನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ ಬ್ರಾಡ್. ಎರಡನೇ ದಿನದಾಟದಲ್ಲಿ ಮೊಹಮ್ಮದ್ ಶಮಿ ವಿಕೆಟ್ ಪಡೆಯುವ ಮೂಲಕ ಈ ಮಹತ್ವದ ಸಾಧನೆ ಮಾಡಿದ್ದಾರೆ. ಈ ಪಂದ್ಯಕ್ಕೆ ಕಣಕ್ಕಿಳಿಯುವಾದ ಬ್ರಾಡ್‌ಗೆ ಈ ದಾಖಲೆಗಾಗಿ ಕೇವಲ ಒಂದು ವಿಕೆಟ್‌ಗಳ ಅಗತ್ಯವಿತ್ತು. ಆದರೆ ಮೊದಲ ದಿನದಾಟದಲ್ಲಿ ಬ್ರಾಡ್ 15 ಓವರ್‌ಗಳನ್ನು ಎಸೆದಿದ್ದರು ಕೂಡ ಒಂದೂ ವಿಕೆಟ್ ಪಡೆದಿರಲಿಲ್ಲ. ಎರಡನೇ ದಿನ ಮೈಲಿಗಲ್ಲು ಸಂಪೂರ್ಣಗೊಳಿಸಿದ್ದಾರೆ.

ಈ ಸಾಧನೆ ಮಾಡಿದ ಮೂರನೇ ವೇಗಿ
ಸ್ಟುವರ್ಟ್ ಬ್ರಾಡ್ 550 ಟೆಸ್ಟ್ ಕ್ರಿಕೆಟ್ ಸಂಪಾದಿಸಿದ ವಿಶ್ವದ ಮೂರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇದಕ್ಕೂ ಮುನ್ನ ಈ ಸಾಧನೆಯನ್ನು ಜೇಮ್ಸ್ ಆಂಡರ್ಸನ್ ಹಾಗೂ ಆಸ್ಟ್ರೇಲಿಯಾದ ಗ್ಲೆನ್ ಮೆಕ್‌ಗ್ರಾಥ್ ಮಾತ್ರವೇ ಮಾಡಿದ್ದಾರೆ. 656 ವಿಕೆಟ್ ಪಡೆದಿರುವ ಆಂಡರ್ಸನ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ ಮೆಕ್‌ಗ್ರಾಥ್ 563 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಒಟ್ಟಾರೆ ಪಟ್ಟಿಯಲ್ಲಿ ಮುತ್ತಯ್ಯ ಮುರಳೀಧರನ್ 800 ವಿಕೆಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ ಶೇನ್ ವಾರ್ನ್ 708 ವಿಕೆಟ್ ಸಂಪಾದಿಸಿ ಎರಡನೇ ಸ್ಥಾನದಲ್ಲಿದ್ದಾರೆ.

ಕೆಟ್ಟ ದಾಖಲೆ ಬರೆದ ಬ್ರಾಡ್
ಇನ್ನು ಸ್ಟುವರ್ಟ್ ಇದೇ ಪಂದ್ಯದಲ್ಲಿ ಕೆಟ್ಟ ವಿಶ್ವಾದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಒಂದೇ ಓವರ್‌ನಲ್ಲಿ 35 ರನ್ ನೀಡುವ ಮೂಲಕ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ದುಬಾರಿ ಓವರ್ ಎಸೆದಿದ್ದಾರೆ ಬ್ರಾಡ್. ಈ ಮೂಲಕ ಟಿ20 ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ಬ್ರಾಡ್ ದುಬಾರಿ ಓವರ್ ಎಸೆದಂತಾಗಿದೆ. ಟಿ20ನಕ್ರಿಕೆಟ್‌ನಲ್ಲಿ 2007ರಲ್ಲಿ ಯುವರಾಜ್ ಸಿಂಗ್ ಓವರ್‌ನ ಎಲ್ಲಾ ಎಸೆತಗಳನ್ನು ಸಿಕ್ಸರ್‌ಗೆ ಅಟ್ಟುವ ಮೂಲಕ ದಾಖಲೆ ಬರೆದಿದ್ದರು.

ಉತ್ತಮ ಮೊತ್ತ ಪೇರಿಸಿದ ಭಾರತ
ಇನ್ನು ಈ ಪಂದ್ಯದಲ್ಲಿ ಭಾರತ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ರಿಷಬ್ ಪಂತ್ ಹಾಗೂ ರವೀಂದ್ರ ಜಡೇಜಾ ಅವರ ಅಮೋಘ ಶತಕದ ನೆರವಿನೊಂದಿಗೆ ಭಾರತ 416 ರನ್‌ಗಳನ್ನು ಗಳಿಸಿ ಆಲೌಟ್ ಆಗಿದೆ. ಇನ್ನು ಇಂಗ್ಲೆಂಡ್ ತಂಡದ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ 60 ರನ್‌ಗಳನ್ನು ನೀಡಿ 5 ವಿಕೆಟ್ ಸಂಪಾದಿಸುವ ಮೂಲಕ ಮಿಂಚಿದ್ದಾರೆ.
ಇಂಗ್ಲೆಂಡ್ ಆಡುವ ಬಳಗ: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್
ಬೆಂಚ್: ಬೆನ್ ಫೋಕ್ಸ್, ಕ್ರೇಗ್ ಓವರ್ಟನ್, ಜೇಮೀ ಓವರ್ಟನ್, ಹ್ಯಾರಿ ಬ್ರೂಕ್
ಭಾರತ ಆಡುವ ಬಳಗ: ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ (ನಾಯಕ)
ಬೆಂಚ್: ಉಮೇಶ್ ಯಾದವ್, ಶ್ರೀಕರ್ ಭರತ್, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications