ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ಗೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ ಎದುರಾಗಿದೆ!

IND vs ENG: Stuart Broad tweaks his right calf, doubtful for Lord’s Test

ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಇದೇ ಗುರುವಾರ ಆಗಸ್ಟ್ 12ರಿಂದ ಆರಂಭವಾಗಲಿದ್ದು, ಈ ಪಂದ್ಯ ಕ್ರಿಕೆಟ್ ಕಾಶಿ ಎಂದು ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ, ಟೀಮ್ ಇಂಡಿಯಾ ಆಟಗಾರರು ಲಾರ್ಡ್ಸ್ ತಲುಪಿದ್ದು ಈಗಾಗಲೇ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಅಭ್ಯಾಸವನ್ನು ನಡೆಸುತ್ತಿದ್ದಾರೆ.

ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾಗೆ ಸ್ವಾಗತ ಕೋರಿದ ಲಾರ್ಡ್ಸ್ಭಾರತ vs ಇಂಗ್ಲೆಂಡ್ ದ್ವಿತೀಯ ಟೆಸ್ಟ್: ಟೀಮ್ ಇಂಡಿಯಾಗೆ ಸ್ವಾಗತ ಕೋರಿದ ಲಾರ್ಡ್ಸ್

ಅತ್ತ ಇಂಗ್ಲೆಂಡ್ ತಂಡದ ಆಟಗಾರರೂ ಸಹ ಭಾರತ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಜಯ ಸಾಧಿಸಬೇಕೆಂಬ ಯೋಜನೆಯಲ್ಲಿದ್ದು ಇಂಗ್ಲೆಂಡ್ ತಂಡದ ಆಟಗಾರರು ಕೂಡ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗೆ ಮುಂಬರುವ ಟೀಮ್ ಇಂಡಿಯಾ ವಿರುದ್ಧದ ಎರಡನೆ ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸವನ್ನು ನಡೆಸುತ್ತಿರುವ ವೇಳೆ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಸ್ಟುವರ್ಟ್ ಬ್ರಾಡ್ ಕಾಲಿನ ಹಿಂಭಾಗಕ್ಕೆ ಪೆಟ್ಟು ಮಾಡಿಕೊಂಡಿದ್ದಾರೆ. ಹೌದು ಅಭ್ಯಾಸದ ವೇಳೆ ಸ್ಟುವರ್ಟ್ ಬ್ರಾಡ್ ತಮ್ಮ ಕಾಲಿನ ಹಿಂಭಾಗಕ್ಕೆ ಗಾಯ ಮಾಡಿಕೊಂಡಿದ್ದಾರೆ.

ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಕ್ರಿಕೆಟಿಗ ಈಗ ದಿನಗೂಲಿ ನೌಕರ!ಪಾಕ್ ವಿರುದ್ಧ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಕ್ರಿಕೆಟಿಗ ಈಗ ದಿನಗೂಲಿ ನೌಕರ!

ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಸ್ಟುವರ್ಟ್ ಬ್ರಾಡ್ ಅಲಭ್ಯರಾಗಲಿದ್ದಾರೆ. ಇನ್ನು ತಂಡದ ಪ್ರಮುಖ ವೇಗಿ ಗಾಯದ ಸಮಸ್ಯೆಯಿಂದ ಮುಂಬರುವ ಭಾರತ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯುವುದು ಇಂಗ್ಲೆಂಡ್ ತಂಡಕ್ಕೆ ಸಮಸ್ಯೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ಮೊದಲ ಪಂದ್ಯದಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದ ಬ್ರಾಡ್

ಮೊದಲ ಪಂದ್ಯದಲ್ಲಿ ಕೇವಲ ಒಂದು ವಿಕೆಟ್ ಪಡೆದಿದ್ದ ಬ್ರಾಡ್

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ 20 ಓವರ್‌ಗಳನ್ನು ಬೌಲಿಂಗ್ ಮಾಡಿದ್ದ ಇದೇ ಸ್ಟುವರ್ಟ್ ಬ್ರಾಡ್ ಯಾವುದೇ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ, ಆದರೆ ಭಾರತ ವಿರುದ್ಧದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಪ್ರಮುಖ ಬ್ಯಾಟ್ಸ್‌ಮನ್‌ ಕೆ ಎಲ್ ರಾಹುಲ್‌ರ ವಿಕೆಟ್ ಪಡೆದು ಸ್ಟುವರ್ಟ್ ಬ್ರಾಡ್ ಎರಡನೇ ಇನ್ನಿಂಗ್ಸ್‌ನಲ್ಲಿ ಶುಭಾರಂಭವನ್ನು ಮಾಡಿದ್ದರು. ಆದರೆ ಮೊದಲನೇ ಪಂದ್ಯಕ್ಕೆ ವರುಣನ ಆಗಮನವಾದ ಕಾರಣ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು.

ತಂಡಕ್ಕೆ ಮೊಯಿನ್ ಅಲಿ ಸೇರುವ ಸಾಧ್ಯತೆ

ತಂಡಕ್ಕೆ ಮೊಯಿನ್ ಅಲಿ ಸೇರುವ ಸಾಧ್ಯತೆ

ಹೀಗೆ ಡ್ರಾಗೊಂಡ ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೇವಲ ಒಂದೇ ಒಂದು ವಿಕೆಟ್ ಪಡೆದು ಸಾಧಾರಣ ಪ್ರದರ್ಶನ ನೀಡಿದ ಸ್ಟುವರ್ಟ್ ಬ್ರಾಡ್ ಎರಡನೇ ಪಂದ್ಯದಲ್ಲಿಯೂ ಅವಕಾಶವನ್ನು ಗಟ್ಟಿ ಮಾಡಿಕೊಂಡಿದ್ದರು. ಆದರೆ ಇದೀಗ ಬಂದಿರುವ ಸುದ್ದಿಯ ಪ್ರಕಾರ ಹಿಂಬದಿಯ ಕಾಲಿನ ಗಾಯಕ್ಕೊಳಗಾಗಿರುವ ಸ್ಟುವರ್ಟ್ ಬ್ರಾಡ್ ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಆಲ್ ರೌಂಡರ್ ಮೊಯಿನ್ ಅಲಿಯನ್ನು ಕರೆಸಲು ಇಂಗ್ಲೆಂಡ್ ತಂಡ ಮುಂದಾಗಿದ್ದು, ಮೊಯಿನ್ ಅಲಿ ಆಗಮನವಾಗುವುದರಿಂದ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ವಿಭಾಗಗಳು ಬಲಿಷ್ಠವಾಗಲಿವೆ.

ಟೀಮ್ ಇಂಡಿಯಾಗೂ ಗಾಯದ ಸಮಸ್ಯೆ

ಟೀಮ್ ಇಂಡಿಯಾಗೂ ಗಾಯದ ಸಮಸ್ಯೆ

ಇತ್ತ ಟೀಮ್ ಇಂಡಿಯಾದಲ್ಲಿಯೂ ಕೂಡ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರೀ ಬದಲಾವಣೆಯಾಗುವ ಸಾಧ್ಯತೆಯಿದ್ದು ಈಗಾಗಲೇ ಲಾರ್ಡ್ಸ್ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸದಲ್ಲಿ ತೊಡಗಿದ್ದಾರೆ. ಹೀಗೆ ಅಭ್ಯಾಸ ಮಾಡುತ್ತಿರುವ ಟೀಮ್ ಇಂಡಿಯಾ ಆಟಗಾರರ ಪೈಕಿ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮ ಕೂಡ ಸೇರಿಕೊಂಡಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಳ್ಳದೆ ಇದ್ದ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಅಭ್ಯಾಸದಲ್ಲಿ ತೊಡಗಿಕೊಂಡಿರುವುದು ಸದ್ಯ ಭಾರತೀಯ ಕ್ರೀಡಾಭಿಮಾನಿಗಳಲ್ಲಿ ಕುತೂಹಲವನ್ನು ಕೆರಳಿಸಿದೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಮತ್ತು ಇಶಾಂತ್ ಶರ್ಮಾಗೆ ಸ್ಥಾನ ನೀಡುವ ಸಾಧ್ಯತೆಗಳು ಹೆಚ್ಚಿದ್ದು, ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾದ ಯಾರಾದರೂ ಇಬ್ಬರು ಆಟಗಾರರು ಎರಡನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ.

Story first published: Wednesday, August 11, 2021, 15:26 [IST]
Other articles published on Aug 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X