IND VS ENG T20: ಹೊಸ ಬ್ಯಾಟಿಂಗ್ ಕೋಚ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಅಭ್ಯಾಸ
ಜನವರಿ 22 ರಿಂದ ಇಂಗ್ಲೆಂಡ್ ವಿರುದ್ಧ ಭಾರತ ಕ್ರಿಕೆಟ್ ತಂಡ 5 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಟಿ20 ಪಂದ್ಯ ಉಭಯ ತಂಡಗಳ ನಡುವೆ ಬುಧವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸಂಜೆ 7 ಗಂಟೆಗೆ ನಡೆಯಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸದರೆ, ಇಂಗ್ಲೆಂಡ್‌ಗೆ ಜೋಸ್ ಬಟ್ಲರ್ ನಾಯಕತ್ವ ವಹಿಸಲಿದ್ದಾರೆ.
ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಈಡನ್ ಗಾರ್ಡನ್‌ನಲ್ಲಿ ಅಭ್ಯಾಸ ಆರಂಭಿಸಿದ್ದು, ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಅಭ್ಯಾಸ ಆರಂಭಿಸಿದೆ. ವಿಶೇಷವೆನೆಂದರೆ ಟೀಮ್ ಇಂಡಿಯಾಕ್ಕೆ ಹೊಸ ಬ್ಯಾಟಿಂಗ್ ಕೋಚ್ ಸೇರಿಕೊಂಡಿದ್ದಾರೆ.

ಭಾರತ ತಂಡದ ನೂತನ ಬ್ಯಾಟಿಂಗ್ ಕೋಚ್ ಶಿತಾಂಶು ಕೊಟಕ್ ಕೂಡ ಕೋಲ್ಕತ್ತಾದಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ಅಭ್ಯಾಸದ ವೇಳೆ ಗೌತಮ್ ಗಂಭೀರ್ ಜೊತೆಯೂ ಕಾಣಿಸಿಕೊಂಡಿದ್ದರು. ಈ ಅಭ್ಯಾಸದಲ್ಲಿ ಟೀ ಇಂಡಿಯಾ ಆಟಗಾರರು ಬೆವರರಿಸಿದ್ದಾರೆ. 2023ರ ಏಕದಿನ ವಿಶ್ವಕಪ್ ಬಳಿಕ ತಂಡಕ್ಕೆ ಮರಳಿದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಕೂಡ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ.
ಈ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ ಮತ್ತು ತಿಲಕ್ ವರ್ಮಾ ಅವರು ನೆಟ್‌ನಲ್ಲಿ ಬಿರುಸಿನ ಬ್ಯಾಟಿಂಗ್ ಮಾಡುತ್ತಿದ್ದರೆ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ ಮತ್ತು ರವಿ ಬಿಷ್ಣೋಯ್ ಕೂಡ ಬೌಲಿಂಗ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಈ ವೇಳೆ ಕೋಚ್ ಗೌತಮ್ ಗಂಭೀರ್ ಎಲ್ಲಾ ಆಟಗಾರರ ಮೇಲೆ ನಿಗಾ ಇಟ್ಟಿರುವುದು ಕೂಡ ಕಂಡುಬಂದಿದೆ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಸರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ , ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ/ವಿಕೆಟ್ ಕೀಪರ್), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮಿ ಓವರ್ಟನ್, ಜೇಮೀ ಸ್ಮಿತ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಶಾಕಿಬ್ ಸಲ್ಮಾದ್ , ಮಾರ್ಕ್ ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications