ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಜನವರಿ 22 ರಂದು ಬುಧವಾರ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಪಂದ್ಯ ಆರಂಭವಾಗಲಿದೆ.ಈ ಪಂದ್ಯಕ್ಕಾಗಿ ಉಭಯ ತಂಡಗಳು ತಮ್ಮ ತಯಾರಿ ಆರಂಭಿಸಿವೆ. ಈಡನ್ ಗಾರ್ಡನ್ಸ್‌ನಲ್ಲಿ ಇಂಗ್ಲೆಂಡ್ ಮತ್ತು ಭಾರತ ತಂಡಗಳು ಬಿರುಸಿನ ಅಭ್ಯಾಸ ನಡೆಸುತ್ತಿವೆ.
ತವರಿನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಲು ಟೀಮ್ ಇಂಡಿಯಾ ಯೋಜನೆ ರೂಪಿಸುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ತಂಡವನ್ನು ವಿಶೇಷ ರೀತಿಯಲ್ಲಿ ಬಲಪಡಿಸುತ್ತಿದ್ದಾರೆ. ಆದರೆ ಮೊದಲ ಟಿ20 ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಕಾಡಬಲ್ಲ ಇಂಗ್ಲೆಂಡ್ ತಂಡ ಐವರು ಅಪಾಯಕಾರಿ ಆಟಗಾರರಿದ್ದಾರೆ. ಈ ಆಟಗಾರರ ಬಗ್ಗೆ ಇಲ್ಲಿದೆ ಮಾಹಿತಿ.

ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜೋಸ್ ಬಟ್ಲರ್ ಟೀಮ್ ಇಂಡಿಯಾಕ್ಕೆ ಎಲ್ಲ ರೀತಿಯಲ್ಲೂ ಕಾಟ ಕೊಡಬಲ್ಲ ಆಟಗಾರ ಎನಿಸಿಕೊಂಡಿದ್ದಾರೆ. ಈ ಬಲಗೈ ಬ್ಯಾಟರ್ ಟೀಮ್ ಇಂಡಿಯಾ ಬೌಲರ್‌ಗಳಿಗೆ ಬೆವರಿಳಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಬಟ್ಲರ್ 129 ಟಿ20 ಪಂದ್ಯಗಳಲ್ಲಿ 1 ಶತಕ ಮತ್ತು 18 ಅರ್ಧಶತಕಗಳೊಂದಿಗೆ 3389 ರನ್ ಗಳಿಸಿದ್ದಾರೆ. ಈ ವೇಳೆ ಅವರ ಅತ್ಯುತ್ತಮ ಸ್ಕೋರ್ 101* ಆಗಿದೆ.
ಇಂಗ್ಲೆಂಡ್‌ನ ಸ್ಫೋಟಕ ಆರಂಭಿಕ ಬ್ಯಾಟರ್ ಫಿಟ್ ಸಾಲ್ಟ್ ಭಾರತೀಯ ಬೌಲರ್‌ಗಳಿಗೆ ಬೆದರಿಕೆಯೊಡ್ಡಬಹುದು. ಐಪಿಎಲ್‌ನಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಭಾರತದ ನೆಲದಲ್ಲಿ ಸಾಲ್ಟ್ ಸಾಕಷ್ಟು ರನ್ ಗಳಿಸಿದ್ದಾರೆ. ಅವರು ಇಂಗ್ಲೆಂಡ್ ಪರ 38 ಟಿ20 ಪಂದ್ಯಗಳಲ್ಲಿ 3 ಶತಕ ಮತ್ತು 4 ಅರ್ಧ ಶತಕಗಳೊಂದಿಗೆ 1106 ರನ್ ಗಳಿಸಿದ್ದಾರೆ. ಅವರ ಗರಿಷ್ಠ ಸ್ಕೋರ್ 119 ರನ್.
ಭಾರತ ತಂಡ ಬ್ಯಾಟರ್‌ಗಳು ಮತ್ತು ಬೌಲರ್‌ಗಳು ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರಿಂದ ಸ್ವಲ್ಪ ಎಚ್ಚರಿಕೆಯಿಂದ ಇರಬೇಕು. ಐಪಿಎಲ್‌ನಲ್ಲಿ ಭಾರತದ ಪಿಚ್‌ಗಳಲ್ಲಿ ಆಡಿದ ಅನುಭವ ಅವರಿಗಿದೆ. ಪಂದ್ಯದ ಗತಿಯನ್ನೆ ಬದಲಾಯಿಸಬಲ್ಲ ಸಾಮರ್ಥ್ಯವನ್ನು ಹೊಂದಿದ್ದಾರೆ. ಲಿವಿಂಗ್‌ಸ್ಟೋನ್ ಇಂಗ್ಲೆಂಡ್ ಪರ 55 ಟಿ20 ಪಂದ್ಯಗಳಲ್ಲಿ 1 ಶತಕ ಮತ್ತು 2 ಅರ್ಧಶತಕಗಳ ನೆರವಿನಿಂದ 881 ರನ್ ಗಳಿಸಿದ್ದಾರೆ. ತಮ್ಮ ಹೆಸರಿನಲ್ಲಿ 32 ವಿಕೆಟ್‌ಗಳನ್ನು ಹೊಂದಿದ್ದಾರೆ.
ಲೆಗ್ ಸ್ಪಿನ್ನರ್ ಆದಿಲ್ ರಶೀದ್ ಅವರು ಭಾರತದ ಪಿಚ್‌ಗಳಲ್ಲಿ ಇಂಗ್ಲೆಂಡ್ ತಂಡಕ್ಕೆ ವಿಕೆಟ್ ಬೌಲರ್ ಆಗಿದ್ದಾರೆ. ಅವರು ಭಾರತದ ಪಿಚ್‌ಗಳಲ್ಲಿ ಮತ್ತು ಐಪಿಎಲ್‌ನಲ್ಲಿ ಆಡಿದ ಅನುಭವ ಇದೆ. ಈ ಕಾರಣದಿಂದಾಗಿ ಅವರು ಟರ್ನಿಂಗ್ ವಿಕೆಟ್‌ನಲ್ಲಿ ಭಾರತೀಯ ಬ್ಯಾಟರ್‌ಗಳನ್ನು ಕಾಡಬಹುದು. ಇಂಗ್ಲೆಂಡ್ ಪರ 119 ಟಿ20 ಪಂದ್ಯಗಳ 114 ಇನ್ನಿಂಗ್ಸ್ ಗಳಲ್ಲಿ 126 ವಿಕೆಟ್ ಪಡೆದಿದ್ದಾರೆ. ಅವರು ಮೂರು ಬಾರಿ 4 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ತಂಡದ ವೇಗದ ಬೌಲರ್ ಮಾರ್ಕ್ ವುಡ್ ಭಾರತದ ಪಿಚ್‌ಗಳಲ್ಲಿ ಮಿಂಚುವ ನಿರೀಕ್ಷೆಯಿದೆ. ಅವರ ವೇಗದ ಬೌಲಿಂಗ್ ಮತ್ತು ವಿಕೆಟ್ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಕಾರಣ ಭಾರತ ತಂಡ ಬ್ಯಾಟರ್‌ಗಳಿಗೆ ಸ್ವಲ್ಪ ಕಾಟ ನೀಡಬಹುದು. ಇಂಗ್ಲೆಂಡ್ ಪರ ಮಾರ್ಕ್ ವುಡ್ 34 ಟಿ20 ಪಂದ್ಯಗಳ 33 ಇನ್ನಿಂಗ್ಸ್ ಗಳಲ್ಲಿ 50 ವಿಕೆಟ್ ಪಡೆದಿದ್ದಾರೆ.