IND vs ENG: ಎಂಎಸ್ ಧೋನಿ ದಾಖಲೆ ಅಳಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-1 ಸಮಬಲ ಸಾಧಿಸಿದೆ. ಮೊದಲ ಪಂದ್ಯದಂತೆ ಈ ಪಂದ್ಯವೂ ನಾಲ್ಕು ದಿನಗಳ ಕಾಲ ನಡೆಯಿತು. ಈ ಪಂದ್ಯ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶೇಷವಾಗಿತ್ತು.
ಈ ಪಂದ್ಯದಲ್ಲಿ ಬ್ಯಾಟ್‌ನಿಂದ ಅದ್ಭುತ ಪ್ರದರ್ಶನ ನೀಡಲು ಸಾಧ್ಯವಾಗದಿದ್ದರೂ, ಉತ್ತಮ ಕ್ಯಾಚ್‌ನ್ನು ಪಡೆಯುವ ಮೂಲಕ ರೋಹಿತ್ ಎಲ್ಲರ ಗಮನ ಸೆಳೆದರು. ಅಲ್ಲದೆ ತಮ್ಮ ನಾಯಕತ್ವದಲ್ಲಿ ಟೀಮ್ ಇಂಡಿಯಾ ಐಸಿಸಿ ಇವೆಂಟ್‌ಗಳನ್ನು ಗೆಲ್ಲದೇ ಇದ್ದರೂ ಏನಂತೆ, ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ತಾನೇ ಸ್ಟ್ರಾಂಗ್ ಎಂದು ಸಾಬೀತು ಪಡಿಸಿದರು. ರೋಹಿತ್ ಶರ್ಮಾ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆಯನ್ನು ಮಾಡಿದ್ದಾರೆ.

ವಿಶಾಖಪಟ್ಟಣಂ ಟೆಸ್ಟ್ ಪಂದ್ಯದ ಗೆಲುವಿನ ನಂತರ ರೋಹಿತ್ ಶರ್ಮಾ ಭಾರತ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅವರು ಎಂಎಸ್ ಧೋನಿಯನ್ನು ಹಿಂದೆ ಬಿಟ್ಟಿದ್ದಾರೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಟೀಂ ಇಂಡಿಯಾ ಪರ ಎಲ್ಲಾ ಮೂರು ಮಾದರಿಗಳು ಸೇರಿದಂತೆ ಒಟ್ಟು 469 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಟೀಂ ಇಂಡಿಯಾ ಒಟ್ಟು 296 ಪಂದ್ಯಗಳನ್ನು ಗೆದ್ದಿದೆ. ಆದರೆ, ಎಂಎಸ್ ಧೋನಿ ಭಾರತಕ್ಕಾಗಿ 535 ಪಂದ್ಯಗಳನ್ನು ಆಡಿದ್ದಾರೆ. ಈ ಪೈಕಿ ಟೀಂ ಇಂಡಿಯಾ 295 ಪಂದ್ಯಗಳನ್ನು ಗೆದ್ದಿತ್ತು.
ಐಸಿಸಿ ಎಲ್ಲ ಪ್ರಶಸ್ತಿ ಗೆದ್ದ ನಾಯಕ
ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಐಸಿಸಿ 2027 ಟಿ20 ವಿಶ್ವಕಪ್, ಐಸಿಸಿ 2011 ಏಕದಿನ ವಿಶ್ವಕಪ್, ಐಸಿಸಿ ಚಾಂಪಿಯನ್ಸ್ ಟ್ರೋಫಿಗಳನ್ನು ಗೆದ್ದು ಸಾಧನೆ ಮಾಡಿದೆ. ಅಲ್ಲದೆ ವಿಶ್ವದಲ್ಲೇ ಐಸಿಸಿ ಆಯೋಜಿತ ಪಂದ್ಯಗಳನ್ನು ಗೆದ್ದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಲಿದ್ದಾರೆ.

ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ
ಟೀಂ ಇಂಡಿಯಾ ಪರ ಅತಿ ಹೆಚ್ಚು ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟ ಆಟಗಾರರಲ್ಲಿ ವಿರಾಟ್ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ. ವಿರಾಟ್ ಕೊಹ್ಲಿ ಟೀಂ ಇಂಡಿಯಾದ 313 ಜಯದಲ್ಲಿ ಭಾಗಿಯಾಗಿದ್ದಾರೆ. ಆದರೆ, ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಸಚಿನ್ ತೆಂಡೂಲ್ಕರ್ ಭಾರತದ ಪರ 307 ಪಂದ್ಯಗಳನ್ನು ಗೆದ್ದಿರುವ ದಾಖಲೆಯನ್ನು ಹೊಂದಿದ್ದರು. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ಭಾರತಕ್ಕೆ 300 ಪಂದ್ಯಗಳನ್ನು ಗೆದ್ದ ಕ್ಲಬ್‌ಗೆ ಸೇರಲು ಕೇವಲ 4 ಗೆಲುವು ದೂರದಲ್ಲಿ ನಿಂತಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಅವರ ಹೆಸರು ಸಹ ಇದೆ. ಯುವರಾಜ್ ಸಿಂಗ್ ಆಡಿದ 227 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ.
ಭಾರತಕ್ಕಾಗಿ ಅತಿ ಹೆಚ್ಚು ಪಂದ್ಯಗಳನ್ನು ಗೆದ್ದ ಆಟಗಾರರು
- 313 ಗೆಲುವು- ವಿರಾಟ್ ಕೊಹ್ಲಿ
- 307 ಗೆಲುವು- ಸಚಿನ್ ತೆಂಡೂಲ್ಕರ್
- 296 ಗೆಲುವು- ರೋಹಿತ್ ಶರ್ಮಾ
- 295 ಗೆಲುವು- ಎಂಎಸ್ ಧೋನಿ
- 227 ಗೆಲುವು- ಯುವರಾಜ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications