ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಇತಿಹಾಸದಲ್ಲಿ 90 ವರ್ಷಗಳಿಂದ ಅಸಾಧ್ಯವಾಗಿದ್ದ ದಾಖಲೆ ಬರೆಯಲು ಭಾರತಕ್ಕೆ ಅಪೂರ್ವ ಅವಕಾಶ!

Ind vs Eng: Team India eye on rewriting 90 years record of Test cricket History

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನಾಡಲು ಭಾರತ ಈಗಾಗಲೇ ಇಂಗ್ಲೆಂಡ್‌ಗೆ ತೆರಳಿದ್ದು ಅದಕ್ಕಾಗಿ ಅಭ್ಯಾಸವನ್ನು ನಡೆಸುತ್ತಿದೆ. ಕಳೆದ ವರ್ಷ ಆಯೋಜನೆಯಾಗಿದ್ದ ಐದು ಪಂದ್ಯಗಳ ಈ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಮಾತ್ರವೇ ಬಾಕಿಯಿದ್ದು ಈ ಪಂದ್ಯದಲ್ಲಿ ಭಾರತ ಕನಿಷ್ಠ ಡ್ರಾ ಸಾಧಿಸಿದರೂ ಸರಣಿಯನ್ನು ವಶಕ್ಕೆ ಪಡೆಯುವ ಅವಕಾಶವಿದೆ.

ಐದು ಪಂದ್ಯಗಳ ಈ ಸರಣಿಯಲ್ಲಿ ಭಾರತ ಈಗಾಗಲೇ 2-1 ಅಂತರದಿಂದ ಮೇಲುಗೈ ಸಾಧಿಸಿದೆ. ಹೀಗಾಗಿ ಇಂಗ್ಲೆಂಡ್ ನೆಲದಲ್ಲಿ ಸುದೀರ್ಘ ಕಾಲದ ಬಳಿಕ ಟೆಸ್ಟ್ ಸರಣಿ ಗೆಲ್ಲುವ ಅವಕಾಶ ಭಾರತಕ್ಕೆ ದೊರೆತಿದೆ. ಇನ್ನು ಭಾರತ ತಂಡ ಈ ಸರಣಿಯಲ್ಲಿ ಗೆಲುವು ಸಾಧಿಸಿದರೆ ಬರೊಬ್ಬರಿ 90 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲೊ ದೊಡ್ಡ ದಾಖಲೆಯೊಂದನ್ನು ಬರೆದಂತಾಗುತ್ತದೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ ಶರ್ಮಾ; ವಿಶೇಷ ಪತ್ರ ಬರೆದ ಹಿಟ್‌ಮ್ಯಾನ್ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ ಶರ್ಮಾ; ವಿಶೇಷ ಪತ್ರ ಬರೆದ ಹಿಟ್‌ಮ್ಯಾನ್

ಹಾಗಾದರೆ ಭಾರತ ತಂಡಕ್ಕೆ ಬರೆಯಲು ಅವಕಾಶವಿರುವ ಆ ದೊಡ್ಡ ದಾಖಲೆ ಯಾವುದು? ಮುಂದೆ ಓದಿ..

ಕೊಹ್ಲಿ ಜವಾಬ್ಧಾರಿ ಮುಗಿದಿದೆ, ರೋಹಿತ್ ಕೆಲಸ ಬಾಕಿಯಿದೆ

ಕೊಹ್ಲಿ ಜವಾಬ್ಧಾರಿ ಮುಗಿದಿದೆ, ರೋಹಿತ್ ಕೆಲಸ ಬಾಕಿಯಿದೆ

ಕಳೆದ ವರ್ಷ ನಡೆದ ಸರಣಿಯ ಮೊದಲ ನಾಲ್ಕು ಪಂದ್ಯದಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿತ್ತು. ವಿರಾಟ್ ಕೊಹ್ಲಿ ನೇತೃತ್ವದಲ್ಲಿ ನಡೆದ ಈ ಸರಣಿಯಲ್ಲಿ ಭಾರತ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ಒಂದು ಪಂದ್ಯದಲ್ಲಿ ಸೋಲು ಅನುಭವಿಸಿದ್ದರೆ ಮತ್ತೊಂದು ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಈ ಮೂಲಕ ವಿರಾಟ್ ಕೊಹ್ಲು ನಾಯಕನಾಗಿ ತಮ್ಮ ಜವಾಬ್ಧಾರಿಯನ್ನು ಅದ್ಭುತವಾಗಿ ಮುಗಿಸಿದ್ದಾರೆ. ಇದೀಗ ರೋಹಿತ್ ಶರ್ಮಾ ಮುಂದೆ ಜವಾಬ್ಧಾರಿಯಿದ್ದು ಅಂತಿಮ ಪಂದ್ಯದಲ್ಲಿ ಭಾರತ ತನ್ನ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಸರಣಿ ಗೆಲುವು ಸಾಧ್ಯವಾಗುವಂತೆ ಮಾಡಬೇಕಿದೆ.

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ದಾಖಲೆ ಮಾಡಲಿದೆಯಾ ಭಾರತ

ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ದಾಖಲೆ ಮಾಡಲಿದೆಯಾ ಭಾರತ

ಭಾರತ ಕ್ರಿಕೆಟ್ ತಂಡ ಟೆಸ್ಟ್ ಸರಣಿಯನ್ನಾಡಲು ಮೊದಲ ಬಾರಿಗೆ ಯುನೈಟೆಡ್ ಕಿಂಗ್‌ಡಮ್‌ಗೆ ಪ್ರಯಾಣ ಬೆಳೆಸಿದ್ದು 90 ವರ್ಷಗಳ ಹಿಂದೆ. 1932ರಲ್ಲಿ. ಅಲ್ಲಿಂದ ಈವರೆಗೆ ಭಾರತ ಇಂಗ್ಲೆಂಡ್ ನೆಲದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಒಂದು ಬಾರಿಯೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಆದರೆ ಈ ಬಾರಿ ಅದನ್ನು ಮುರಿಯುವ ಅದ್ಭುತ ಅವಕಾಶವಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಗೆದ್ದು ಭಾರತ ಸಾಧನೆ ಮಾಡಲಿದೆಯಾ ಎಂಬುದು ಈಗ ಇರುವು ಕುತೂಹಲ.

2021-22ರ ಟೆಸ್ಟ್ ಸರಣಿಯ ಫಲಿತಾಂಶಗಳು

2021-22ರ ಟೆಸ್ಟ್ ಸರಣಿಯ ಫಲಿತಾಂಶಗಳು

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದಿತ್ತು. ಈ ಪಂದ್ಯ ಡ್ರಾ ಫಲಿತಾಂಶದೊಂದಿಗೆ ಅಂತ್ಯವಾಗಿತ್ತು. ಲಾರ್ಡ್ಸ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ ತಂಡ 151 ರನ್‌ಗಳ ಅಂತರದಿಂದ ಗೆದ್ದುಕೊಂಡಿತ್ತು. ಬಳಿಕ ಹೆಡಿಂಗ್ಲೆಯಲ್ಲಿ ನಡೆದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ ಇನ್ನಿಂಗ್ಸ್ 76 ರನ್‌ಗಳ ಅಂತರದಿಂದ ಸೋಲು ಅನುಭವಿಸಿತ್ತು. ಬಳಿಕ ಓವಲ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 157 ರನ್‌ಗಳ ಬೃಹತ್ ಅಂತರದಿಂದ ಭಾರತ ಗೆಲುವು ಸಾಧಿಸಿದೆ.

ಭಾರತ ಸ್ಕ್ವಾಡ್ ಹೀಗಿದೆ

ಭಾರತ ಸ್ಕ್ವಾಡ್ ಹೀಗಿದೆ

ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಹನುಮ ವಿಹಾರಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ , ಕೆಎಸ್ ಭರತ್ (ವಿಕೆಟ್ ಕೀಪರ್).

Story first published: Friday, June 24, 2022, 10:29 [IST]
Other articles published on Jun 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X