IND vs ENG: ಪ್ರಥಮ ಪಂದ್ಯದಲ್ಲಿ ಕಣಕ್ಕಿಳಿಯುವ ಭಾರತ ಸಂಭಾವ್ಯ ತಂಡ; ರೋಹಿತ್ ಜತೆ ಈತ ಆರಂಭಿಕ ಆಟಗಾರ

ಇಂಗ್ಲೆಂಡ್ ಪ್ರವಾಸದಲ್ಲಿ ನಿರತವಾಗಿರುವ ಟೀಮ್ ಇಂಡಿಯಾ ಈಗಾಗಲೇ ಕಳೆದ ವರ್ಷದಿಂದ ಮುಂದೂಡಲ್ಪಟ್ಟಿದ್ದ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯ ಹಾಗೂ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡಿ ಮುಗಿಸಿದ್ದು, ಟೆಸ್ಟ್ ಪಂದ್ಯದಲ್ಲಿ ಸೋತು ಟಿ ಟ್ವೆಂಟಿ ಸರಣಿಯಲ್ಲಿ 2-1 ಅಂತರದ ಜಯ ಸಾಧಿಸುವುದರ ಮೂಲಕ ಟೆಸ್ಟ್ ಸೋಲಿನ ಸೇಡನ್ನು ತೀರಿಸಿಕೊಂಡಿದೆ.
ಟಿ ಟ್ವೆಂಟಿ ಸರಣಿ ಗೆಲುವಿನ ಹುಮ್ಮಸ್ಸಿನಲ್ಲಿರುವ ಟೀಮ್ ಇಂಡಿಯಾ ನಾಳೆಯಿಂದ ( ಜುಲೈ 12 ) ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟವನ್ನು ನಡೆಸಲಿದ್ದು, ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸಿರುವ ಯೋಜನೆಯಲ್ಲಿದೆ.
ಇನ್ನು ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿದಿದ್ದ ಭಾರತ ತಂಡಕ್ಕಿಂತ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡ ತುಸು ಭಿನ್ನವಾಗಿರಲಿದ್ದು, ಆಟಗಾರರಲ್ಲಿ ಹಲವು ಬದಲಾವಣೆಗಳು ಆಗುವುದು ಖಚಿತ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಯಾವ ಆಟಗಾರರು ಆರಂಭಿಕರಾಗಿ ಕಣಕ್ಕಿಳಿಯಬಹುದು ಮತ್ತು ತಂಡದ ಆಡುವ ಬಳಗ ಹೇಗಿರಲಿದೆ ಎಂಬುದರ ಕುರಿತಾದ ಚರ್ಚೆಗಳು ನಡೆಯುತ್ತಿದ್ದು, ಈ ಕುರಿತಾದ ಮಾಹಿತಿ ಮುಂದೆ ಇದೆ ಓದಿ.

ರೋಹಿತ್ ಜತೆ ಈತ ಆರಂಭಿಕ ಆಟಗಾರ
ಈ ಸರಣಿಗೂ ಕೂಡ ಟೀಮ್ ಇಂಡಿಯಾದ ಆರಂಭಿಕ ಆಟಗಾರನಾಗಿದ್ದ ಕೆಎಲ್ ರಾಹುಲ್ ಅಲಭ್ಯರಾಗಿದ್ದು, ನಾಯಕ ರೋಹಿತ್ ಶರ್ಮಾ ಜತೆ ಯಾವ ಆಟಗಾರ ಇನ್ನಿಂಗ್ಸ್ ಆರಂಭಿಸಬಹುದು ಎಂಬ ಪ್ರಶ್ನೆ ಮೂಡಿದೆ. ಸದ್ಯ ಟೀಮ್ ಇಂಡಿಯಾಗೆ ಮರಳಿರುವ ಶಿಖರ್ ಧವನ್ ರೋಹಿತ್ ಶರ್ಮಾ ಜತೆ ಹಲವು ಪಂದ್ಯಗಳ ಅಂತರದ ಬಳಿಕ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಮಧ್ಯಮ ಕ್ರಮಾಂಕ ಹೇಗಿರಲಿದೆ?
ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಇಂಗ್ಲೆಂಡ್ ವಿರುದ್ಧ ಓವಲ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದರೆ, ಮೂರನೇ ಕ್ರಮಾಂಕದಲ್ಲಿ ಮಾಜಿ ನಾಯಕ ವಿರಾಟ್ ಕೊಹ್ಲಿ ಆಡಲಿದ್ದಾರೆ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಐದನೇ ಮತ್ತು ಆರನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಹಾಗೂ ಹಾರ್ದಿಕ್ ಪಾಂಡ್ಯಾ ಕಣಕ್ಕಿಳಿಯಲಿದ್ದು, ಆಲ್ ರೌಂಡರ್ ವಿಭಾಗದಲ್ಲಿ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಮಧ್ಯೆ ಪೈಪೋಟಿ ಇದ್ದು, ಜಡೇಜಾ ಕಣಕ್ಕಿಳಿಯುವ ಸಾಧ್ಯತೆಗಳು ಹೆಚ್ಚಿವೆ. ಸ್ಪಿನ್ನರ್ ಯುಜುವೇಂದ್ರ ಚಾಹಲ್ ಜತೆ ಶಾರ್ದೂಲ್ ಠಾಕೂರ್ ಆಡುವ ಸಾಧ್ಯತೆ ಇದ್ದು, ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಕಣಕ್ಕಿಳಿಯಲಿದ್ದಾರೆ.

ಒಟ್ಟಾರೆ ಸಂಭಾವ್ಯ ಆಡುವ ಬಳಗ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ( ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಶಮಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications