For Quick Alerts
ALLOW NOTIFICATIONS  
For Daily Alerts
 

IND vs ENG: ವಿರಾಟ್‌ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ ಚೇತೇಶ್ವರ್ ಪೂಜಾರ, ಮಯಾಂಕ್‌ ಅಗರ್‌ವಾಲ್‌

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡಕ್ಕೆ ಪೆಟ್ಟು ಬಿದ್ದಿದೆ. ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ವೈಯಕ್ತಿಕ ಕಾರಣಗಳಿಂದ ಆರಂಭಿಕ ಎರಡು ಟೆಸ್ಟ್‌ ಪಂದ್ಯಗಳಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಇವರ ಸ್ಥಾನವನ್ನು ಶೀಘ್ರವಾಗಿ ತುಂಬಲು ಬಿಸಿಸಿಐ ಪ್ಲ್ಯಾನ್ ನಡೆಸಿದೆ. ಈ ಹಿನ್ನೆಲೆಯಲ್ಲಿ ತಂಡದಿಂದ ಬಹುದಿನಗಳ ಕಾಲ ದೂರಉಳಿದು ದೇಶೀಯ ಪಂದ್ಯಗಳಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಆಟಗಾರರಿಗೆ ಜಾಕ್ ಪಾಟ್ ಹೊಡೆಯುವ ನಿರೀಕ್ಷೆ ಇದೆ.

ಜನವರಿ 25 ಮತ್ತು ಜನವರಿ 29 ರ ನಡುವೆ ಹೈದರಾಬಾದ್‌ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯ ನಡೆಯಲಿದೆ. ಹೀಗಿರುವಾಗ ಕೊಹ್ಲಿ ಇಲ್ಲದಿದ್ದರೆ ಮುಂದಿನ ಪಂದ್ಯದಲ್ಲಿ ಕೊಹ್ಲಿ ಬದಲಿಗೆ ಯಾರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಕೊಹ್ಲಿ ಸ್ಥಾನ ತುಂಬಲು ಇಬ್ಬರು ಟೀಮ್ ಇಂಡಿಯಾದ ಆಟಗಾರರು ದೇಶೀಯ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿದದಾರೆ. ಅದರಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳುವ ಹೆಸರುಗಳು ಎಂದ್ರೆ ಚೇತೇಶ್ವರ್ ಪೂಜಾರ ಹಾಗೂ ಕರ್ನಾಟಕದ ಮಯಾಂಕ್‌ ಅಗರ್‌ವಾಲ್‌.

 IND vs ENG Test: Cheteshwar Pujara, Mayank Agarwal eyeing Virat Kohli position

ಚೇತೇಶ್ವರ್ ಪೂಜಾರ ಕಳಪೆ ಫಾರ್ಮ್‌ ಹಿನ್ನೆಲೆಯಲ್ಲಿ ಟೆಸ್ಟ್ ತಂಡದಿಂದ ಕೈ ಬಿಡಲಾಗಿತ್ತು. ಆದರೆ ಇದಕ್ಕೆ ತಲೆ ಕೆಡಿಸಿಕೊಳ್ಳದ ಪೂಜಾರ ದೇಶೀಯ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ್ದಾರೆ. ಕೊಹ್ಲಿ ಸ್ಥಾನವನ್ನು ತುಂಬ ಬಲ್ಲ ಆಟಗಾರರ ಪಟ್ಟಿಯಲ್ಲಿ ಎದ್ದು ಕಾಣುವ ಮೊದಲ ಹೆಸರು ಚೇತೇಶ್ವರ್ ಪೂಜಾರ.

ಇತ್ತೀಚೆಗೆ ರಣಜಿ ಟ್ರೋಫಿಯಲ್ಲಿ ಜಾರ್ಖಂಡ್ ವಿರುದ್ಧ ಆಡುವಾಗ ಆಟಗಾರ ದ್ವಿಶತಕ ಗಳಿಸಿದ್ದರು. ಪೂಜಾರ ಜಾರ್ಖಂಡ್ ವಿರುದ್ಧ 243 ​​ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಈ ಇನ್ನಿಂಗ್ಸ್‌ನಲ್ಲಿ ಅವರ ಬ್ಯಾಟ್‌ನಿಂದ 30 ಬೌಂಡರಿಗಳೂ ಹರಿದ ಬಂದಿದ್ದವು. ವಿಶೇಷವೆಂದರೆ ಪೂಜಾರ ಪ್ರಥಮ ದರ್ಜೆ ಕ್ರಿಕೆಟ್ ನಲ್ಲೂ 20 ಸಾವಿರ ರನ್ ಪೂರೈಸಿದ್ದಾರೆ. ಪ್ರಸಕ್ತ ರಣಜಿ ಟೂರ್ನಿಯಲ್ಲಿ ಪೂಜಾರ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇವರು ಐದು ಇನ್ನಿಂಗ್ಸ್‌ಗಳಲ್ಲಿ 111ರ ಸರಾಸರಿಯೊಂದಿಗೆ 444 ರನ್‌ ಕಲೆ ಹಾಕಿದ್ದಾರೆ. ಈ ಪ್ರದರ್ಶನವನ್ನು ನೋಡಿದರೆ ಪೂಜಾರ, ಕೊಹ್ಲಿ ಬದಲಿಗೆ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

 IND vs ENG Test: Cheteshwar Pujara, Mayank Agarwal eyeing Virat Kohli position

ತವರಿನಲ್ಲಿ ಪೂಜಾರ ಪ್ರದರ್ಶನ

ತವರಿನ ಅಂಗಳದಲ್ಲಿ ಚೇತೇಶ್ವರ್ ಪೂಜಾರ ಸ್ಥಿರವಾಗಿ ಬ್ಯಾಟಿಂಗ್ ಮಾಡಬಲ್ಲರು. ಇವರು ಭಾರತದಲ್ಲಿ ಆಡಿದ 51 ಪಂದ್ಯಗಳಲ್ಲಿ 3839 ರನ್‌ ಸಿಡಿಸಿದ್ದಾರೆ. ಈ ವೇಳೆ 10 ಶತಕ ಹಾಗೂ 20 ಅರ್ಧಶತಕಗಳು ಸೇರಿವೆ. ಚೇತೇಶ್ವರ್ ಪೂಜಾರ ಇಂಗ್ಲೆಂಡ್ ವಿರುದ್ಧ ಸ್ಥಿರ ಪ್ರದರ್ಶನ ನೀಡಿದ್ದಾರೆ. ಇವರು ಆಡಿದ 27 ಪಂದ್ಯಗಳ 49 ಇನ್ನಿಂಗ್ಸ್‌ಗಳಲ್ಲಿ 1778 ರನ್‌ ಕಲೆ ಹಾಕಿದ್ದಾರೆ. ಅಲ್ಲದೆ 5 ಶತಕ ಹಾಗೂ 7 ಅರ್ಧಶತಕಗಳು ಸೇರಿವೆ.

682 ದಿನಗಳಿಂದ ಟೀಮ್ ಇಂಡಿಯಾದಿಂದ ದೂರ

ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್‌ ಅಗರ್‌ವಾಲ್‌ ರಾಷ್ಟ್ರೀಯ ತಂಡಕ್ಕೆ ಮರಳಲು ಪ್ಲ್ಯಾನ್‌ ಮಾಡಿಕೊಂಡಿದ್ದಾರೆ. ಸುಮಾರು 682 ದಿನಗಳಿಂದ ಟೀಮ್ ಇಂಡಿಯಾ ಪರ ಟೆಸ್ಟ್‌ ತಂಡದಲ್ಲಿ ಕಾಣಿಸಿಕೊಳ್ಳಲಿಲ್ಲ. ಹೀಗಾಗಿ ಮಯಾಂಕ್‌ ಸಹ ಈ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದಾರೆ. ಮಯಾಂಕ್‌ ಅಗರ್‌ವಾಲ್‌ 21 ಪಂದ್ಯಗಳ 1488 ರನ್‌ ಗಳಿಸಿದ್ದಾರೆ. ಈ ವೇಳೆ 4 ಶತಕ ಹಾಗೂ 6 ಅರ್ಧಶತಕ ಸಿಡಿಸಿದ್ದಾರೆ. ಭಾರತದಲ್ಲಿ ಇವರು ಆಡಿದ 9 ಪಂದ್ಯಗಳಲ್ಲಿ 898 ರನ್ ಸಿಡಿಸಿದ್ದಾರೆ.

ಮಯಾಂಕ್‌ ಅಗರ್‌ವಾಲ್‌ ರಣಜಿ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದಾರೆ. ಮಯಾಂಕ್‌ ಆಡಿದ 3 ಪಂದ್ಯಗಳಲ್ಲಿ 341 ರನ್ ಸಿಡಿಸಿದ್ದಾರೆ. ಇದರಲ್ಲಿ 2 ಶತಕ ಸೇರಿವೆ.

Story first published: Tuesday, January 23, 2024, 14:53 [IST]
Other articles published on Jan 23, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+