ಭಾರತದಲ್ಲಿ ಐಪಿಎಲ್ 18ನೇ ಸೀಸನ್ ಅಬ್ಬರ ಜೋರಾಗಿದೆ. ಮಾರ್ಚ್ 22 ರಂದು ಪ್ರಾರಂಭವಾದ ಐಪಿಎಲ್ 2025 ರ ಲೀಗ್ ಮೇಲೆ ಇಡೀ ವಿಶ್ವ ಕ್ರಿಕೆಟ್ ಚಿತ್ತ ನೆಟ್ಟಿದೆ. ಮೇ 25 ರಂದು ಫೈನಲ್ ಪಂದ್ಯ ನಡಯಲಿದೆ. ಐಪಿಎಲ್ ಮುಗಿಯಲು ಇನ್ನೂ ಒಂದು ತಿಂಗಳು ಬಾಕಿ ಇದೆ. ಟಿ20 ಲೀಗ್ ಮುಗಿದ ನಂತರ ಟೀಮ್ ಇಂಡಿಯಾದ ಇಂಗ್ಲೆಂಡ್ ಪ್ರವಾಸದ ಮೇಲೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಕಣ್ಣಿಟ್ಟಿದ್ದಾರೆ.
ಜೂನ್‌ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಿದೆ. ಈ ಪ್ರವಾಸದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿವೆ. ಈ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಭವಿಷ್ಯ ನಿರ್ಧಾರವಾಗಲಿದೆ.

ಈ ವರ್ಷ ಆರಂಭದಲ್ಲಿ ಆಸ್ಟ್ರೇಲಿಯಾ ವಿರುದ್ಧ 10 ವರ್ಷಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯನ್ನು ಭಾರತ ಸೋತಿದೆ. ಹೀಗಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಬಲಿಷ್ಠ ಭಾರತ ತಂಡವನ್ನು ಕಳುಹಿಸುವ ಜವಾಬ್ದಾರಿ ಬಿಸಿಸಿಐ ಆಯ್ಕೆ ಸಮಿತಿ ಮೇಲಿದೆ. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ಸ್ ಸ್ಪರ್ಧೆಯ ನಡುವೆ, ಇಂಗ್ಲೆಂಡ್ ಪ್ರವಾಸಕ್ಕೆ ರೋಹಿತ್ ಶರ್ಮಾ ಅವರಿಗೆ ತಂಡದಲ್ಲಿ ಅವಕಾಶ ಸಿಗುತ್ತದೆಯೇ ಅಥವಾ ಬದಲಿಗೆ ಯಾವ ಆಟಗಾರರಿಗೆ ಅವಕಾಶ ಸಿಗಬಹುದು? ಎಂಬ ಪ್ರಶ್ನೆ ಮೂಡಿದೆ.
ವರದಿಗಳ ಪ್ರಕಾರ, ಇಂಗ್ಲೆಂಡ್ ವಿರುದ್ಧದ ಮಹತ್ವ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಆ ಸಮಯದಲ್ಲಿ ರೋಹಿತ್ ಶರ್ಮಾ ಆಡಲು ಸಂಪೂರ್ಣವಾಗಿ ಫಿಟ್ ಆಗಿದ್ದರೆ, ಅವರು ಇಂಗ್ಲೆಂಡ್ ಪ್ರವಾಸಕ್ಕೆ ಟಿಕೆಟ್ ಪಡೆಯಲಿದ್ದಾರೆ. ರೋಹಿತ್ ಶರ್ಮಾ ನೇತೃತ್ವದಲ್ಲಿ ಭಾರತ ತಂಡ ತವರಿನಲ್ಲಿ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾದಲ್ಲಿ 2 ಟೆಸ್ಟ್ ಸರಣಿಗಳನ್ನು ಹೀನಾಯವಾಗಿ ಸೋತಿದೆ. ಆದರೂ, ಬಿಸಿಸಿಐ ರೋಹಿತ್ ಶರ್ಮಾ ಅವರ ಮೇಲಿನ ವಿಶ್ವಾಸವನ್ನು ಉಳಿಸಿಕೊಂಡಿದೆ.
ಇಂಗ್ಲೆಂಡ್ ಪ್ರವಾಸದಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಗೆ 17 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಎಲ್ಲಾ ಪ್ರಮುಖ ಆಟಗಾರರಿಗೆ ಅವಕಾಶ ಸಿಗುವುದು ಖಚಿತ. ಶುಭಮನ್ ಗಿಲ್, ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್ ಅವರಂತಹ ಎಲ್ಲಾ ಪ್ರಮುಖ ಬ್ಯಾಟರ್ಸ್ ತಂಡದಲ್ಲಿರಲಿದ್ದಾರೆ. ಇನ್ನೂ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರ ಸ್ಥಾನ ಭದ್ರವಾಗಿದೆ. ಅಲ್ಲದೆ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್ ಮತ್ತು ನಿತೀಶ್‌ಕುಮಾರ್ ರೆಡ್ಡಿ ಅವರಿಗೂ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
ಇಂಗ್ಲೆಂಡ್ ಪ್ರವಾಸದ ಭಾರತ ತಂಡದ ಮಧ್ಯಮ ಕ್ರಮಾಂಕಕ್ಕಾಗಿ 6 ಬ್ಯಾಟಸ್ ನಡುವೆ ಸ್ಪರ್ಧೆ ನಡೆಯಲಿದೆ. ಇತ್ತೀಚಿನ ದಿನಗಳಲ್ಲಿ ಹಲವು ಆಟಗಾರರು ಉತ್ತಮ ಫಾರ್ಮ್‌ನಲಿದ್ದಾರೆ. ಇದರಲ್ಲಿ ಬಹುಮುಖ್ಯವಾಗಿ ಕರುಣ್ ನಾಯರ್ ಅವರ ಹೆಸರನ್ನು ಮುಂಚೂಣಿಯಲ್ಲಿದೆ. ಅವರು ದೇಶೀಯ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಶತಕದ ಮೇಲೆ ಶತಕ ಬಾರಿಸಿ ದಾಖಲೆ ಮಾಡಿದ್ದಾರೆ. ಹೀಗಾಗಿ ಅವರಿಗೆ ಬಿಸಿಸಿಐ ಆಯ್ಕೆ ಸಮಿತಿ ಭಾರತ ಎ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಇದರೊಂದಿಗೆ ಯುವ ಬ್ಯಾಟರ್ ಸಾಯಿ ಸುದರ್ಶನ, ರಜತ್ ಪಾಟಿದಾರ್, ದೇವದತ್ ಪಡಿಕ್ಕಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ರೇಸ್‌ನಲ್ಲಿದ್ದಾರೆ.