ಇಂಗ್ಲೆಂಡ್ ವಿರುದ್ಧದ ಅಂತಿಮ 2 ಟೆಸ್ಟ್ ಪಂದ್ಯಗಳಿಗೆ ಟೀಮ್ ಇಂಡಿಯಾ ಪ್ರಕಟ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಭಾರತ ತಂಡದ 17 ಆಟಗಾರರ ಹೆಸರನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮೊಹಮ್ಮದ್ ಶಮಿ ಇಂಗ್ಲೆಂಡ್ ವಿರುದ್ಧದ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಬಹುದು ಎಂಬ ನಿರೀಕ್ಷೆಯೂ ಹುಸಿಯಾಗಿದೆ. ಗಾಯಗೊಂಡು ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದ ಶಮಿ ಇಂಗ್ಲೆಂಡ್ ವಿರುದ್ಧದ ಅಂತಿಮ ಎರಡು ಪಂದ್ಯಗಳಿಗೆ ಲಭ್ಯರಾಗಬಹುದು ಎಂಬ ನಿರೀಕ್ಷೆಯಿತ್ತು. ಜೊತೆಗೆ ಆಲ್‌ರೌಂಡರ್ ರವೀಂದ್ರ ಜಡೇಜಾ ಕೂಡ ಇಂಗ್ಲೆಂಡ್ ವಿರುದ್ಧದ ಸಂಪೂರ್ಣ ಟೆಸ್ಟ್‌ನಿಂದ ಹೊರಬಿದ್ದಂತಾಗಿದೆ. ರವೀಂದ್ರ ಜಡೇಜಾ ಕೂಡ ಆಸಿಸ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಬೆರಳಿಗೆ ಗಾಯ ಮಾಡಿಕೊಂಡಿದ್ದರು.

ಶಾರ್ದೂಲ್ ಬದಲಿಗೆ ಉಮೇಶ್ ಯಾದವ್
ಮತ್ತೊಂದೆಡೆ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಉಮೇಶ್ ಯಾದವ್ ಚೇತರಿಕೆ ಕಂಡಿದ್ದಾರೆ. ಬಿಸಿಸಿಐ ಬುಧವಾರ ಪ್ರಕಟಿಸಿರುವ 17 ಆಟಗಾರರ ಪಟ್ಟಿಯಲ್ಲಿ ಉಮೇಶ್ ಯಾದವ್ ಸ್ಥಾನವನ್ನು ಪಡೆದುಕೊಂಡಿಲ್ಲ. ಆದರೆ ಫಿಟ್ನೆಸ್ ಪರೀಕ್ಷೆಯ ನಂತರ ಉಮೇಶ್ ಯಾದವ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗುತ್ತದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಉಮೇಶ್ ಯಾದವ್‌ಗಾಗಿ ಶಾರ್ದೂಲ್ ಠಾಕೂರ್ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ.

ಟೀಮ್ ಇಂಡಿಯಾ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಕುಲದೀಪ್ ಯಾದವ್, ಆಕ್ಷರ್ ಪಟೇಲ್ ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು ಹಾಗೂ ನೆಟ್ ಬೌಲರ್‌ಗಳು
ಇನ್ನು ತಂಡದ ನೆಟ್‌ಬೌಲರ್‌ಗಳಾಗಿ ಅಂಕಿತ್ ರಾಜ್‌ಪೂತ್, ಅವೇಶ್ ಖಾನ್, ಸಂದೀಪ್ ವಾರಿಯರ್, ಕೃಷ್ಣಪ್ಪ ಗೌತಮ್, ಸೌರಭ್ ಕುಮಾರ್ ಅವಕಾಶ ಪಡೆದುಕೊಂಡಿದ್ದು, ಕೆ.ಎಸ್.ಭಾರತ್, ರಾಹುಲ್ ಚಾಹರ್ ಮೀಸಲು ಆಟಗಾರರಾಗಿ ತಂಡದ ಜೊತೆಯಲ್ಲಿ ಇರಲಿದ್ದಾರೆ.

ಪಂದ್ಯಕ್ಕೂ ಮುನ್ನ ಐಪಿಎಲ್ ಮಿನಿ ಹರಾಜು
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆಬ್ರವರಿ 24ರಿಂದ ಆರಂಭವಾದರೆ ನಾಲ್ಕನೇ ಪಂದ್ಯ ಮಾರ್ಚ್ 4ರಿಂದ ಆರಂಭವಾಗಲಿದೆ. ಈ ಎರಡು ಟೆಸ್ಟ್ ಪಂದ್ಯಗಳಿಗೂ ಮುನ್ನ ಫೆಬ್ರವರಿ 18ರಂದು ಬಹುನಿರೀಕ್ಷಿತ ಐಪಿಎಲ್ ಮನಿ ಹರಾಜು ಪ್ರಕ್ರಿಯೆ ನಡೆಯಲಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications