ಮ್ಯಾಂಚೆಸ್ಟರ್ ಟೆಸ್ಟ್ ರದ್ದು: ಇಂಗ್ಲೆಂಡ್‌ಗೆ ಕೋಟಿ ಕೋಟಿ ನಷ್ಟ; ರದ್ದಾದ ಈ ಪಂದ್ಯ ಮತ್ತೆ ನಡೆಯುತ್ತೆ!

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಗೀಡಾಗಿರುವ ವಿಷಯವಾಗಿದೆ. ಇಷ್ಟು ದಿನಗಳವರೆಗೆ ಪಂದ್ಯಗಳ ಹಣಾಹಣಿಯಿಂದ ಚರ್ಚೆಗೀಡಾಗಿದ್ದ ಈ ಸರಣಿ ಇದೀಗ ಕೊನೆಯ ಪಂದ್ಯ ರದ್ದಾಗಿರುವ ಕಾರಣದಿಂದಾಗಿ ದೊಡ್ಡ ಮಟ್ಟದಲ್ಲಿ ಚರ್ಚೆಗೊಳಪಟ್ಟಿದೆ.
ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ( ಸೆಪ್ಟೆಂಬರ್ 10 ) ಆರಂಭವಾಗಬೇಕಿದ್ದ ಐದನೇ ಟೆಸ್ಟ್ ಪಂದ್ಯ ಕೊರೊನಾ ವೈರಸ್ ಕಾರಣದಿಂದಾಗಿ ರದ್ದಾಗಿದೆ. ಟೀಮ್ ಇಂಡಿಯಾದ ಸಿಬ್ಬಂದಿ ವರ್ಗದ ಕೆಲವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ನಂತರ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರರು ಭಾಗವಹಿಸುವುದು ಅಸಾಧ್ಯವೆನಿಸಿತು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರರು ಭಾಗವಹಿಸುವುದು ಸಾಧ್ಯವಾಗದ ಕಾರಣ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ರದ್ದಾಗಿದೆ ಎಂದು ಅಧಿಕೃತವಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.
ಇನ್ನು ಈ ಪಂದ್ಯ ರದ್ದಾದ ನಂತರ ಸಾಕಷ್ಟು ಚರ್ಚೆಗಳು ನಡೆದಿವೆ. ಇಂಗ್ಲೆಂಡ್ ನೆಲದಲ್ಲಿ ಬರೋಬ್ಬರಿ 14 ವರ್ಷಗಳ ಬಳಿಕ ಟೆಸ್ಟ್ ಸರಣಿಯನ್ನು ಗೆಲ್ಲುವುದರ ಮೂಲಕ ಇತಿಹಾಸ ಸೃಷ್ಟಿಸುವ ತವಕದಲ್ಲಿದ್ದ ಟೀಮ್ ಇಂಡಿಯಾಗೆ ಈ ಪಂದ್ಯ ರದ್ದಾಗಿರುವುದು ತುಸು ಬೇಸರವನ್ನುಂಟು ಮಾಡಿರುವುದಂತೂ ನಿಜ. ಸರಣಿಯಲ್ಲಿ ಈಗಾಗಲೇ 2-1 ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ಸರಣಿ ಕೈವಶ ಪಡಿಸಿಕೊಳ್ಳುವ ಸನಿಹದಲ್ಲಿತ್ತು. ಆದರೆ ದಿಢೀರನೆ ಪಂದ್ಯ ರದ್ದಾಗಿರುವ ಟೀಮ್ ಇಂಡಿಯಾದ ಸರಣಿ ಕೈವಶ ಪಡಿಸಿಕೊಳ್ಳುವ ಕನಸಿಗೆ ತಣ್ಣೀರೆರಚಿದಂತಾಗಿದೆ.
ಒಂದೆಡೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ರದ್ದಾಗಿರುವುದು 14 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾ ಸರಣಿ ಗೆಲ್ಲುವ ಕನಸಿಗೆ ಹಿನ್ನಡೆಯನ್ನುಂಟು ಮಾಡಿದೆ. ಮತ್ತೊಂದೆಡೆ ಈ ಪಂದ್ಯ ರದ್ದಾಗಿರುವುದರಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಕೋಟಿ ಕೋಟಿ ನಷ್ಟ ಅನುಭವಿಸಿರುವುದು ವರದಿಯಾಗಿದೆ. ಹೀಗೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ರದ್ದಾದ ನಂತರ ನಡೆದಿರುವ ಮಹತ್ವದ ಬೆಳವಣಿಗೆಗಳ ಮಾಹಿತಿ ಈ ಕೆಳಕಂಡಂತಿದೆ ಓದಿ.

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್‌ಗೆ ಕೋಟಿ ಕೋಟಿ ನಷ್ಟ
ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಟೆಸ್ಟ್ ಪಂದ್ಯ ರದ್ದಾಗಿರುವುದರಿಂದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್‌ಗೆ ಬರೋಬ್ಬರಿ 250 ಕೋಟಿ ನಷ್ಟವಾಗಿದೆ ಎಂದು ವರದಿಯಾಗಿದೆ. ಸರಣಿಯಲ್ಲಿ ಯಾರು ವಿಜೇತರಾಗಲಿದ್ದಾರೆ ಅಥವಾ ಸರಣಿ ಡ್ರಾನಲ್ಲಿ ಅಂತ್ಯಗೊಳ್ಳಲಿದೆಯಾ ಎಂಬ ಪ್ರಶ್ನೆಗಳಿಗೆ ಉತ್ತರವನ್ನು ಕೊಡಲಿದ್ದ ಈ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲಗಳು ಮೂಡಿದ್ದ ಕಾರಣ ಈ ಪಂದ್ಯ ರದ್ದಾಗಿರುವುದು ವ್ಯವಹಾರಿಕವಾಗಿಯೂ ಸಹ ನಷ್ಟ ಉಂಟಾಗಲು ಕಾರಣವಾಗಿದೆ.

ರದ್ದಾದ ಈ ಪಂದ್ಯ ಮತ್ತೆ ನಡೆಯಲಿದೆ
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮ್ಯಾಂಚೆಸ್ಟರ್ ಟೆಸ್ಟ್ ಪಂದ್ಯ ರದ್ದಾಗಿದೆ ಆದರೆ ಸರಣಿ ಇಲ್ಲಿಗೇ ಮುಗಿದಿಲ್ಲ ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ಪಂದ್ಯ ಮತ್ತೆ ಮುಂದುವರೆಯಲಿರುವುದರ ಕುರಿತು ಸ್ಪಷ್ಟನೆಯನ್ನು ನೀಡಿದೆ. ಹೌದು, ಸದ್ಯ ಕೊರೋನಾವೈರಸ್ ಕಾರಣದಿಂದಾಗಿ ರದ್ದಾಗಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಟೆಸ್ಟ್ ಪಂದ್ಯವನ್ನು ಮುಂದಿನ ವರ್ಷ ಭಾರತ ಸೀಮಿತ ಓವರ್‌ಗಳ ಸರಣಿಯನ್ನಾಡಲು ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಾಗ ನಡೆಸಲು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತೀರ್ಮಾನವನ್ನು ಮಾಡಿದೆ. ಹೀಗಾಗಿ ಮುಂದಿನ ವರ್ಷ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಾಗ ರದ್ದಾಗಿರುವ ಈ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ.

ಸದ್ಯ ಕ್ರಿಕೆಟ್ ಅಭಿಮಾನಿಗಳ ಚಿತ್ತ ಐಪಿಎಲ್ ಟೂರ್ನಿಯತ್ತ
ಕಳೆದ ಕೆಲ ದಿನಗಳಿಂದ ಕ್ರಿಕೆಟ್ ಅಭಿಮಾನಿಗಳು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಟೆಸ್ಟ್ ಸರಣಿಯ ಕಡೆ ಹೆಚ್ಚಿನ ಗಮನವನ್ನು ಹರಿಸಿದ್ದರು. ಎರಡೂ ತಂಡಗಳು ಸಹ ಸರಣಿಯುದ್ದಕ್ಕೂ ಪೈಪೋಟಿಯುತ ಆಟವನ್ನಾಡಿದ ಕಾರಣ ಕ್ರಿಕೆಟ್ ಅಭಿಮಾನಿಗಳ ಚಿತ್ತ ಈ ಸರಣಿಯತ್ತ ನೆಟ್ಟಿತ್ತು. ಇದೀಗ ಈ ಸರಣಿ ಮುಕ್ತಾಯಗೊಂಡಿದ್ದು ಇದೀಗ ಕ್ರಿಕೆಟ್ ಅಭಿಮಾನಿಗಳ ಚಿತ್ತ ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಮುಂದುವರಿಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯತ್ತ ನೆಟ್ಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications