For Quick Alerts
ALLOW NOTIFICATIONS  
For Daily Alerts
 

ಓವಲ್ ಟೆಸ್ಟ್: ಇಂಗ್ಲೆಂಡ್ ವಿರುದ್ಧ ತಿರುಗಿ ಬೀಳಲು ಕಾಯುತ್ತಿದ್ದಾರೆ ಈ 4 ಆಟಗಾರರು

Ind vs Eng: These 4 players are waiting to comeback against England in Oval test

ಬೆಂಗಳೂರು, ಸೆಪ್ಟೆಂಬರ್ 1: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಕ್ತಾಯವಾಗಿದ್ದು ನಾಲ್ಕನೇ ಪಂದ್ಯಕ್ಕೆ ಎರಡು ತಂಡಗಳು ಕೂಡ ಸಜ್ಜಾಗಿದೆ. ಲಾರ್ಡ್ಸ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಭರ್ಜರಿಯಾಗಿ ಗೆಲುವು ಕಂಡಿದ್ದ ವಿರಾಟ್ ಕೊಹ್ಲಿ ಬಳಗ ಈ ಪ್ರದರ್ಶನವನ್ನು ಹೆಡಿಂಗ್ಲೆ ಅಂಗಳದಲ್ಲಿ ಮುಂದುವರಿಸಲು ವಿಫಲವಾಗಿತ್ತು. ಭಾರತೀಯ ತಂಡದ ವಿರುದ್ಧ ಇಂಗ್ಲೆಂಡ್ ಎಲ್ಲಾ ವಿಭಾಗದಲ್ಲೂ ಮೇಲುಗೈ ಸಾಧಿಸಿತು ಈ ಮೂಲಕ ಪಂದ್ಯವನ್ನು ಗೆದ್ದುಕೊಂಡಿದೆ. ಹೀಗಾಗಿ ಸರಣಿ ಈಗ 1-1 ಅಂತರದಿಂದ ಸಮಬಲಗೊಂಡಿದೆ.

ಮೊದಲ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾದ ಕೆಲ ಆಟಗಾರರು ಅದ್ಭುತ ಪ್ರದರ್ಶನ ನೀಡಿದರೆ ಇನ್ನೂ ಕೆಲ ಆಟಗಾರರು ನಿರಾಸೆ ಮೂಡಿಸುತ್ತಲೇ ಬಂದಿದ್ದಾರೆ. ಹೀಗಾಗಿ ಕೆಲ ಆಟಗಾರರ ಬದಲಾವಣೆ ಮಾಡಬೇಕು ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಯಾವೆಲ್ಲಾ ಬದಲಾವನೆಯನ್ನು ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಮಾಡಿಕೊಳ್ಳಲಿದೆ ಎಂಬುದು ಇನ್ನೂ ಕುತೂಹಲವಾಗಿಯೇ ಉಳಿದುಕೊಂಡಿದೆ. ಆರಂಭಿಕ ಮೂರು ಪಂದ್ಯಗಳಲ್ಲಿ ಯಾವುದೇ ದೊಡ್ಡ ಬದಲಾವಣೆ ಮಾಡಿಕೊಳ್ಳದೆ ಕಣಕ್ಕಿಳಿದಿದ್ದ ಕೊಹ್ಲಿ ನಾಲ್ಕನೇ ಪಂದ್ಯದಲ್ಲಿ ಕನಿಷ್ಠ ಎರಡು ಬದಲಾವಣೆಗಳಾಗುವ ನಿರೀಕ್ಷೆಯಿದೆ.

ಈ ಮಧ್ಯೆ ಸರಣಿ ನಿರ್ಣಾಯಕ ಘಟ್ಟಕ್ಕೆ ತಲುಪಿರುವುದರಿಂದಾಗಿ ಸರಣಿಯಲ್ಲಿ ಟೀಮ್ ಇಂಡಿಯಾ ಮರಳಿ ಹಿಡಿತ ಬಿಗಿಗೊಳಿಸಬೇಕಾದರೆ ಕೆಲ ಆಟಗಾರರಿಂದ ಓವಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ಹೊರಬರಲೇಬೇಕಿದೆ. ಟೀಮ್ ಇಂಡಿಯಾದ ಈ ಆಟಗಾರರು ಕೂಡ ಎದುರಾಳಿ ವಿರುದ್ಧ ತಿರುಗಿ ಬೀಳಲು ಕಾಯುತ್ತಿದ್ದಾರೆ. ಹಾಗಾದರೆ ಅಂಥಾ ನಾಲ್ವರು ಆಟಗಾರರ ಬಗ್ಗೆ ಮುಂದೆ ಓದಿ..

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಹಿಂದಿನ ಇಂಗ್ಲೆಂಡ್ ಪ್ರವಾಸದಲ್ಲಿ ಅಕ್ಷರಶಃ ಅಬ್ಬರಿಸಿದ್ದರು. ಆದರೆ ಈ ಬಾರಿ ವಿರಾಟ್ ಕೊಹ್ಲಿ ಪ್ರದರ್ಶನ ಕಳೆಗಿಮದಿದಂತೆ ಭಾಸವಾಗುತ್ತಿದೆ. ವಿರಾಟ್ ಕೊಹ್ಲಿ ವಿಕೆಟ್ ಪಡೆಯುವುದು ಇಂಗ್ಲೆಂಡ್ ವೇಗಿಗಳ ಪಾಲಿಗೆ ಸವಾಲಿನ ಕೆಲಸವೆನಿಸುತ್ತಿಲ್ಲ. ವಿರಾಟ್ ಕೊಹ್ಲಿಗಾಗಿ ವಿಶೇಷ ಯೋಜನೆ ಮಾಡಿಕೊಂಡಿರುವ ಇಂಗ್ಲೆಂಡ್ ತಂಡ ಸರಣಿಯಲ್ಲಿ ಆಡಿದ ಮೊದಲ ಮೂರು ಪಂದ್ಯಗಳಲ್ಲಿಯೂ ಇದರಲ್ಲಿ ಯಶಸ್ಸನ್ನು ಕಂಡಿದೆ. ಈ ಸರಣಿಯಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಕೇವಲ ಒಂದು ಅರ್ಧಶತಕವನ್ನು ಮಾತ್ರವೇ ಗಳಿಸಿದ್ದಾರೆ. ಹೀಗಾಗಿ ಓವಲ್ ಅಂಗಳದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರದರ್ಶನದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ನೈಜ ಸಾಮರ್ಥ್ಯವನ್ನು ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾಗೆ ನಿರ್ಣಾಯಕ ಘಟ್ಟದಲ್ಲಿ ನೆರವಾಗಲೇ ಬೇಕಿದೆ. ಈ ಸವಾಲಿಗೆ ಟೀಮ್ ಇಂಡಿಯಾ ನಾಯಕ ಸಿದ್ಧವಾಗಿದ್ದು ಓವಲ್ ಮೈದಾನದಲ್ಲಿ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾಲಿ ಮಾಡಲು ಹಾತೊರೆಯುತ್ತಿದ್ದಾರೆ

ಉಪನಾಯಕ ಅಜಿಂಕ್ಯಾ ರಹಾನೆ

ಉಪನಾಯಕ ಅಜಿಂಕ್ಯಾ ರಹಾನೆ

ಟೀಮ್ ಇಂಡಿಯಾದ ಉಪನಾಯಕ ಅಜಿಂಕ್ಯಾ ರಹಾನೆ ತಮ್ಮ ಕಳಪೆ ಪ್ರದರ್ಶನವನ್ನು ಈ ಸರಣಿಯಲ್ಲಿಯೂ ಮುಂದುವರಿಸಿದ್ದಾರೆ. ಆಡಿದ ಮೂರು ಪಂದ್ಯಗಳಲ್ಲಿ ಒಂದು ಅರ್ಧ ಶತಕವನ್ನು ಮಾತ್ರವೇ ಗಳಿಸಲು ಸಫಲವಾಗಿದ್ದಾರೆ ಅಜಿಂಕ್ಯಾ ರಹಾನೆ. ಸುದೀರ್ಘ ಕಾಲದಿಂದ ಟೀಮ್ ಇಂಡಿಯಾ ಪರವಾಗಿ ರಹಾನೆ ಬ್ಯಾಟ್‌ನಿಂದ ರನ್ ಹರಿದುಬರುತ್ತಿಲ್ಲ. ಕಳೆದ ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೆಲ್ಬರ್ನ್ ಟೆಸ್ಟ್‌ನಲ್ಲಿ ಶತಕವನ್ನು ಗಳಿಸಿದ ಬಳಿಕ ಮತ್ತೆ ಅಂಥಾ ಪ್ರದರ್ಶನ ಅಜಿಂಕ್ಯಾ ರಹಾನೆ ಬ್ಯಾಟ್‌ನಿಂದ ಬರಲಿಲ್ಲ. ಹೀಗಾಗಿ ಟೀಮ್ ಇಂಡಿಯಾದ ಈ ಅನುಭವಿ ಆಟಗಾರನ ಮೇಲೆ ಟೀಮ್ ಇಂಡಿಯಾ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ. ನಾಲ್ಕನೇ ಟೆಸ್ಟ್‌ನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಆತಿಥೇಯರ ವಿರುದ್ಧ ತಿರುಗಿ ಬೀಳಲು ಅಜಿಂಕ್ಯ ರಹಾನೆ ಸಜ್ಜಾಗಿದ್ದಾರೆ.

ಯುವ ಆಟಗಾರ ರಿಷಭ್ ಪಂತ್

ಯುವ ಆಟಗಾರ ರಿಷಭ್ ಪಂತ್

ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಆಟವನ್ನು ಪ್ರದರ್ಶಿಸಿ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿ ನೀಡುವಂತೆ ಮಾಡುವ ಆಟಗಾರ ರಿಷಭ್ ಪಂತ್. ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪಂತ್ ನೀಡಿದ ಪ್ರದರ್ಶನ ನಿರ್ಣಾಯಕವಾಗಿತ್ತು. ಬಳಿಕ ಇಂಗ್ಲೆಂಡ್ ತಮಡದ ವಿರುದ್ಧ ಭಾರತದಲ್ಲಿ ನೀಡಿದ ಪ್ರದರ್ಶನವೂ ಅಷ್ಟೇ ಅದ್ಭುತವಾಗಿತ್ತು. ಏಕಾಂಗಿಯಾಗಿ ತಂಡವನ್ನು ಗೆಲ್ಲಿಸಬಲ್ಲ ಸಾಮರ್ಥ್ಯವನ್ನು ಹೊಂದಿರುವ ಪಂತ್ ಪ್ರದರ್ಶನದ ಬಗ್ಗೆ ಇಂಗ್ಲೆಂಡ್ ಪ್ರವಾಸದಲ್ಲಿಯೂ ಸಾಕಷ್ಟು ನಿರೀಕ್ಷೆಗಳಿತ್ತು. ಆದರೆ ಟೀಮ್ ಇಂಡಿಯಾದ ಈ ಯುವ ಆಟಗಾರ ಇಂಗ್ಲೆಂಡ್ ನೆಲದಲ್ಲಿ ತನ್ನ ನೈಜ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ಪಂತ್ ಇಂಗ್ಲೆಂಡ್ ಬೌಲರ್‌ಗಳ ದಾಳಿಯ ವಿರುದ್ಧ ಪದೇ ಪದೇ ಎಡವುತ್ತಿದ್ದಾರೆ. ಹೀಗಾಗಿ ಸರಣಿಯ ನಾಲ್ಕನೇ ಪಂದ್ಯದಲ್ಲಿ ರಿಷಭ್ ಪಂತ್‌ಗೆ ಮತ್ತೊಂದು ಅವಕಾಶ ದೊರೆತಾಗ ಈ ಅವಕಾಶವನ್ನು ಯುವ ಆಟಗಾರ ಅದ್ಭುತವಾಗಿ ಬಳಸಿಕೊಳ್ಳಬೇಕಿದೆ. ತನ್ನ ಪ್ರದರ್ಶನದ ವಿರುದ್ಧ ಕೇಳಿ ಬರುತ್ತಿರುವ ಟೀಕೆಗಳಿಗೆ ಬ್ಯಾಟ್‌ನಿಂದಲೇ ಉತ್ತರ ನೀಡಲು ಯುವ ಆಟಗಾರ ಕಾತುರರಾಗಿದ್ದಾರೆ.

ಅನುಭವಿ ಸ್ಪಿನ್ನರ್ ಆರ್ ಅಶ್ವಿನ್

ಅನುಭವಿ ಸ್ಪಿನ್ನರ್ ಆರ್ ಅಶ್ವಿನ್

ಇನ್ನು ಟೀಮ್ ಇಂಡಿಯಾದ ಅನುಭವಿ ಆಟಗಾರ ಆರ್ ಅಶ್ವಿನ್ ಈ ಸರಣಿಯ ಮೊದಲ ಮೂರು ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದಿರಲಿಲ್ಲ. ನಾಲ್ಕನೇ ಟೆಸ್ಟ್‌ನಲ್ಲಿ ಅಶ್ವಿನ್‌ಗೆ ಆಡುವ ಅವಕಾಶ ದೊರೆಯುವ ಸಾಧ್ಯತೆಯಿದೆ. ಈ ಅವಕಾಶವನ್ನು ಅಶ್ವಿನ್ ಅದ್ಭುತವಾಗಿ ಬಳಸಿಕೊಳ್ಳಬೇಕಿದೆ. ಈ ಹಿಂದೆ ತವರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿ ಅತಿ ಹೆಚ್ಚು ವಿಕೆಟ್ ಪಡೆದಿದ್ದ ಆರ್ ಅಶ್ವಿನ್ ಇಂಗ್ಲೆಂಡ್ ನೆಲದಲ್ಲಿಯೂ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೂ ಮುನ್ನ ಸಿಕ್ಕಿದ್ದ ಬಿಡುವಿನಲ್ಲಿ ಕೌಂಟಿ ಕ್ರಿಕೆಟ್‌ನಲ್ಲಿ ಓವಲ್ ಅಂಗಳದಲ್ಲಿಯೇ ಆಡಿದ್ದ ಅಶ್ವಿನ್ ಪೂರಕವಾದ ಅಭ್ಯಾಸವನ್ನು ಮಾಡಿಕೊಂಡಿದ್ದಾರೆ. ಆದರೆ ಇಂಗ್ಲೆಂಡ್ ವಿರುದ್ಧ ಆಡಲು ಅಶ್ವಿನ್ ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್‌ಗೆ ಅವಕಾಶ ದೊರೆಯುವ ಸಾಧ್ಯತೆಯಿರುವ ಕಾರಣದಿಂದಾಗಿ ಈ ಅವಕಾಶವನ್ನು ಎಷ್ಟು ಅದ್ಭುತವಾಗಿ ಅಶ್ವಿನ್ ಬಳಸಿಕೊಳ್ಳುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

IND vs ENG ನಾಲ್ಕನೇ ಪಂದ್ಯಕ್ಕೆ ಈ ಆಟಗಾರರು ಬೇಕೇಬೇಕು ! | Oneindia Kannada
ಸಂಭಾವ್ಯ ಆಡುವ ಬಳಗ

ಸಂಭಾವ್ಯ ಆಡುವ ಬಳಗ

ಭಾರತದ ಸಂಭಾವ್ಯ ಆಡುವ ಬಳಗ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್‌), ರವೀಂದ್ರ ಜಡೇಜಾ / ಆರ್ ಅಶ್ವಿನ್, ಇಶಾಂತ್ ಶರ್ಮಾ/ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿ

ಇಂಗ್ಲೆಂಡ್ ಸಂಭಾವ್ಯ ಆಡುವ ಬಳಗ: ಹಸೀಬ್ ಹಮೀದ್, ರೋರಿ ಬರ್ನ್ಸ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊವ್ (ವಿಕೆಟ್ ಕೀಪರ್‌), ಡೇನಿಯಲ್ ಲಾರೆನ್ಸ್/ ಒಲ್ಲಿ ಪೋಪ್, ಮೊಯೀನ್ ಅಲಿ, ಸ್ಯಾಮ್ ಕರನ್/ಕ್ರಿಸ್ ವೋಕ್ಸ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್ ಮತ್ತು ಕ್ರೇಗ್ ಓವರ್‌ಟನ್

Story first published: Wednesday, September 1, 2021, 18:56 [IST]
Other articles published on Sep 1, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+