ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿಯೂ ಅಶ್ವಿನ್‌ಗೆ ಅವಕಾಶ ಸಿಗುವುದಿಲ್ಲ ಎನ್ನುತ್ತಿವೆ ಈ ಅಂಶಗಳು!

IND vs ENG: These stats are telling that India Won’t Make Any Changes in the team for third test
51 ವರ್ಷಗಳಿಂದ ಈ ಮೈದಾನದಲ್ಲಿ ಭಾರತ ಸೊತೇ ಇಲ್ಲ | Oneindia Kannada

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಹೆಡಿಂಗ್ಲೆಯ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 1-0 ಅಂತರದಿಂದ ಮುನ್ನಡೆ ಸಾಧಿಸಿರುವ ಟೀಮ್ ಇಂಡಿಯಾ ಲೀಡ್ಸ್ ಪಂದ್ಯವನ್ನೂ ಗೆಲ್ಲುವುದರ ಮೂಲಕ ಸರಣಿಯನ್ನು ಬಹುತೇಕ ತನ್ನ ಕೈ ವಶಕ್ಕೆ ತೆಗೆದುಕೊಳ್ಳುವ ಸಿದ್ಧತೆಯಲ್ಲಿದ್ದರೆ, ಅತ್ತ ಲೀಡ್ಸ್ ಕ್ರೀಡಾಂಗಣದಲ್ಲಿ ಭಾರತ ತಂಡವನ್ನು ಸೋಲಿಸಿ ಟೆಸ್ಟ್ ಸರಣಿಯಲ್ಲಿ ಗೆಲುವಿನ ಖಾತೆ ತೆರೆಯುವ ಯೋಜನೆಯಲ್ಲಿ ಇಂಗ್ಲೆಂಡ್ ತಂಡವಿದೆ.

ರಹಾನೆ, ಪೂಜಾರರನ್ನು ತಂಡದಿಂದ ಹೊರಗಿಟ್ಟು ಈ ಯುವ ಆಟಗಾರನಿಗೆ ಸ್ಥಾನ ಕೊಡಿ ಎಂದ ಮಾಜಿ ಕ್ರಿಕೆಟಿಗರಹಾನೆ, ಪೂಜಾರರನ್ನು ತಂಡದಿಂದ ಹೊರಗಿಟ್ಟು ಈ ಯುವ ಆಟಗಾರನಿಗೆ ಸ್ಥಾನ ಕೊಡಿ ಎಂದ ಮಾಜಿ ಕ್ರಿಕೆಟಿಗ

ಹೀಗೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದ ರೀತಿಯೇ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಕೂಡ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಆಗಸ್ಟ್ 25 ರಂದು ಲೀಡ್ಸ್ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು ಅತಿ ಹೆಚ್ಚಾಗಿ ಚರ್ಚಿಸಲ್ಪಡುತ್ತಿರುವ ವಿಷಯವೆಂದರೆ ಅದು ಮೂರನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಅವರಿಗೆ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಸಿಗುತ್ತಾ ಅಥವಾ ಇಲ್ಲವಾ ಎಂಬುದು.

ಐಪಿಎಲ್ 2021ರ ಮೊದಲಾರ್ಧದಲ್ಲಿ ಆರ್‌ಸಿಬಿ ಪರ ಮಿಂಚಿದ ಮೂವರು ಮತ್ತು ನೆಲಕಚ್ಚಿದ ಇಬ್ಬರು ಆಟಗಾರರುಐಪಿಎಲ್ 2021ರ ಮೊದಲಾರ್ಧದಲ್ಲಿ ಆರ್‌ಸಿಬಿ ಪರ ಮಿಂಚಿದ ಮೂವರು ಮತ್ತು ನೆಲಕಚ್ಚಿದ ಇಬ್ಬರು ಆಟಗಾರರು

ಹೌದು, ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಯಾವ ಯಾವ ಆಟಗಾರರು ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬುದರ ಕುರಿತು ಜೋರಾಗಿಯೇ ಚರ್ಚೆಗಳು ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ಸಾಕಷ್ಟು ಸಂಭಾವ್ಯ ತಂಡ ಪಟ್ಟಿಗಳು ಹರಿದಾಡುತ್ತಿದ್ದು ಮೂರನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದುಕೊಳ್ಳುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ ಕೆಲವೊಂದಿಷ್ಟು ಅಂಕಿ ಅಂಶಗಳನ್ನು ಗಮನಿಸಿದರೆ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಸಹ ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಅವಕಾಶ ಸಿಗುವುದು ಕಷ್ಟ ಎಂದೆನಿಸದೆ ಇರಲಾರದು. ಹೀಗೆ ರವಿಚಂದ್ರನ್ ಅಶ್ವಿನ್ ಅವರಿಗೆ ಮೂರನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಸಿಗುವುದರ ಕುರಿತು ಅನುಮಾನ ಹುಟ್ಟಿಸುತ್ತಿರುವ ಅಂಶಗಳು ಈ ಕೆಳಕಂಡಂತಿವೆ..

ಶಾರ್ದೂಲ್ ಠಾಕೂರ್ ಫಿಟ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಶಾರ್ದೂಲ್ ಠಾಕೂರ್ ಫಿಟ್ ಆಗಿದ್ದಾರೆ ಎಂದು ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಮೊದಲನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶಾರ್ದೂಲ್ ಠಾಕೂರ್ ಲಾರ್ಡ್ಸ್ ಅಂಗಳದಲ್ಲಿ ನಡೆದ ಎರಡನೇ ಪಂದ್ಯಕ್ಕೂ ಮುನ್ನ ಗಾಯಕ್ಕೊಳಗಾಗಿದ್ದರು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡಿದ್ದ ಶಾರ್ದೂಲ್ ಠಾಕೂರ್ ಬದಲು ರವಿಚಂದ್ರನ್ ಅಶ್ವಿನ್ ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗುತ್ತಿತ್ತು. ಆದರೆ ಲಾರ್ಡ್ಸ್ ಅಂಗಳದ ಹವಾಮಾನ ರವಿಚಂದ್ರನ್ ಅಶ್ವಿನ್ ಅವರಿಗೆ ಅವಕಾಶವನ್ನು ಕೈ ತಪ್ಪಿಸಿತ್ತು. ಹೀಗಾಗಿ ಲಾರ್ಡ್ಸ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಬದಲು ಇಶಾಂತ್ ಶರ್ಮಾರಿಗೆ ಆಡುವ ಅವಕಾಶ ಒದಗಿ ಬಂದಿತ್ತು. ಇನ್ನು ಮೂರನೇ ಟೆಸ್ಟ್ ಪಂದ್ಯದಲ್ಲಾದರೂ ರವಿಚಂದ್ರನ್ ಅಶ್ವಿನ್ ಅವರಿಗೆ ಸ್ಥಾನ ಸಿಗಲಿದೆ ಎನ್ನುವಷ್ಟರಲ್ಲಿ ಇದೀಗ ಶಾರ್ದೂಲ್ ಠಾಕೂರ್ ಗಾಯದಿಂದ ಚೇತರಿಸಿಕೊಂಡಿದ್ದು ಮೂರನೇ ಟೆಸ್ಟ್ ಪಂದ್ಯವನ್ನಾಡಲು ಫಿಟ್ ಆಗಿದ್ದಾರೆ ಎಂದು ಅಜಿಂಕ್ಯ ರಹಾನೆ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ ಬದಲು ರವಿಚಂದ್ರನ್ ಅಶ್ವಿನ್ ಅವರಿಗೆ ಆಡುವ ಅವಕಾಶ ಸಿಗಬಹುದು ಎಂದು ಎಣಿಸುತ್ತಿದ್ದವರ ಊಹೆ ಇದೀಗ ತಪ್ಪಾಗಿದೆ.

ಸರಣಿಯಲ್ಲಿ ಇದುವರೆಗೂ ಸ್ಪಿನ್ನರ್‌ಗಳಿಗೆ ಒಂದೇ ಒಂದು ವಿಕೆಟ್ ಕೂಡ ಇಲ್ಲ

ಸರಣಿಯಲ್ಲಿ ಇದುವರೆಗೂ ಸ್ಪಿನ್ನರ್‌ಗಳಿಗೆ ಒಂದೇ ಒಂದು ವಿಕೆಟ್ ಕೂಡ ಇಲ್ಲ

ಅಷ್ಟೇ ಅಲ್ಲದೆ ಇಂಗ್ಲೆಂಡ್ ವಿರುದ್ಧ ಈಗಾಗಲೇ ನಡೆದಿರುವ ಮೊದಲೆರಡು ಪಂದ್ಯಗಳಲ್ಲಿ ಸ್ಪಿನ್ ಬೌಲರ್‌ಗಳಿಗೆ ಯಾವುದೇ ವಿಕೆಟ್ ಲಭಿಸಿಲ್ಲ. ಒಟ್ಟು 40 ವಿಕೆಟ್‍ಗಳ ಪೈಕಿ 39 ವಿಕೆಟ್‍ಗಳನ್ನು ವೇಗಿಗಳೇ ಪಡೆದುಕೊಂಡಿದ್ದು ಮತ್ತೊಂದು ವಿಕೆಟ್ ರನ್ಔಟ್ ಪಾಲು. ಹೀಗೆ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಓರ್ವ ಸ್ಪಿನ್ನರ್ ರವೀಂದ್ರ ಜಡೇಜಾ 44 ಓವರ್ ಎಸೆದರೂ ಸಹ ಯಾವುದೇ ವಿಕೆಟ್ ಲಭಿಸದೇ ಇರುವುದು ಇದೀಗ ಮುಂದಿನ ಪಂದ್ಯದಲ್ಲಿ ಇಬ್ಬರು ಸ್ಪಿನ್ ಬೌಲರ್‌ಗಳಿಗೆ ಅವಕಾಶ ನೀಡುವುದರ ಕುರಿತು ದೊಡ್ಡ ಪ್ರಭಾವವನ್ನೇ ಬೀರಿದೆ.

ತಂಡದಲ್ಲಿ ಬದಲಾವಣೆಯ ಅಗತ್ಯವಿಲ್ಲ ಎನ್ನುತ್ತಿದ್ದಾರೆ ಮಾಜಿ ಕ್ರಿಕೆಟಿಗರು

ತಂಡದಲ್ಲಿ ಬದಲಾವಣೆಯ ಅಗತ್ಯವಿಲ್ಲ ಎನ್ನುತ್ತಿದ್ದಾರೆ ಮಾಜಿ ಕ್ರಿಕೆಟಿಗರು

ಮತ್ತೊಂದೆಡೆ ಮೂರನೇ ಟೆಸ್ಟ್ ಪಂದ್ಯದ ಕುರಿತು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಹಂಚಿಕೊಳ್ಳುತ್ತಿರುವ ಮಾಜಿ ಕ್ರಿಕೆಟಿಗರು ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಪ್ರಸ್ತುತ ಭಾರತ ತಂಡ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದು ಮೂರನೇ ಟೆಸ್ಟ್ ಪಂದ್ಯದಲ್ಲಿ ಈ ತಂಡವನ್ನು ಬದಲಾಯಿಸುವ ಅಗತ್ಯವಿಲ್ಲ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಕೂಡ ಮೊದಲೆರಡು ಪಂದ್ಯಗಳಲ್ಲಿದ್ದ ತಂಡವನ್ನೇ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಮುಂದುವರಿಸಲಿದ್ದಾರಾ ಎಂಬ ಅನುಮಾನ ಇದೀಗ ಮೂಡಿದೆ.

Story first published: Monday, August 23, 2021, 21:33 [IST]
Other articles published on Aug 23, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X