ಭಾರತ vs ಇಂಗ್ಲೆಂಡ್ ತೃತೀಯ ಟೆಸ್ಟ್ ಪಂದ್ಯವನ್ನು ಉಚಿತವಾಗಿ ವೀಕ್ಷಿಸಲು ಹೀಗೆ ಮಾಡಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ತೃತೀಯ ಪಂದ್ಯ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ. ಇನ್ನು ಹೇಡಿಂಗ್ಲೆ ಅಂಗಳದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಬುಧವಾರ ( ಆಗಸ್ಟ್ 25 ) ಆರಂಭವಾಗಲಿದ್ದು ಭಾರೀ ಕುತೂಹಲವನ್ನು ಮೂಡಿಸಿದೆ.
ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು. ನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜೋ ರೂಟ್ ಪಡೆಯನ್ನು 151 ರನ್‌ಗಳಿಂದ ಸದೆಬಡಿದು ಹೊಸ ಮೈಲಿಗಲ್ಲನ್ನು ನಿರ್ಮಿಸಿತು. ಹೀಗೆ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ಸದ್ಯ ಬುಧವಾರದಿಂದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಜಯ ಸಾಧಿಸುವುದರ ಮೂಲಕ ಸರಣಿಯನ್ನು ಬಹುತೇಕ ತನ್ನ ಕೈವಶ ಮಾಡಿಕೊಳ್ಳಲು ತಯಾರಿ ನಡೆಸುತ್ತಿದೆ.
ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ. ಹೀಗೆ ಭಾರೀ ಕುತೂಹಲವನ್ನು ಮೂಡಿಸಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ವೀಕ್ಷಕರು ಸೋನಿ ಸಿಕ್ಸ್ ಚಾನೆಲ್‌ನಲ್ಲಿ ವೀಕ್ಷಿಸಬಹುದು. ಅಷ್ಟೇ ಅಲ್ಲದೆ ನಿಮ್ಮ ಮೊಬೈಲ್‌ಗಳಲ್ಲಿ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಹಾಗೂ ಜಿಯೋ ಟಿವಿ ಅಪ್ಲಿಕೇಶನ್‌ನ ಮುಖಾಂತರ ಸೋನಿ ಚಾನೆಲ್‌ನಲ್ಲಿ ಉಚಿತವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಬಹುದಾಗಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯವು ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಆಗಸ್ಟ್ 25ರ ಬುಧವಾರದಂದು 3.30ಕ್ಕೆ ( ಭಾರತೀಯ ಕಾಲಮಾನ ) ಆರಂಭವಾಗಲಿದ್ದು, ಈ ಪಂದ್ಯದ ಆರಂಭಕ್ಕೂ ಮುನ್ನ ಮಂಗಳವಾರ ( ಆಗಸ್ಟ್ 24 ) ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ವಿಶೇಷ ಪತ್ರಿಕಾಗೋಷ್ಠಿಯೊಂದನ್ನು ನಡೆಸುವುದರ ಮೂಲಕ ಪಂದ್ಯದ ಕುರಿತು ಕೆಲ ಮಾಹಿತಿಗಳನ್ನು ಹಂಚಿಕೊಂಡರು.
ಹೀಗೆ ಪಂದ್ಯ ಆರಂಭಕ್ಕೂ ಮುನ್ನವೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ತಂಡದಲ್ಲಿ ದೊಡ್ಡ ಬದಲಾವಣೆಗಳೇನೂ ಆಗುವುದಿಲ್ಲ ಎಂದು ಹೇಳಿಕೆ ನೀಡಿದರು. ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾದ ಆಡುವ ಬಳಗ ಉತ್ತಮ ಪ್ರದರ್ಶನವನ್ನು ನೀಡಿದೆ, ಹೀಗಾಗಿ ಗೆಲ್ಲುವ ತಂಡದಲ್ಲಿನ ಆಟಗಾರರನ್ನು ತಂಡದಿಂದ ಕೈ ಬಿಡುವುದು ಸರಿಯಾದ ನಿರ್ಧಾರವಲ್ಲ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ಮೂಲಕ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿಯೂ ಸಹ ಭಾರತದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವಕಾಶ ಪಡೆದುಕೊಳ್ಳುವುದು ಅನುಮಾನ ಎಂಬುದನ್ನು ವಿರಾಟ್ ಕೊಹ್ಲಿ ಪರೋಕ್ಷವಾಗಿ ತಿಳಿಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications