ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs ENG: 1ನೇ ಟಿ20 ಪಂದ್ಯಕ್ಕೆ ಈ ಆಟಗಾರನಿಗೆ ಅವಕಾಶ ಇಲ್ಲವೆಂದ ಆಕಾಶ್ ಚೋಪ್ರಾ

IND vs ENG: This Player Want Get Opportunity For 1st T20I Against England says Aakash Chopra

ಗುರುವಾರದಿಂದ (ಜುಲೈ 7) ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ರುತುರಾಜ್ ಗಾಯಕ್ವಾಡ್ ಇನ್ನಿಂಗ್ಸ್ ಆರಂಭಿಸುವುದಿಲ್ಲ ಎಂದು ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಹೇಳಿದ್ದಾರೆ.

Ind vs WI: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಶಿಖರ್ ಧವನ್ ನಾಯಕInd vs WI: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ; ಶಿಖರ್ ಧವನ್ ನಾಯಕ

ಐಪಿಎಲ್ ಮತ್ತು ಐರ್ಲೆಂಡ್ ವಿರುದ್ಧದ ಟಿ20 ಪಂದ್ಯಗಳ ಸಮಯದಲ್ಲಿ ರುತುರಾಜ್ ಗಾಯಕ್ವಾಡ್ ತನ್ನ ಕೌಶಲ್ಯದಿಂದ ಎಲ್ಲರನ್ನೂ ಮೆಚ್ಚಿಸಿರಬಹುದು, ಆದಾಗ್ಯೂ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಮರಳುವುದರೊಂದಿಗೆ ಆಡುವ 11ರ ಬಳಗದಲ್ಲಿ ಕೆಲವು ಬದಲಾವಣೆಗಳಿವೆ ಎಂದು ತಿಳಿಸಿದ್ದಾರೆ.

ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ತಂಡ

"ನಾಯಕ ರೋಹಿತ್ ಶರ್ಮಾ ಅವರು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಹಿಂತಿರುಗಿದ್ದು, ಈಗ ಯಾರು ಹೊರಗುಳಿಯುತ್ತಾರೆ? ರುತುರಾಜ್ ಗಾಯಕ್ವಾಡ್‌ಗೆ ಮತ್ತೊಂದು ಅವಕಾಶ ಸಿಗುವುದಿಲ್ಲ. ಆದರೆ ಸಂಜು ಸ್ಯಾಮ್ಸನ್ ಅವರ ಸ್ಥಾನವನ್ನು ಉಳಿಸಿಕೊಳ್ಳುತ್ತಾರೆಯೇ? ಬ್ಯಾಟಿಂಗ್ ಆಲ್‌ರೌಂಡರ್ ದೀಪಕ್ ಹೂಡಾ ಬಗ್ಗೆ ಏನು? ಎಂಬುದರ ಬಗ್ಗೆ ಗುರುವಾರದಿಂದ ಭಾರತ ತಂಡವು ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬಹಳಷ್ಟು ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆಯುತ್ತದೆ. ಕಾಯಲು," ಎಂದು ಮಾಜಿ ಆಟಗಾರ ಆಕಾಶ್ ಚೋಪ್ರಾ ಕೂ ಅಪ್ಲಿಕೇಶನ್‌ನಲ್ಲಿ ಹೇಳಿದ್ದಾರೆ.

ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಕೂಡ ಐರ್ಲೆಂಡ್ ಟಿ20 ಪಂದ್ಯಗಳಲ್ಲಿ ತಮ್ಮ ಸ್ಟ್ರೋಕ್-ಮೇಕಿಂಗ್ ಮೂಲಕ ಎಲ್ಲರನ್ನೂ ಮೆಚ್ಚಿಸಿದ್ದರು. ಮೂರನೇ ಕ್ರಮಾಂಕದಲ್ಲಿ ಇವರು ಕಣಕ್ಕಿಳಿಯಬಹುದು.

ಇಂಗ್ಲೆಂಡ್ ವಿರುದ್ಧದ 1ನೇ ಟಿ20 ಪಂದ್ಯಕ್ಕೆ ಸಂಭಾವ್ಯ ಭಾರತ ತಂಡ

ಇಂಗ್ಲೆಂಡ್ ವಿರುದ್ಧದ 1ನೇ ಟಿ20 ಪಂದ್ಯಕ್ಕೆ ಸಂಭಾವ್ಯ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್.

2ನೇ ಮತ್ತು 3ನೇ ಟಿ20 ಪಂದ್ಯಗಳಿಗೆ ಸಂಭಾವ್ಯ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಜುಲೈ ತಿಂಗಳಾಂತ್ಯದಲ್ಲಿ ನಡೆಯುವ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಶಿಖರ್ ಧವನ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಖಾಯಂ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಭವಿ ಬೌಲರ್ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ.

ಜುಲೈ 22ರಂದು ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ 16 ಸದಸ್ಯರ ಯುವ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಬುಧವಾರ ಪ್ರಕಟಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ

ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡ

ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ) ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್

Story first published: Thursday, July 7, 2022, 8:28 [IST]
Other articles published on Jul 7, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X