'ಪೂಜಾರ ಶತಕ ಬಾರಿಸಿದರೂ ತಂಡದಿಂದ ಹೊರಗಿಡಿ'; ಕಳಪೆ ಪ್ರದರ್ಶನಕ್ಕೆ ಸಿಕ್ಕ ಪ್ರತಿಕ್ರಿಯೆಯಿದು

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ತೃತೀಯ ಪಂದ್ಯ ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದ ಮುನ್ನಡೆಯನ್ನು ಸಾಧಿಸಿದೆ. ಇನ್ನು ಹೇಡಿಂಗ್ಲೆ ಅಂಗಳದಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಬುಧವಾರ ( ಆಗಸ್ಟ್ 25 ) ಆರಂಭವಾಗಿದ್ದು ಟೀಮ್ ಇಂಡಿಯಾಗೆ ಆರಂಭದಲ್ಲಿಯೇ ಆಘಾತವಾಗಿದೆ.
ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಅಂಗಳದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 151 ರನ್‌ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿತ್ತು. ಲಾರ್ಡ್ಸ್ ಪಂದ್ಯ ಗೆದ್ದ ಬಳಿಕ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯವನ್ನೂ ಸಹ ಗೆದ್ದು ಸರಣಿಯನ್ನು ಬಹುತೇಕ ಕೈವಶ ಮಾಡಿಕೊಳ್ಳುವ ಯೋಜನೆಯಲ್ಲಿದ್ದ ಟೀಮ್ ಇಂಡಿಯಾ ತಂಡಕ್ಕೆ ಪಂದ್ಯದ ಆರಂಭದಲ್ಲಿಯೇ ಆಘಾತವಾಗಿದೆ. ಟೀಮ್ ಇಂಡಿಯಾದ ಪ್ರಮುಖ ಆಟಗಾರರಾದ ಕೆ ಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ವೇಗವಾಗಿ ವಿಕೆಟ್ ಒಪ್ಪಿಸುವ ಮೂಲಕ ಪೆವಿಲಿಯನ್ ಪರೇಡ್ ನಡೆಸಿದ್ದಾರೆ.
ಅದರಲ್ಲಿಯೂ ಸುಮಾರು ಪಂದ್ಯಗಳಿಂದ ಕಳಪೆ ಪ್ರದರ್ಶನ ನೀಡುತ್ತಾ ಬಂದಿರುವ ಚೇತೇಶ್ವರ್ ಪೂಜಾರ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೂಡ ಕಳಪೆ ಪ್ರದರ್ಶನ ನೀಡುವುದರ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ 9 ಎಸೆತಗಳನ್ನು ಎದುರಿಸಿದ ಚೇತೇಶ್ವರ್ ಪೂಜಾರಾ ಕೇವಲ 1 ರನ್ ಬಾರಿಸಿ ಜೇಮ್ಸ್ ಆ್ಯಂಡರ್ಸನ್ ಎಸೆತದಲ್ಲಿ ವಿಕೆಟ್ ಒಪ್ಪಿಸುವ ಮೂಲಕ ಭಾರತದ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾದರು.
ಪದೇಪದೆ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿರುವ ಚೇತೇಶ್ವರ್ ಪೂಜಾರಾ ವಿರುದ್ಧ ಮತ್ತೊಮ್ಮೆ ನೆಟ್ಟಿಗರು ಈ ಕೆಳಕಂಡಂತೆ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಚೇತೇಶ್ವರ್ ಪೂಜಾರಾರನ್ನು ಕೈಬಿಡಲು ಇದು ಸುಸಮಯ
ಚೇತೇಶ್ವರ್ ಪೂಜಾರ ಕಳಪೆ ಪ್ರದರ್ಶನದ ಕುರಿತು ಬೇಸರ ವ್ಯಕ್ತಪಡಿಸಿರುವ ನೆಟ್ಟಿಗರೊಬ್ಬರು ಟೀಮ್ ಇಂಡಿಯಾದಿಂದ ಚೇತೇಶ್ವರ್ ಪೂಜಾರಾರನ್ನು ಕೈಬಿಡಲು ಇದು ಸರಿಯಾದ ಸಮಯ ಎಂದು ಟ್ವೀಟ್ ಮಾಡಿದ್ದಾರೆ. ಚೇತೇಶ್ವರ್ ಪೂಜಾರ ಅವರನ್ನು ತಂಡದಿಂದ ಕೈ ಬಿಟ್ಟರೆ ಕೆಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು ಮತ್ತು ಶುಬ್ಮನ್ ಗಿಲ್ ರೋಹಿತ್ ಶರ್ಮಾ ಜೊತೆ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬಹುದು ಎಂದು ಕೂಡ ಈ ನೆಟ್ಟಿಗ ಟ್ವೀಟ್ ಮೂಲಕ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾನೆ.

ಬಿಸಿಸಿಐ ಬಳಿ ಬೇಡಿಕೊಂಡ ನೆಟ್ಟಿಗ
ಚೇತೇಶ್ವರ್ ಪೂಜಾರ ಕಳಪೆ ಆಟವನ್ನು ನೋಡಿ ಬೇಸತ್ತ ನೆಟ್ಟಿಗ ನೋರ್ವ ಬಿಸಿಸಿಐ ಬಳಿ ಚೇತೇಶ್ವರ ಪೂಜಾರರನ್ನು ತಂಡದಿಂದ ಹೊರಗಿಡುವಂತೆ ಬೇಡಿಕೆ ಇಟ್ಟಿದ್ದಾನೆ. ಟ್ವೀಟ್ ಮಾಡುವಾಗ ಬಿಸಿಸಿಐಗೆ ಹ್ಯಾಕ್ ಮಾಡಿರುವ ಈ ನೆಟ್ಟಿಗ ದಯವಿಟ್ಟು ಚೇತೇಶ್ವರ್ ಪೂಜಾರಾ ಬದಲು ಯುವ ಆಟಗಾರರಿಗೆ ತಂಡದಲ್ಲಿ ಆಡುವ ಅವಕಾಶವನ್ನು ನೀಡಿ, ಆದಷ್ಟು ಬೇಗ ಸೂರ್ಯಕುಮಾರ್ ಯಾದವ್ ತಂಡವನ್ನು ಸೇರಿಕೊಳ್ಳಲಿ ಎಂದು ಟ್ವೀಟ್ ಮಾಡಿದ್ದಾನೆ.

ಪೂಜಾರ ಮುಂದಿನ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದರೂ ತಂಡದಿಂದ ಹೊರಗಿಡಿ ಎಂದ ನೆಟ್ಟಿಗ
ಪೂಜಾರ ಸತತವಾಗಿ ಕಳಪೆ ಪ್ರದರ್ಶನ ನೀಡುತ್ತಿರುವುದಕ್ಕೆ ಬೇಸತ್ತ ಮತ್ತೋರ್ವ ನೆಟ್ಟಿಗ ಮುಂದಿನ ಇನ್ನಿಂಗ್ಸ್‌ನಲ್ಲಿ ಚೇತೇಶ್ವರ್ ಪೂಜಾರ ಶತಕ ಬಾರಿಸಿ ಅತ್ಯುತ್ತಮ ಪ್ರದರ್ಶನ ನೀಡಿದರೂ ಸಹ ದಯವಿಟ್ಟು ತಂಡದಿಂದ ಆತನನ್ನು ಹೊರಗಿಡಿ ಎಂದು ಕಿಡಿಕಾರಿದ್ದಾನೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications