ಸತತ ಕಳಪೆ ಪ್ರದರ್ಶನ ನೀಡಿದರೂ ತಂಡದಲ್ಲಿ ಸ್ಥಾನ; ಆ ಒಬ್ಬ ಆಟಗಾರನನ್ನು ನಂಬಿ ಬೆನ್ನಿಗೆ ನಿಂತ ಕೊಹ್ಲಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲನೇ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆಲ್ಲುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೊದಲನೇ ಟೆಸ್ಟ್ ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಡ್ರಾನಲ್ಲಿ ಅಂತ್ಯಗೊಂಡಿತು. ನಂತರ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 151 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸಿತು. ಹೀಗೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಬ್ಬರಿಸಿದ್ದ ಭಾರತೀಯ ಆಟಗಾರರು ಲೀಡ್ಸ್ ನಗರದ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಅಕ್ಷರಶಃ ಮಂಕಾದರು.
ಹೌದು, ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಸರಣಿ ಮತ್ತು 76 ರನ್‌ಗಳ ಸೋಲನ್ನು ಅನುಭವಿಸಿದೆ. ಹೀಗೆ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತ ನಂತರ ಭಾರತ ತಂಡದ ಆಟಗಾರರಲ್ಲಿ ಕೆಲ ಬದಲಾವಣೆಗಳಾಗುವ ಲಕ್ಷಣಗಳು ಕಾಣಿಸುತ್ತಿವೆ. ಕಳಪೆ ಪ್ರದರ್ಶನ ನೀಡುತ್ತಿರುವ ಕೆಲ ಆಟಗಾರರ ಬದಲು ಇತರ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆಗಳು ಹೆಚ್ಚಿದ್ದು, ಸರಣಿಯಲ್ಲಿ ಇಲ್ಲಿಯವರೆಗೂ ಕಳಪೆ ಪ್ರದರ್ಶನ ನೀಡಿರುವ ಕೆಲ ಆಟಗಾರರು ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.
ಹೀಗೆ ಲಾರ್ಡ್ಸ್ ಪಂದ್ಯ ಮುಗಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ವಿರಾಟ್ ಕೊಹ್ಲಿಯವರಿಗೆ ಕಳಪೆ ಪ್ರದರ್ಶನ ನೀಡಿರುವ ಆಟಗಾರರನ್ನು ಮುಂದಿನ ಪಂದ್ಯದಿಂದ ಕೈಬಿಡುತ್ತೀರಾ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಅದರಲ್ಲಿಯೂ ಪ್ರಸ್ತುತ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ರಿಷಭ್ ಪಂತ್ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ತಂಡದಿಂದ ಕೈಬಿಡಲಾಗುತ್ತಾ ಎಂಬ ಪ್ರಶ್ನೆಯನ್ನು ವಿರಾಟ್ ಕೊಹ್ಲಿಗೆ ಹಾಕಲಾಗಿತ್ತು. ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಸ್ಥಾನದ ಕುರಿತು ಎದುರಾದ ಈ ಪ್ರಶ್ನೆಗೆ ಉತ್ತರಿಸಿದ ವಿರಾಟ್ ಕೊಹ್ಲಿ ಈ ಕೆಳಕಂಡಂತೆ ಮಾತನಾಡಿದ್ದಾರೆ.

ರಿಷಭ್ ಪಂತ್‌ಗೆ ಅವಕಾಶ ನೀಡಲು ಸಿದ್ಧ
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ತಂಡದಿಂದ ಸ್ಥಾನ ಕಳೆದುಕೊಳ್ಳಲಿದ್ದಾರಾ ಎಂಬ ಪ್ರಶ್ನೆ ಎದುರಾದಾಗ ಉತ್ತರಿಸಿದ ವಿರಾಟ್ ಕೊಹ್ಲಿ, ಯಾವುದೇ ಕಾರಣಕ್ಕೂ ರಿಷಭ್ ಪಂತ್ ಅವರನ್ನು ತಂಡದಿಂದ ಕೈಬಿಡುವ ಕೆಲಸಕ್ಕೆ ಕೈ ಹಾಕುವುದಿಲ್ಲ ಎಂದು ಉತ್ತರವನ್ನು ನೀಡಿದರು. ಈ ಹಿಂದೆಯೇ ಹೇಳಿದಂತೆ ರಿಷಭ್ ಪಂತ್ ತಂಡದ ಪರಿಸ್ಥಿತಿಯನ್ನು ಅರಿತು ಬ್ಯಾಟ್ ಬೀಸಬಲ್ಲ ಆಟಗಾರ, ಸಾಕಷ್ಟು ಜವಾಬ್ದಾರಿಯನ್ನು ಹೊಂದಿರುವ ರಿಷಬ್ ಪಂತ್ ಅವರಿಗೆ ಟೀಮ್ ಮ್ಯಾನೇಜ್‌ಮೆಂಟ್ ಇನ್ನೂ ಹೆಚ್ಚಿನ ಅವಕಾಶಗಳನ್ನು ನೀಡಲಿದೆ ಎಂದು ಹೇಳುವುದರ ಮೂಲಕ ವಿರಾಟ್ ಕೊಹ್ಲಿ ನಾಲ್ಕನೇ ಟೆಸ್ಟ್ ಪಂದ್ಯದಿಂದ ಯಾವುದೇ ಕಾರಣಕ್ಕೂ ರಿಷಭ್ ಪಂತ್ ಅವರನ್ನು ತಂಡದಿಂದ ಹೊರ ಹಾಕುವುದಿಲ್ಲ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಸರಣಿಯಲ್ಲಿ ರಿಷಭ್ ಪಂತ್ ಕಳಪೆಯಾಟ
ಕಳೆದ ಕೆಲ ಸರಣಿಗಳಲ್ಲಿ ಟೀಮ್ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದಾಗ ರಿಷಭ್ ಪಂತ್ ತಮ್ಮ ಉತ್ತಮ ಬ್ಯಾಟಿಂಗ್‌ನಿಂದ ತಂಡಕ್ಕೆ ಆಸರೆಯಾಗುತ್ತಿದ್ದರು. ಆದರೆ ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮಾತ್ರ ರಿಷಭ್ ಪಂತ್ ಅಕ್ಷರಶಃ ಕಳಪೆ ಪ್ರದರ್ಶನವನ್ನು ನೀಡುತ್ತಿದ್ದಾರೆ. ಇದುವರೆಗೂ ಇಂಗ್ಲೆಂಡ್ ವಿರುದ್ಧ ನಡೆದಿರುವ ಒಟ್ಟು 5 ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿರುವ ರಿಷಭ್ ಪಂತ್ ಕಲೆ ಹಾಕಿರುವುದು ಕೇವಲ 90 ರನ್. ಹೀಗಿದ್ದರೂ ಸಹ ರಿಷಭ್ ಪಂತ್ ಮೇಲೆ ನಂಬಿಕೆಯನ್ನು ಇಟ್ಟಿರುವ ವಿರಾಟ್ ಕೊಹ್ಲಿ ನಾಲ್ಕನೇ ಟೆಸ್ಟ್ ಪಂದ್ಯದಿಂದ ಆತನ ಕೈಬಿಡುವುದಿಲ್ಲ ಎಂದು ಪಂತ್ ಬೆನ್ನಿಗೆ ನಿಂತಿದ್ದಾರೆ.

ವಿರಾಟ್ ಕೊಹ್ಲಿ ನಂಬಿಕೆ ಉಳಿಸಬೇಕಿದೆ ರಿಷಭ್ ಪಂತ್
ಪ್ರಸ್ತುತ ನಡೆಯುತ್ತಿರುವ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದಿದ್ದರೂ ಸಹ ರಿಷಭ್ ಪಂತ್ ಮೇಲಿನ ನಂಬಿಕೆಯಿಂದ ವಿರಾಟ್ ಕೊಹ್ಲಿ ಆತನಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಹೀಗೆ ವಿರಾಟ್ ಕೊಹ್ಲಿ ತನ್ನ ಮೇಲಿಟ್ಟಿರುವ ನಂಬಿಕೆಯನ್ನು ರಿಷಭ್ ಪಂತ್ ಉಳಿಸಿಕೊಳ್ಳಬೇಕಾಗಿದ್ದು ಮುಂಬರುವ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾದ ಅನಿವಾರ್ಯತೆ ಇದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications