'ವಿಶ್ವ ಕ್ರಿಕೆಟ್‍ನಲ್ಲಿ ಭಾರತ ಪವರ್‌ಹೌಸ್, ಕೊಹ್ಲಿ ಸೂಪರ್‌ಸ್ಟಾರ್' ಎಂದು ಕೊಂಡಾಡಿದ ದಿಗ್ಗಜ ಕ್ರಿಕೆಟಿಗ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯ ಮುಗಿದಿದ್ದು ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ಪಡೆ 157 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಸರಣಿಯಲ್ಲಿ 2-1 ಅಂತರದ ಮುನ್ನಡೆಯನ್ನು ಸಾಧಿಸಿದೆ.

4ನೇ ಟೆಸ್ಟ್: ಭಾರತ ನೀಡಿರುವ ಗುರಿ ಮುಟ್ಟುವುದು ಸುಲಭದ ಮಾತಲ್ಲ ಎಂದ ಇಂಗ್ಲೆಂಡ್ ಆಟಗಾರ4ನೇ ಟೆಸ್ಟ್: ಭಾರತ ನೀಡಿರುವ ಗುರಿ ಮುಟ್ಟುವುದು ಸುಲಭದ ಮಾತಲ್ಲ ಎಂದ ಇಂಗ್ಲೆಂಡ್ ಆಟಗಾರ

ಈ ಪಂದ್ಯ ಆರಂಭಕ್ಕೂ ಮುನ್ನ ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯದಲ್ಲಿ ಗೆಲುವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದ್ದವು. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿತ್ತು. ಟಾಸ್ ಸೋತರೂ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಕೊಹ್ಲಿ ಪಡೆ ಮೊದಲನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಶಾರ್ದೂಲ್ ಠಾಕೂರ್ ಜವಾಬ್ದಾರಿಯುತ ಅರ್ಧಶತಕದ ನೆರವಿನಿಂದ 191 ರನ್‌ಗಳಿಗೆ ಆಲ್ ಔಟ್ ಆಯಿತು, ಇಂಗ್ಲೆಂಡ್ ಮೊದಲನೇ ಇನ್ನಿಂಗ್ಸ್‌ನಲ್ಲಿ ಓಲ್ಲಿ ಪೋಪ್ ಮತ್ತು ಕ್ರಿಸ್ ವೋಕ್ಸ್ ಆಕರ್ಷಕ ಅರ್ಧಶತಕಗಳ ನೆರವಿನಿಂದ 290 ರನ್ ಗಳಿಸಿ 99 ರನ್‌ಗಳ ಮುನ್ನಡೆಯನ್ನು ಸಾಧಿಸಿತು. ಈ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ದ್ವಿತೀಯ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಶತಕ, ಚೇತೇಶ್ವರ್ ಪೂಜಾರ, ಶಾರ್ದೂಲ್ ಠಾಕೂರ್ ಹಾಗೂ ಪಂತ್ ಅರ್ಧಶತಕ ಮತ್ತು ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನದ ನೆರವಿನಿಂದ 466 ರನ್ ಗಳಿಸುವುದರ ಮೂಲಕ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ಬೃಹತ್ ಮೊತ್ತದ ಗುರಿಯನ್ನು ನೀಡಿತು.

ಭಾರತ ತಂಡ ನೀಡಿದ ಈ ಬೃಹತ್ ಮೊತ್ತದ ಗುರಿಯನ್ನು ಇಂಗ್ಲೆಂಡ್ ತಂಡ ಸುಲಭವಾಗಿ ಬೆನ್ನಟ್ಟಲಿದೆ ಎಂದೇ ಎಲ್ಲರೂ ಮಾತನಾಡಿಕೊಳ್ಳುತ್ತಿದ್ದರು. ನಾಲ್ಕನೇ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೆ 77 ರನ್ ಗಳಿಸಿದ್ದ ಇಂಗ್ಲೆಂಡ್ ಕೊನೆಯ ದಿನದಾಟದಂದು ಗೆಲ್ಲುವ ಭರವಸೆಯನ್ನು ಹುಟ್ಟು ಹಾಕಿತ್ತು. ಆದರೆ ಐದನೇ ದಿನದಾಟದಂದು ಭಾರತೀಯ ಬೌಲರ್‌ಗಳ ದಾಳಿಗೆ ಮಂಕಾದ ಇಂಗ್ಲೆಂಡ್ 210 ರನ್‌ಗಳಿಗೆ ಆಲ್ ಔಟ್ ಆಗುವುದರ ಮೂಲಕ ಭಾರತದ ಎದುರು ಶರಣಾಯಿತು.

ಓವಲ್ ಜಯದ ಮೂಲಕ ದೊಡ್ಡ ದಾಖಲೆ ಬರೆದ ಕೊಹ್ಲಿ; ಬೆಸ್ಟ್ ಕ್ಯಾಪ್ಟನ್ ಎನ್ನಲು ಇದಕ್ಕಿಂತ ಇನ್ನೇನು ಬೇಕು?ಓವಲ್ ಜಯದ ಮೂಲಕ ದೊಡ್ಡ ದಾಖಲೆ ಬರೆದ ಕೊಹ್ಲಿ; ಬೆಸ್ಟ್ ಕ್ಯಾಪ್ಟನ್ ಎನ್ನಲು ಇದಕ್ಕಿಂತ ಇನ್ನೇನು ಬೇಕು?

ಹೀಗೆ ಕಳೆದೆರಡು ವರ್ಷಗಳಿಂದ ಟೆಸ್ಟ್ ಕ್ರಿಕೆಟ್‍ನಲ್ಲಿ ಯಶಸ್ಸಿನ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಟೀಂ ಇಂಡಿಯಾ ಮತ್ತೊಂದು ಅಮೋಘ ಗೆಲುವನ್ನು ತನ್ನದಾಗಿಸಿಕೊಂಡಿದ್ದು ಹಲವಾರು ಕ್ರಿಕೆಟ್ ದಿಗ್ಗಜರು ಭಾರತೀಯ ಕ್ರಿಕೆಟ್ ತಂಡವನ್ನು ಹಾಡಿ ಹೊಗಳುತ್ತಿದ್ದಾರೆ. ಈ ಸಾಲಿಗೆ ಇದೀಗ ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಶೇನ್ ವಾರ್ನ್ ಕೂಡ ಸೇರಿಕೊಂಡಿದ್ದು ಪಂದ್ಯ ಮುಗಿದ ಬಳಿಕ ಟೀಮ್ ಇಂಡಿಯಾವನ್ನು ಈ ಕೆಳಕಂಡಂತೆ ಹೊಗಳಿದ್ದಾರೆ.

ಭಾರತ ಪವರ್‌ಹೌಸ್, ವಿರಾಟ್ ಕೊಹ್ಲಿ ಸೂಪರ್‌ಸ್ಟಾರ್

ಭಾರತ ಪವರ್‌ಹೌಸ್, ವಿರಾಟ್ ಕೊಹ್ಲಿ ಸೂಪರ್‌ಸ್ಟಾರ್

ಕಳೆದ ಕೆಲ ವರ್ಷಗಳಿಂದ ಟೆಸ್ಟ್ ಕ್ರಿಕೆಟ್‍ನಲ್ಲಿ ಟೀಮ್ ಇಂಡಿಯಾ ನೀಡುತ್ತಿರುವ ಉತ್ತಮ ಪ್ರದರ್ಶನವನ್ನು ಕೊಂಡಾಡಿರುವ ಶೇನ್ ವಾರ್ನ್ 'ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‍ನಲ್ಲಿ ಪವರ್‌ಹೌಸ್ ಆಗಿದ್ದು, ಆ ತಂಡಕ್ಕೆ ವಿರಾಟ್ ಕೊಹ್ಲಿಯಂತಹ ಅತ್ಯುತ್ತಮ ಸೂಪರ್‌ಸ್ಟಾರ್ ರೀತಿಯ ನಾಯಕ ಸಿಕ್ಕಿರುವುದು ದೊಡ್ಡ ಮಟ್ಟದ ಯಶಸ್ಸಿಗೆ ಕಾರಣ. ವಿರಾಟ್ ಕೊಹ್ಲಿ ಯಾವಾಗಲೂ ನಾವು ಆಸ್ಟ್ರೇಲಿಯಾಕ್ಕೆ ಹೋಗಿ ಸರಣಿ ಗೆಲ್ಲುತ್ತೇವೆ, ಇಂಗ್ಲೆಂಡ್ ಪ್ರವಾಸ ಕೈಗೊಂಡು ಸರಣಿ ಗೆಲ್ಲುತ್ತೇವೆ ಎಂಬ ವಿಶ್ವಾಸದೊಂದಿಗೆ ವಿದೇಶಿ ಪ್ರಯಾಣ ಕೈಗೊಂಡು ಅವರ ನೆಲದಲ್ಲಿಯೇ ಎದುರಾಳಿಗಳನ್ನು ಸೋಲಿಸುತ್ತಿದ್ದಾರೆ' ಎಂದು ವಿರಾಟ್ ಕೊಹ್ಲಿ ಮತ್ತು ಭಾರತ ತಂಡವನ್ನು ಕೊಂಡಾಡಿದರು.

ಧನ್ಯವಾದಗಳು ವಿರಾಟ್ ಎಂದ ಶೇನ್ ವಾರ್ನ್

ಧನ್ಯವಾದಗಳು ವಿರಾಟ್ ಎಂದ ಶೇನ್ ವಾರ್ನ್

ಹೀಗೆ ವಿರಾಟ್ ಕೊಹ್ಲಿ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿರುವ ದಿಗ್ಗಜ ಕ್ರಿಕೆಟಿಗ ಶೇನ್ ವಾರ್ನ್ 'ವಿರಾಟ್ ಕೊಹ್ಲಿಗೆ ಆತನ ತಂಡದ ಇತರೆ ಆಟಗಾರರು ಉತ್ತಮ ಗೌರವವನ್ನು ನೀಡಿ, ಆತ ನೀಡುವ ಆಜ್ಞೆಗಳನ್ನು ಪಾಲಿಸಿ ಆತನಿಗೋಸ್ಕರ ಉತ್ತಮ ಆಟವನ್ನು ಆಡುತ್ತಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‍ಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುವುದರ ಮೂಲಕ ಇಷ್ಟು ದೊಡ್ಡ ಮಟ್ಟದ ಯಶಸ್ಸನ್ನು ಕಂಡಿದ್ದಾರೆ. ಇಂತಹ ಅದ್ಭುತ ನಾಯಕನಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ' ಎಂದು ವಿರಾಟ್ ಕೊಹ್ಲಿ ನಾಯಕತ್ವವನ್ನು ಶ್ಲಾಘಿಸಿದ್ದಾರೆ.

ಕೊಹ್ಲಿ ನಾಯಕತ್ವದಲ್ಲಿ ಇತಿಹಾಸ ಬರೆದ ಟೀಮ್ ಇಂಡಿಯಾ

ಕೊಹ್ಲಿ ನಾಯಕತ್ವದಲ್ಲಿ ಇತಿಹಾಸ ಬರೆದ ಟೀಮ್ ಇಂಡಿಯಾ

ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಓವಲ್ ಕ್ರೀಡಾಂಗಣದಲ್ಲಿ ನಡೆಯಿತು. 1971ರ ನಂತರ ಈ ಕ್ರೀಡಾಂಗಣದಲ್ಲಿ ನಡೆದ ಯಾವುದೇ ಟೆಸ್ಟ್ ಪಂದ್ಯದಲ್ಲಿಯೂ ಸಹ ಟೀಮ್ ಇಂಡಿಯಾ ಗೆಲುವನ್ನು ಸಾಧಿಸಿರಲಿಲ್ಲ. ಇದೀಗ ವಿರಾಟ್ ಕೊಹ್ಲಿ ಪಡೆ ಈ ಕ್ರೀಡಾಂಗಣದಲ್ಲಿ ಬರೋಬ್ಬರಿ 50 ವರ್ಷಗಳ ಬಳಿಕ ಟೆಸ್ಟ್ ಪಂದ್ಯವೊಂದನ್ನು ಗೆಲ್ಲುವುದರ ಮೂಲಕ ಇತಿಹಾಸವನ್ನು ನಿರ್ಮಿಸಿದೆ. ಅಷ್ಟೇ ಅಲ್ಲದೆ ಈ ಗೆಲುವಿನ ಮೂಲಕ ಇಂಗ್ಲೆಂಡ್ ನೆಲದಲ್ಲಿ ತನ್ನ ನಾಯಕತ್ವದ ಮೂರನೇ ಟೆಸ್ಟ್ ಗೆಲುವನ್ನು ದಾಖಲಿಸಿದ ವಿರಾಟ್ ಕೊಹ್ಲಿ ಇಂಗ್ಲೆಂಡ್ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆಲ್ಲಿಸಿದ ಏಷ್ಯಾ ನಾಯಕ ಎಂಬ ದಾಖಲೆಯನ್ನು ಬರೆದಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Tuesday, September 7, 2021, 12:05 [IST]
Other articles published on Sep 7, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X