ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಮಯಾಂಕ್ ಅಗರ್ವಾಲ್ ಅಗತ್ಯತೆಯಿಲ್ಲ ಎಂದು ಪರೋಕ್ಷವಾಗಿ ಹೇಳಿದ ಕೊಹ್ಲಿ!

IND vs ENG: Virat Kohli rules out Mayank Agarwal’s inclusion for Lord’s Test

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಆಗಸ್ಟ್ 12ರ ಗುರುವಾರದಿಂದ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಯಾವುದೇ ಫಲಿತಾಂಶ ಲಭಿಸದೆ ಮಳೆಯ ಕಾರಣದಿಂದಾಗಿ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು.

ಭಾರತ vs ಇಂಗ್ಲೆಂಡ್: ಪ್ರಥಮ ಟೆಸ್ಟ್ ಫಲಿತಾಂಶದ ಕುರಿತು ಮೌನ ಮುರಿದ ಅಶ್ವಿನ್ಭಾರತ vs ಇಂಗ್ಲೆಂಡ್: ಪ್ರಥಮ ಟೆಸ್ಟ್ ಫಲಿತಾಂಶದ ಕುರಿತು ಮೌನ ಮುರಿದ ಅಶ್ವಿನ್

ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದ ಕೊನೆಯ ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದಿದ್ದ ಟೀಮ್ ಇಂಡಿಯಾಗೆ ಮಳೆಯ ಆಗಮನವಾಗಿ ಪಂದ್ಯ ಡ್ರಾ ಆದದ್ದು ಬೇಸರವನ್ನುಂಟು ಮಾಡಿದೆ. ಹೀಗಾಗಿ ಮುಂಬರಲಿರುವ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಜಯ ಗಳಿಸಿ ಸರಣಿಯಲ್ಲಿ ಗೆಲುವಿನ ಖಾತೆಯನ್ನು ತೆರೆಯುವ ಯೋಜನೆಯಲ್ಲಿರುವ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಮುನ್ನ ಬುಧವಾರದಂದು ಪತ್ರಿಕಾಗೋಷ್ಠಿಯೊಂದನ್ನು ನಡೆಸಿದ್ದಾರೆ.

ಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ನಿಂದ ತಂಡದ ಪ್ರಮುಖ ಆಟಗಾರ ಔಟ್!; ಖಚಿತಪಡಿಸಿದ ವಿರಾಟ್ ಕೊಹ್ಲಿಭಾರತ vs ಇಂಗ್ಲೆಂಡ್: ದ್ವಿತೀಯ ಟೆಸ್ಟ್‌ನಿಂದ ತಂಡದ ಪ್ರಮುಖ ಆಟಗಾರ ಔಟ್!; ಖಚಿತಪಡಿಸಿದ ವಿರಾಟ್ ಕೊಹ್ಲಿ

ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ಕುರಿತು ಮಾತನಾಡಿರುವ ವಿರಾಟ್ ಕೊಹ್ಲಿ ಅಭ್ಯಾಸದ ವೇಳೆ ಗಾಯಕ್ಕೆ ಒಳಗಾದ ಭಾರತದ ವೇಗಿ ಶಾರ್ದೂಲ್ ಠಾಕೂರ್ ಎರಡನೇ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂಬ ವಿಷಯವನ್ನು ಹಂಚಿಕೊಂಡರು. ಹೀಗೆ ಎರಡನೇ ಪಂದ್ಯದ ಕುರಿತು ಮಾತನಾಡಿದ ವಿರಾಟ್ ಕೊಹ್ಲಿಗೆ ಟೀಮ್ ಇಂಡಿಯಾದ ಆರಂಭಿಕ ಆಟಗಾರರಲ್ಲಿ ಬದಲಾವಣೆಯೇನಾದರೂ ಆಗುತ್ತಾ ಎಂಬ ಪ್ರಶ್ನೆಯನ್ನು ಪತ್ರಕರ್ತರು ಕೇಳಿದ್ದಾರೆ. ಈ ಹಿಂದೆ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ಮಯಾಂಕ್ ಅಗರ್ವಾಲ್ ಬದಲು ಕೆಎಲ್ ರಾಹುಲ್ ಸ್ಥಾನವನ್ನು ಪಡೆದುಕೊಂಡಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ಕೆಎಲ್ ರಾಹುಲ್ ಬದಲು ಮಯಾಂಕ್ ಅಗರ್ವಾಲ್ ಸ್ಥಾನ ಪಡೆದುಕೊಳ್ಳಲಿದ್ದಾರಾ ಎಂಬ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗಳಿಗೆಲ್ಲ ಉತ್ತರ ನೀಡಿದ ವಿರಾಟ್ ಕೊಹ್ಲಿ ಈ ಕೆಳಕಂಡಂತೆ ಪ್ರತಿಕ್ರಿಯೆ ನೀಡಿದ್ದಾರೆ.

ಬ್ಯಾಟ್ಸ್‌ಮನ್‌ಗಳ ಅಲಭ್ಯತೆ ಇಲ್ಲವೇ ಇಲ್ಲ ಎಂದ ಕೊಹ್ಲಿ

ಬ್ಯಾಟ್ಸ್‌ಮನ್‌ಗಳ ಅಲಭ್ಯತೆ ಇಲ್ಲವೇ ಇಲ್ಲ ಎಂದ ಕೊಹ್ಲಿ

ಭಾರತದ ಬ್ಯಾಟಿಂಗ್ ವಿಭಾಗದಲ್ಲಿ ಯಾವುದಾದರೂ ಬದಲಾವಣೆಗಳು ಆಗಲಿವೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿರಾಟ್ ಕೊಹ್ಲಿ 'ಮೊದಲನೇ ಟೆಸ್ಟ್ ಪಂದ್ಯದಲ್ಲಿ ನಮ್ಮ ತಂಡದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನವನ್ನು ನೀಡಿದ್ದಾರೆ. ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಜೋಡಿ ಜವಾಬ್ದಾರಿಯುತ ಆಟವನ್ನಾಡಿದ್ದು ಬ್ಯಾಟ್ಸ್‌ಮನ್‌ಗಳ ಕೊರತೆ ಸದ್ಯಕ್ಕೆ ನಮ್ಮ ತಂಡದಲ್ಲಿಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ.

ಮಯಾಂಕ್ ಅಗರ್ವಾಲ್ ಅಗತ್ಯತೆ ಇಲ್ಲ ಎಂದು ಪರೋಕ್ಷವಾಗಿ ತಿಳಿಸಿದ ಕೊಹ್ಲಿ

ಮಯಾಂಕ್ ಅಗರ್ವಾಲ್ ಅಗತ್ಯತೆ ಇಲ್ಲ ಎಂದು ಪರೋಕ್ಷವಾಗಿ ತಿಳಿಸಿದ ಕೊಹ್ಲಿ

ಮೊದಲನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ಮಯಾಂಕ್ ಅಗರ್ವಾಲ್ ಬದಲು ಕೆಎಲ್ ರಾಹುಲ್ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಅವಕಾಶವನ್ನು ಪಡೆದುಕೊಂಡರು. ಸದ್ಯ ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿರುವ ಮಯಾಂಕ್ ಅಗರ್ವಾಲ್ ಎರಡನೇ ಟೆಸ್ಟ್ ಪಂದ್ಯವನ್ನಾಡಲು ಸಿದ್ಧತೆಗಳನ್ನು ನಡೆಸಿಕೊಂಡಿದ್ದಾರೆ. ಹೀಗಾಗಿ ಮಯಾಂಕ್ ಅಗರ್ವಾಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಗೆ ಪರೋಕ್ಷವಾಗಿ ಉತ್ತರ ನೀಡಿರುವ ವಿರಾಟ್ ಕೊಹ್ಲಿ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಆಟವನ್ನಾಡಿದ್ದು ಎರಡನೇ ಟೆಸ್ಟ್ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಮಯಂಕ್ ಅಗರ್ವಾಲ್ ಎರಡನೇ ಟೆಸ್ಟ್ ಪಂದ್ಯದಿಂದ ಅವಕಾಶ ವಂಚಿತರಾಗುವ ಸೂಚನೆ ನೀಡಿದ್ದಾರೆ.

ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡ ಕೆಎಲ್ ರಾಹುಲ್

ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡ ಕೆಎಲ್ ರಾಹುಲ್

ಮಯಾಂಕ್ ಅಗರ್ವಾಲ್ ಗಾಯದ ಸಮಸ್ಯೆಯಿಂದ ಮೊದಲನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾದ ಕಾರಣ ಕೆಎಲ್ ರಾಹುಲ್ ಆ ಅವಕಾಶವನ್ನು ಪಡೆದುಕೊಂಡರು. ಹೀಗೆ ಸಿಕ್ಕ ಅವಕಾಶವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಂಡ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧದ ಮೊದಲನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 84 ರನ್ ಬಾರಿಸಿ ಜವಾಬ್ದಾರಿಯುತ ಆಟವನ್ನು ಆಡುವುದರ ಮೂಲಕ ಟೀಮ್ ಇಂಡಿಯಾ ಪರ ಆಪದ್ಬಾಂಧವನಾಗಿ ನಿಂತರು. ಹೀಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಆಟ ಪ್ರದರ್ಶಿಸಿದ ಕಾರಣ ಕೆಎಲ್ ರಾಹುಲ್ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ.

Story first published: Friday, September 3, 2021, 9:04 [IST]
Other articles published on Sep 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X