ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ಬೌಲರ್‌ಗಳಿಗೆ ಇರುವಷ್ಟು ತಾಳ್ಮೆ ಕೊಹ್ಲಿಗಿಲ್ಲ ಎಂದ ಭಾರತದ ಮಾಜಿ ಕ್ರಿಕೆಟಿಗ

IND vs ENG: Virat Kohli Should play with patience like england bowlers says Sanjay Bangar

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚಿಸಲ್ಪಡುತ್ತಿರುವ ಸರಣಿ ಎಂದರೆ ಅದು ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ. ಹೌದು, ಇಂಗ್ಲೆಂಡ್ ನೆಲದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಮುಗಿದಿದ್ದು ಎರಡೂ ತಂಡಗಳು ಸಹ ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 2 ರ ಬುಧವಾರದಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಿವೆ.

ನಾಲ್ಕನೇ ಟೆಸ್ಟ್‌ಗೂ ಮುನ್ನ ಭಾರತಕ್ಕೆ ಸಿಹಿ ಸುದ್ದಿ; ಇಂಗ್ಲೆಂಡ್‌ನ ಈ ಬಲಿಷ್ಠ ಆಟಗಾರ ಹೊರಬೀಳುವ ಸಾಧ್ಯತೆ!ನಾಲ್ಕನೇ ಟೆಸ್ಟ್‌ಗೂ ಮುನ್ನ ಭಾರತಕ್ಕೆ ಸಿಹಿ ಸುದ್ದಿ; ಇಂಗ್ಲೆಂಡ್‌ನ ಈ ಬಲಿಷ್ಠ ಆಟಗಾರ ಹೊರಬೀಳುವ ಸಾಧ್ಯತೆ!

ಈ ಪಂದ್ಯಕ್ಕೂ ಮುನ್ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡುವ ಮೂಲಕ ಟೀಮ್ ಇಂಡಿಯಾ 76 ರನ್‌ಗಳ ಸರಣಿ ಸೋಲನ್ನು ಅನುಭವಿಸಿತ್ತು. ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 151 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು ಮುನ್ನಡೆಯನ್ನು ಸಾಧಿಸಿದ್ದ ಟೀಮ್ ಇಂಡಿಯಾ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ತೃತೀಯ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋಲುವುದರ ಮೂಲಕ ಮುಗ್ಗರಿಸಿದೆ.

ಭಾರತ vs ಇಂಗ್ಲೆಂಡ್: ಓವಲ್ ಅಂಗಳದಲ್ಲಿ ಭಾರತಕ್ಕಿದೆ ಅತಿ ಕೆಟ್ಟ ಇತಿಹಾಸ, ಕಳಪೆ ಪಂದ್ಯಗಳ ಪಟ್ಟಿ ಇಲ್ಲಿದೆಭಾರತ vs ಇಂಗ್ಲೆಂಡ್: ಓವಲ್ ಅಂಗಳದಲ್ಲಿ ಭಾರತಕ್ಕಿದೆ ಅತಿ ಕೆಟ್ಟ ಇತಿಹಾಸ, ಕಳಪೆ ಪಂದ್ಯಗಳ ಪಟ್ಟಿ ಇಲ್ಲಿದೆ

ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಟೀಮ್ ಇಂಡಿಯಾ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರ ಕುರಿತು ಇದೀಗ ಸಾಕಷ್ಟು ಚರ್ಚೆಗಳು ವ್ಯಕ್ತವಾಗುತ್ತಿದ್ದು ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಯಾವ ರೀತಿಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕು ಎಂಬುದರ ಕುರಿತು ಮಾಜಿ ಕ್ರಿಕೆಟಿಗರು ಹಾಗೂ ಕ್ರೀಡಾ ಪಂಡಿತರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ಭಾರತದ ಮಾಜಿ ಕ್ರಿಕೆಟಿಗ ಮತ್ತು ಮಾಜಿ ಕೋಚ್ ಸಂಜಯ್ ಬಂಗಾರ್ ಮಾತನಾಡಿದ್ದು ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ..

ವಿರಾಟ್ ಕೊಹ್ಲಿ ತಾಳ್ಮೆಯಿಂದ ಆಟವಾಡಬೇಕು ಎಂದ ಸಂಜಯ್ ಬಂಗಾರ್

ವಿರಾಟ್ ಕೊಹ್ಲಿ ತಾಳ್ಮೆಯಿಂದ ಆಟವಾಡಬೇಕು ಎಂದ ಸಂಜಯ್ ಬಂಗಾರ್

ಸರಣಿಯಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಫಲತೆಯ ಕುರಿತು ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಬಂಗಾರ್ ಅಪಾಯಕಾರಿ ಎಸೆತಗಳನ್ನು ಎದುರಿಸುವ ವೇಳೆ ವಿರಾಟ್ ಕೊಹ್ಲಿಯವರು ತಾಳ್ಮೆ ವಹಿಸಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ರೋಷಾವೇಶದ ಆಟವನ್ನು ಆಡಲು ಹೋಗಿ ವಿಕೆಟ್ ಒಪ್ಪಿಸುವ ಬದಲು ತಾಳ್ಮೆಯಿಂದ ಆಡಿದರೆ ಮಾತ್ರ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಗೆಲ್ಲಲು ಸಾಧ್ಯ ಎಂದು ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ರೋಷಾವೇಶದ ಆಟವನ್ನು ಆಡುತ್ತಿದ್ದ ಇಂಗ್ಲೆಂಡ್ ಬೌಲರ್‌ಗಳು ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ತಾಳ್ಮೆಯ ಆಟವನ್ನು ಆಡಿದ ಸಲುವಾಗಿಯೇ ಅಮೋಘವಾದ ಜಯವನ್ನು ಸಾಧಿಸಿದರು, ಇಂಗ್ಲೆಂಡ್ ಬೌಲರ್‌ಗಳಿಗಿರುವ ತಾಳ್ಮೆ ವಿರಾಟ್ ಕೊಹ್ಲಿಗೆ ಇಲ್ಲ ಎಂದು ಸಂಜಯ್ ಬಂಗಾರ್ ಅಭಿಪ್ರಾಯಪಟ್ಟಿದ್ದಾರೆ.

ಸಂಜಯ್ ಮಂಜ್ರೇಕರ್ ಕೂಡ ಇದೇ ಎಚ್ಚರಿಕೆಯನ್ನು ನೀಡಿದ್ದರು

ಸಂಜಯ್ ಮಂಜ್ರೇಕರ್ ಕೂಡ ಇದೇ ಎಚ್ಚರಿಕೆಯನ್ನು ನೀಡಿದ್ದರು

ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ಮಾತನಾಡಿದ ಭಾರತದ ಮತ್ತೋರ್ವ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಕೂಡ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಫಲತೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ವಿರಾಟ್ ಕೊಹ್ಲಿ ಆಫ್ ಸ್ಟಂಪ್ ಎಸೆತಗಳನ್ನು ಬಿಡದೇ ಹೊಡೆಯುವ ಯತ್ನ ಮಾಡಿದರೆ ಈ ಸರಣಿ ಪೂರ್ತಿ ಕಳಪೆ ಪ್ರದರ್ಶನ ನೀಡುವುದು ಖಚಿತ ಎಂದು ಸಂಜಯ್ ಮಂಜ್ರೇಕರ್ ವಿರಾಟ್ ಕೊಹ್ಲಿ ಬ್ಯಾಟಿಂಗ್ ಬದಲಾವಣೆಯ ಕುರಿತು ಸಲಹೆಯನ್ನು ನೀಡಿದ್ದರು.

ವಿರಾಟ್ ಬ್ಯಾಟಿಂಗ್ ವೈಫಲ್ಯ ದ ಬಗ್ಗೆ ಮಾತಾಡಿದ ಇರ್ಫಾನ್ ಪಠಾಣ್! | Oneindia Kannada
ನಾಲ್ಕನೇ ಟೆಸ್ಟ್ ಪಂದ್ಯದ ಮೇಲೆ ಹೆಚ್ಚಿದ ನಿರೀಕ್ಷೆ

ನಾಲ್ಕನೇ ಟೆಸ್ಟ್ ಪಂದ್ಯದ ಮೇಲೆ ಹೆಚ್ಚಿದ ನಿರೀಕ್ಷೆ

ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡರೆ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 151 ರನ್‌ಗಳ ಗೆಲುವನ್ನು ಸಾಧಿಸಿತ್ತು ಮತ್ತು ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 76 ರನ್‌ಗಳ ಇನ್ನಿಂಗ್ಸ್ ಗೆಲುವನ್ನು ದಾಖಲಿಸಿತ್ತು. ಹೀಗೆ ಸರಣಿಯಲ್ಲಿ ಸಮಬಲವನ್ನು ಸಾಧಿಸುವುದರ ಮೂಲಕ ಎರಡೂ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದು, ಸೆಪ್ಟೆಂಬರ್ 2 ರಿಂದ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ.

Story first published: Wednesday, September 1, 2021, 11:49 [IST]
Other articles published on Sep 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X