Breaking News: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ವಿರಾಟ್ ಕೊಹ್ಲಿ

ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾ ಸದ್ಯ ಆಂಗ್ಲರ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದೆ. ಮೊದಲಿಗೆ ನಡೆದ ಟಿ ಟ್ವೆಂಟಿ ಸರಣಿಯಲ್ಲಿ ಆಂಗ್ಲರಿಗೆ ಮಣ್ಣುಮುಕ್ಕಿಸಿ ಜಯಸಾಧಿಸಿದ ಟೀಂ ಇಂಡಿಯಾ ಏಕದಿನ ಸರಣಿಯ ಪ್ರಥಮ ಪಂದ್ಯದಲ್ಲಿಯೂ ಕೂಡ ಭರ್ಜರಿ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ.

20 ವರ್ಷಗಳ ಹಿಂದೆ ಆಂಗ್ಲರ ವಿರುದ್ಧ ವಿರೋಚಿತವಾಗಿ ನ್ಯಾಟ್‌ವೆಸ್ಟ್ ಟ್ರೋಫಿ ಗೆದ್ದಿದ್ದ ಗಂಗೂಲಿ ಪಡೆ20 ವರ್ಷಗಳ ಹಿಂದೆ ಆಂಗ್ಲರ ವಿರುದ್ಧ ವಿರೋಚಿತವಾಗಿ ನ್ಯಾಟ್‌ವೆಸ್ಟ್ ಟ್ರೋಫಿ ಗೆದ್ದಿದ್ದ ಗಂಗೂಲಿ ಪಡೆ

ಹೀಗೆ ಆಂಗ್ಲರಿಗೆ ಅವರ ನೆಲದಲ್ಲಿಯೇ ಮಣ್ಣುಮುಕ್ಕಿಸಿ ಮೇಲುಗೈ ಸಾಧಿಸಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಏಕದಿನ ಪಂದ್ಯದಲ್ಲಿ ಸೆಣಸಾಟ ನಡೆಸಲು ಸಜ್ಜಾಗಿದ್ದು, ಈ ಪಂದ್ಯವನ್ನೂ ಕೂಡ ಗೆಲ್ಲುವುದರ ಮೂಲಕ ಸರಣಿಯನ್ನು ಕೈವಶ ಮಾಡಿಕೊಳ್ಳುವತ್ತ ಕಣ್ಣಿಟ್ಟಿದೆ.

ಇನ್ನು ತೊಡೆಸಂದು ಗಾಯಕ್ಕೊಳಗಾಗಿದ್ದ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಆದರೆ ಇದೀಗ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೂ ಮುನ್ನ ಕೆಲ ಗಂಟೆ ಬಾಕಿ ಇರುವಾಗ ಬ್ಯಾಟ್ ಹಿಡಿದು ನೆಟ್ ಪ್ರ್ಯಾಕ್ಟೀಸ್ ಆರಂಭಿಸಿದ್ದು, ಇಂಗ್ಲೆಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಅಭ್ಯಾಸ ಆರಂಭಿಸಿದ್ದಾರೆ ಎಂದು ಬಿಸಿಸಿಐ ಕೊಹ್ಲಿಯ ಚಿತ್ರಗಳನ್ನು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಸದ್ಯ ಇದು ವಿರಾಟ್ ಕೊಹ್ಲಿ ಅಭಿಮಾನಿಗಳ ಪಾಲಿಗೆ ಶುಭ ಸುದ್ದಿಯಾಗಿದೆ.

ಪಂದ್ಯ ಆರಂಭಕ್ಕೆ 1 ಗಂಟೆ ಮುನ್ನ ಪೋಸ್ಟ್ ಹಂಚಿಕೊಂಡ ಬಿಸಿಸಿಐ

ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯ ಆರಂಭಕ್ಕೆ ಇನ್ನೂ 1 ಗಂಟೆ ಬಾಕಿ ಇರುವಾಗ ವಿರಾಟ್ ಕೊಹ್ಲಿ ನೆಟ್ ಅಭ್ಯಾಸವನ್ನು ನಡೆಸುತ್ತಿದ್ದಾರೆ ಎಂಬ ಪೋಸ್ಟ್ ಅನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ದ್ವಿತೀಯ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತ ಎಂಬ ಅಭಿಪ್ರಾಯವನ್ನು ಕ್ರಿಕೆಟ್ ಅಭಿಮಾನಿಗಳು ವ್ಯಕ್ತಪಡಿಸತೊಡಗಿದ್ದರು. ಅದರಂತೆ ಇದೀಗ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದು ಶ್ರೇಯಸ್ ಅಯ್ಯರ್ ತಂಡದಿಂದ ಹೊರಬಿದ್ದಿದ್ದಾರೆ.

ಪ್ರಕಟವಾದ ಭಾರತ ತಂಡ

ಪ್ರಕಟವಾದ ಭಾರತ ತಂಡ

ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ

West Indies ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ | *Cricket | OneIndia Kannada
ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ಮುಖಾಮುಖಿ ಫಲಿತಾಂಶ

ಲಾರ್ಡ್ಸ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ಮುಖಾಮುಖಿ ಫಲಿತಾಂಶ

ಸದ್ಯ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಪಡೆದಿರುವ ಲಾರ್ಡ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇಲ್ಲಿ ಇತ್ತಂಡಗಳ ನಡುವೆ ಒಟ್ಟು 6 ಏಕದಿನ ಪಂದ್ಯಗಳು ಜರುಗಿದ್ದು, ಈ ಪೈಕಿ ಟೀಮ್ ಇಂಡಿಯಾ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಇಂಗ್ಲೆಂಡ್ ಕೂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಎರಡೂ ತಂಡಗಳು ಸಹ ಲಾರ್ಡ್ಸ್ ಕ್ರೀಡಾಂಗಣದ ಏಕದಿನ ಮುಖಾಮುಖಿಯಲ್ಲಿ ಸಮಬಲ ಸಾಧಿಸಿವೆ.

For Quick Alerts
ALLOW NOTIFICATIONS
For Daily Alerts
Story first published: Thursday, July 14, 2022, 16:50 [IST]
Other articles published on Jul 14, 2022

Latest Videos

  + More
  POLLS
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Yes No
  Settings X