ಭಾರತ vs ಇಂಗ್ಲೆಂಡ್: ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಹೆಸರಿಸಿದ ವಿವಿಎಸ್ ಲಕ್ಷ್ಮಣ್

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿಯಾಗಿ ಚರ್ಚಿಸಲ್ಪಡುತ್ತಿರುವ ವಿಷಯವೆಂದರೆ ಅದು ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ. ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಲಂಡನ್ ನಗರದ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ದೊಡ್ಡ ಮಟ್ಟದ ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲವನ್ನು ಸಾಧಿಸಿವೆ. ಹೀಗೆ ಎರಡೂ ತಂಡಗಳು ಸಹ ಸರಣಿಯಲ್ಲಿ ಸಮಬಲ ಸಾಧಿಸಿರುವ ಕಾರಣದಿಂದಾಗಿ ಪ್ರಸ್ತುತ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಹೀಗಾಗಿ ಪ್ರಸ್ತುತ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ಹಲವಾರು ಕ್ರಿಕೆಟ್ ಪಂಡಿತರು ಹಾಗೂ ಮಾಜಿ ಕ್ರಿಕೆಟಿಗರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದು ಪಂದ್ಯದಲ್ಲಿ ಯಾವ ತಂಡ ಜಯ ಸಾಧಿಸಲಿದೆ ಎಂಬುದನ್ನು ಊಹಿಸುತ್ತಿದ್ದಾರೆ.
ಇದೀಗ ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಕೂಡ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು ಯಾವ ತಂಡ ಗೆಲ್ಲಲಿದೆ ಎಂಬುದನ್ನು ಈ ಕೆಳಕಂಡಂತಿದೆ ಊಹಿಸಿದ್ದಾರೆ.

ಓವಲ್ ಟೆಸ್ಟ್ ಭಾರತದ ಪಾಲಾಗಲಿದೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟಕ್ಕೂ ಮುನ್ನ ಪಂದ್ಯದ ಕುರಿತು ಮಾತನಾಡಿರುವ ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೂರನೇ ದಿನದಾಟದಂದು ಭಾರತದ ಬ್ಯಾಟ್ಸ್‌ಮನ್‌ಗಳು ಉತ್ತಮ ಆಟವನ್ನು ಆಡಲಿದ್ದಾರೆ, ಸದ್ಯ ಪಿಚ್ ಪರಿಸ್ಥಿತಿಯನ್ನು ಗಮನಿಸಿದರೆ ಈ ಪಂದ್ಯವನ್ನು ಭಾರತ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭ ಪಡೆದ ಭಾರತ
ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತ ತನ್ನ ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ್ದು ಯಾವುದೇ ವಿಕೆಟ್ ನಷ್ಟವಿಲ್ಲದೆ 43 ರನ್ ಗಳಿಸಿದೆ. ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ ಅಜೇಯ 22 ಹಾಗೂ ರೋಹಿತ್ ಶರ್ಮಾ ಅಜೇಯ 20 ರನ್ ಗಳಿಸಿದ್ದಾರೆ.
ಇದಕ್ಕೂ ಮುನ್ನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ್ದ ಟೀಂ ಇಂಡಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಶಾರ್ದೂಲ್ ಠಾಕೂರ್ ಅರ್ಧಶತಕಗಳ ನೆರವಿನಿಂದ 191 ರನ್ ಗಳಿಸಿ ಆಲ್ ಔಟ್ ಆಗಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಒಲ್ಲಿ ಪೋಪ್ ಹಾಗೂ ಕ್ರಿಸ್ ವೋಕ್ಸ್ ಅರ್ಧಶತಕಗಳ ನೆರವಿನಿಂದ 290 ರನ್ ಗಳಿಸಿ ಆಲ್ ಔಟ್ ಆಗಿ ಮೊದಲನೇ ಇನ್ನಿಂಗ್ಸ್‌ನಲ್ಲಿ 99 ರನ್‌ಗಳ ಮುನ್ನಡೆಯನ್ನು ಸಾಧಿಸಿತು. ಸದ್ಯ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿರುವ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೇ 43 ರನ್ ಗಳಿಸಿದ್ದು 56 ರನ್‌ಗಳ ಹಿನ್ನಡೆಯನ್ನು ಅನುಭವಿಸಿದೆ.

ಮೂರನೇ ದಿನದಾಟ ಎರಡೂ ತಂಡಗಳಿಗೂ ಅತಿ ಮುಖ್ಯ
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಸೆಪ್ಟೆಂಬರ್ 4ರ ಶನಿವಾರದಂದು ನಡೆಯಲಿದ್ದು ಈ ದಿನ ಎರಡೂ ತಂಡಗಳಿಗೂ ಅತಿ ಮುಖ್ಯವಾಗಿದೆ. ಒಂದೆಡೆ ಯಾವುದೇ ವಿಕೆಟ್ ಕಳೆದುಕೊಳ್ಳದೇ 43 ರನ್ ಬಾರಿಸಿ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡುತ್ತಿರುವ ಟೀಮ್ ಇಂಡಿಯಾ ಹೆಚ್ಚು ವಿಕೆಟ್ ಕಳೆದುಕೊಳ್ಳದೇ ಬ್ಯಾಟಿಂಗ್ ಮಾಡಬೇಕಾದ ಅನಿವಾರ್ಯತೆಯಿದೆ. ಮತ್ತೊಂದೆಡೆ 56 ರನ್ ಮುನ್ನಡೆಯಲ್ಲಿರುವ ಇಂಗ್ಲೆಂಡ್ ಆದಷ್ಟು ಬೇಗ ಟೀಮ್ ಇಂಡಿಯಾ ಆಟಗಾರರ ವಿಕೆಟ್‍ಗಳನ್ನು ಪಡೆದುಕೊಂಡು ಕೊಹ್ಲಿ ಪಡೆಯನ್ನು ಒತ್ತಡಕ್ಕೆ ಸಿಲುಕಿಸುವ ಯೋಜನೆಯಲ್ಲಿದೆ. ಹೀಗಾಗಿ ಮೂರನೇ ದಿನದಾಟ ಅತಿ ಮುಖ್ಯವಾಗಿದ್ದು ಪಂದ್ಯದ ಫಲಿತಾಂಶದಲ್ಲಿ ಈ ದಿನ ದೊಡ್ಡ ಪಾತ್ರವನ್ನು ನಿರ್ವಹಿಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications