4ನೇ ಟೆಸ್ಟ್: ಭಾರತ ನೀಡಿರುವ ಗುರಿ ಮುಟ್ಟುವುದು ಸುಲಭದ ಮಾತಲ್ಲ ಎಂದ ಇಂಗ್ಲೆಂಡ್ ಆಟಗಾರ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಲಂಡನ್ ನಗರದ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸಮಬಲವನ್ನು ಸಾಧಿಸಿವೆ.
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಎರಡೂ ತಂಡಗಳು ಸಹ ಸಮಬಲವನ್ನು ಸಾಧಿಸಿರುವುದರಿಂದ ಸದ್ಯ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೇಲೆ ನಿರೀಕ್ಷೆ ಮತ್ತು ಕುತೂಹಲಗಳು ದೊಡ್ಡ ಮಟ್ಟದಲ್ಲಿವೆ. ಎರಡೂ ತಂಡಗಳು ಸಹ ಈ ಪಂದ್ಯದಲ್ಲಿ ಗೆಲುವನ್ನು ಸಾಧಿಸುವ ಮೂಲಕ ಸರಣಿಯಲ್ಲಿ ಮೇಲುಗೈ ಸಾಧಿಸಬೇಕೆಂಬ ಯೋಜನೆಯಲ್ಲಿದ್ದು ಪಂದ್ಯ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ.
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಪಡೆದ ಟೀಂ ಇಂಡಿಯಾ 191 ರನ್ ಗಳಿಸಿ ಆಲ್ ಔಟ್ ಆಗಿತ್ತು. ನಂತರ ತನ್ನ ಮೊದಲನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 290 ರನ್ ಗಳಿಸಿ 99 ರನ್‌ಗಳ ಮುನ್ನಡೆಯನ್ನು ಸಾಧಿಸಿತು. ಹೀಗೆ ಮೊದಲನೇ ಇನ್ನಿಂಗ್ಸ್‌ನಲ್ಲಿ ಕಳಪೆ ಪ್ರದರ್ಶನ ನೀಡಿ ಮಂಕಾಗಿದ್ದ ಟೀಮ್ ಇಂಡಿಯಾ ದ್ವಿತೀಯ ಇನ್ನಿಂಗ್ಸ್‌ನಲ್ಲಿ 466 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ಗುರಿಯನ್ನು ನೀಡಿದೆ. ಇನ್ನು ನಾಲ್ಕನೇ ದಿನದಂದು ಇಂಗ್ಲೆಂಡ್ ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ್ದು ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ನಷ್ಟವಿಲ್ಲದೇ 77 ರನ್ ಗಳಿಸಿದೆ.
ಹೀಗೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿರುವ ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದ ಕೊನೆಯ ದಿನದಾಟದಲ್ಲಿ 291 ರನ್‌ಗಳ ಗುರಿಯನ್ನು 90 ಓವರ್‌ಗಳಲ್ಲಿ ಮುಟ್ಟಬೇಕಾದ ಅನಿವಾರ್ಯತೆಯಿದೆ ಹಾಗೂ 10 ವಿಕೆಟ್‍ಗಳು ಕೈನಲ್ಲಿರುವುದು ಇಂಗ್ಲೆಂಡ್ ತಂಡಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಎಂದೇ ಹೇಳಬಹುದು. ಇನ್ನು ಟೀಮ್ ಇಂಡಿಯಾ ನೀಡಿರುವ ಗುರಿಯನ್ನು ಬೆನ್ನತ್ತುವ ಕುರಿತು ಇಂಗ್ಲೆಂಡ್ ತಂಡದ ಪ್ರಮುಖ ಆಲ್ ರೌಂಡರ್ ಕ್ರಿಸ್ ವೋಕ್ಸ್ ಮಾತನಾಡಿದ್ದು ಈ ಕೆಳಕಂಡಂತೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ.

ಪಿಚ್ ಬ್ಯಾಟಿಂಗ್‌ಗೆ ಸಹಕಾರಿಯಾಗಿದೆ
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಕೊನೆಯ ದಿನದಾಟದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಇಂಗ್ಲೆಂಡ್ ಆಟಗಾರ ಕ್ರಿಸ್ ವೋಕ್ಸ್ 'ಓವಲ್ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿದೆ, ಆರಂಭಿಕ ಆಟಗಾರರು ಸಹ ಉತ್ತಮ ಆರಂಭವನ್ನು ನೀಡಿದ್ದು, ಇದೇ ರೀತಿ ಇನ್ನಿಂಗ್ಸ್ ಪೂರ್ತಿ ಆಟವನ್ನಾಡಿದರೆ ಭಾರತ ನೀಡಿರುವ ಗುರಿಯನ್ನು ಮುಟ್ಟುಬಹುದು' ಎಂದಿದ್ದಾರೆ.

ಭಾರತ ನೀಡಿರುವ ಗುರಿಯನ್ನು ಮುಟ್ಟುವುದು ಸುಲಭದ ಮಾತಲ್ಲ
ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 466 ರನ್ ಕಲೆ ಹಾಕುವುದರ ಮೂಲಕ ಇಂಗ್ಲೆಂಡ್ ತಂಡಕ್ಕೆ ಗೆಲ್ಲಲು 368 ರನ್‌ಗಳ ಗುರಿಯನ್ನು ನೀಡಿತ್ತು. ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ತನ್ನ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೇ 77 ರನ್ ಗಳಿಸಿದ್ದು, ಐದನೇ ದಿನದಂದು 90 ಓವರ್‌ಗಳಲ್ಲಿ 291 ರನ್ ಗಳಿಸಬೇಕಾದ ಅನಿವಾರ್ಯತೆಯಿದೆ. ಹೀಗೆ ಕೊನೆಯ ದಿನದಂದು ಭಾರತ ನೀಡಿರುವ 291 ರನ್ ಗುರಿಯನ್ನು ಮುಟ್ಟುವುದು ಸುಲಭದ ಮಾತಲ್ಲ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಕ್ರಿಸ್ ವೋಕ್ಸ್ ತಂಡದ ಉಳಿದ ಆಟಗಾರರು ಸಹ ಸರಿಯಾದ ರೀತಿಯಲ್ಲಿ ಆಟವನ್ನು ಆಡಿದರೆ ಮಾತ್ರ ಗೆಲುವು ಸಾಧ್ಯ ಎಂದಿದ್ದಾರೆ.

50 ವರ್ಷಗಳ ಇತಿಹಾಸದ ಪ್ರಶ್ನೆ!
ಇನ್ನು ಟೀಮ್ ಇಂಡಿಯಾ ಓವಲ್ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯವನ್ನು ಗೆದ್ದು ಸರಿಯಾಗಿ 50 ವರ್ಷಗಳೇ ಕಳೆದಿವೆ. ಹೌದು, 1971ರಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದಿದ್ದ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಿತ್ತು, ಅದನ್ನು ಹೊರತುಪಡಿಸಿದರೆ ಓವಲ್ ಕ್ರೀಡಾಂಗಣದಲ್ಲಿ ನಡೆದಿರುವ ಬೇರೆ ಯಾವುದೇ ಟೆಸ್ಟ್ ಪಂದ್ಯವನ್ನು ಸಹ ಟೀಮ್ ಇಂಡಿಯಾ ಗೆದ್ದಿಲ್ಲ. ಇದುವರೆಗೂ ಓವಲ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಒಟ್ಟು 13 ಬಾರಿ ಮುಖಾಮುಖಿಯಾಗಿದ್ದು ಇಂಗ್ಲೆಂಡ್ 5 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಭಾರತ ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ ಹಾಗೂ ಉಳಿದ 7 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ. ಹೀಗಾಗಿ ಪ್ರಸ್ತುತ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯ 50 ವರ್ಷಗಳ ಇತಿಹಾಸದ ಪ್ರಶ್ನೆ ಕೂಡ ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications