ಈತನನ್ನು ಓವಲ್ ಟೆಸ್ಟ್‌ನಿಂದ ಕೈಬಿಟ್ಟರೆ ಭಾರತಕ್ಕೆ ಗೆಲುವು ಖಚಿತ ಎಂದು ಭವಿಷ್ಯ ನುಡಿದ ಕನೇರಿಯಾ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಸೆಪ್ಟೆಂಬರ್ 2, ಗುರುವಾರದಂದು ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು ಸೆಪ್ಟೆಂಬರ್ 6 ಕ್ಕೆ ಮುಕ್ತಾಯವಾಗಲಿದೆ.
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯದಲ್ಲಿ ಜಯ ಗಳಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಹೌದು, ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಟೆಸ್ಟ್ ಪಂದ್ಯ ಮಳೆಯ ಕಾರಣದಿಂದಾಗಿ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು, ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 151 ರನ್‌ಗಳ ಗೆಲುವನ್ನು ಸಾಧಿಸಿತ್ತು ಮತ್ತು ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ 76 ರನ್‌ಗಳ ಸರಣಿ ಗೆಲುವನ್ನು ದಾಖಲಿಸಿತು. ಹೀಗೆ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-1 ಸಮಬಲವನ್ನು ಸಾಧಿಸಿರುವ ಎರಡೂ ತಂಡಗಳು ಸಹ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯವನ್ನು ಗೆಲ್ಲುವತ್ತ ಹೆಚ್ಚಿನ ಗಮನ ಹರಿಸಿವೆ.
ಈ ಪಂದ್ಯ ಕ್ರಿಕೆಟ್ ಅಭಿಮಾನಿಗಳು, ಮಾಜಿ ಕ್ರಿಕೆಟಿಗರು ಹಾಗೂ ಕ್ರೀಡಾ ಪಂಡಿತರಲ್ಲಿಯೂ ಸಹ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟು ಹಾಕಿದ್ದು ಈಗಾಗಲೇ ಸಾಕಷ್ಟು ಮಾಜಿ ಕ್ರಿಕೆಟಿಗರು ಈ ಪಂದ್ಯದ ಕುರಿತು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಹಾಗೂ ಟೀಮ್ ಇಂಡಿಯಾಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಇದೀಗ ಈ ಕುರಿತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಪ್ರತಿಕ್ರಿಯೆಯನ್ನು ನೀಡಿದ್ದು ತಮ್ಮ ಅಭಿಪ್ರಾಯವನ್ನು ಈ ಕೆಳಕಂಡಂತೆ ವ್ಯಕ್ತಪಡಿಸಿದ್ದಾರೆ.

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್‌ನ್ನು ತಂಡದಿಂದ ಕೈಬಿಡಬೇಕು
ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದಿಂದ ರಿಷಭ್ ಪಂತ್ ಅವರನ್ನು ಕೈಬಿಡಬೇಕು ಎಂದಿದ್ದಾರೆ. 'ರಿಷಭ್ ಪಂತ್ ಓರ್ವ ಪ್ರತಿಭಾವಂತ ಆಟಗಾರ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಪ್ರತಿಯೊಬ್ಬರು ಫಾರ್ಮ್ ಪಡೆದುಕೊಳ್ಳುತ್ತಾರೆ, ಫಾರ್ಮ್ ಕಳೆದುಕೊಳ್ಳುತ್ತಾರೆ ಮತ್ತು ರಿಷಭ್ ಪಂತ್‌ನ್ನು ಈ ಪಂದ್ಯದಿಂದ ಹೊರಗಿಟ್ಟರೆ ಕೆಲ ಸಮಯ ವಿಶ್ರಾಂತಿಯನ್ನು ಪಡೆದುಕೊಂಡು ಉತ್ತಮ ಫಾರ್ಮ್‌ಗೆ ಮರಳಬಹುದು' ಎಂದು ದಾನಿಶ್ ಕನೇರಿಯಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಪಂತ್ ಬದಲು ವೃದ್ದಿಮಾನ್ ಸಹಾಗೆ ಅವಕಾಶ ನೀಡಿ
ಇನ್ನೂ ಮುಂದುವರಿದು ಮಾತನಾಡಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ರಿಷಭ್ ಪಂತ್ ಅವರನ್ನು ತಂಡದಿಂದ ಕೈ ಬಿಟ್ಟು ಮತ್ತೋರ್ವ ಕೀಪರ್ ವೃದ್ದಿಮಾನ್ ಸಹಾಗೆ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶವನ್ನು ನೀಡಬೇಕೆಂದು ದಾನಿಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ರಿಷಭ್ ಪಂತ್ ತನ್ನ ಸ್ವಾಭಾವಿಕ ಆಟವನ್ನು ಆಡುತ್ತಿಲ್ಲ
ರಿಷಭ್ ಪಂತ್ ಬದಲು ವೃದ್ಧಿಮಾನ್ ಸಹಾಗೆ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಸ್ಥಾನ ನೀಡಬೇಕು ಎಂದು ಅಭಿಪ್ರಾಯಪಟ್ಟಿರುವ ದಾನಿಶ್ ಕನೇರಿಯಾ ರಿಷಭ್ ಪಂತ್ ತಮ್ಮ ಸ್ವಾಭಾವಿಕ ಆಟವನ್ನು ಆಡದೇ ರನ್ ಗಳಿಸಲು ಹೋಗಿ ಎಡವುತ್ತಿದ್ದಾರೆ ಎಂದಿದ್ದಾರೆ. ಕಳೆದ ಆಸ್ಟ್ರೇಲಿಯಾ ಸರಣಿಯಲ್ಲಿ ತನ್ನ ಸ್ವಾಭಾವಿಕ ಆಟದ ಮೂಲಕ ಮಿಂಚಿದ್ದ ರಿಷಭ್ ಪಂತ್ ಸದ್ಯ ಸ್ವಾಭಾವಿಕ ಕಳಪೆ ಫಾರ್ಮ್‌ನಲ್ಲಿದ್ದಾರೆ ಎಂದು ದಾನಿಶ್ ಕನೇರಿಯಾ ಅಭಿಪ್ರಾಯಪಟ್ಟಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications