IND vs ENG: ವೀರೇಂದ್ರ ಸೆಹ್ವಾಗ್‌ರ 16 ವರ್ಷಗಳ ಹಳೆಯ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್
ಶುಕ್ರವಾರ, ಫೆಬ್ರವರಿ 24ರಿಂದ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ.
ಶನಿವಾರದಂದು ಎರಡನೇ ದಿನದಾಟದಲ್ಲಿ ಇಂಗ್ಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 104.5 ಓವರ್‌ಗಳಲ್ಲಿ 353 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಎರಡನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 219 ರನ್ ಕಲೆಹಾಕಿದೆ.

ಐದು ಪಂದ್ಯಗಳ ಸರಣಿಯ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ತಮ್ಮ ಮೂರನೇ ಟೆಸ್ಟ್ ಅರ್ಧಶತಕವನ್ನು ಗಳಿಸಿದರು.
ಇದೇ ವೇಳೆ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್ ಬಾರಿಸಿದ ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ 16 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.
ಯಶಸ್ವಿ ಜೈಸ್ವಾಲ್ ಅವರು ಇಂಗ್ಲೆಂಡ್ ಸ್ಪಿನ್ನರ್ ಶೋಯೆಬ್ ಬಶೀರ್ ಬೌಲಿಂಗ್‌ನಲ್ಲಿ ಲಾಂಗ್ ಆನ್ ಕಡೆಗೆ ಸಿಕ್ಸರ್ ಬಾರಿಸಿ ವೀರೇಂದ್ರ ಸೆಹ್ವಾಗ್ ಅವರ ಸುದೀರ್ಘ ದಾಖಲೆಯನ್ನು ಮುರಿದರು.

ಗಮನಾರ್ಹವಾಗಿ, ಯಶಸ್ವಿ ಜೈಸ್ವಾಲ್ 2024ರಲ್ಲಿ ತನ್ನ ಐದನೇ ಟೆಸ್ಟ್ ಪಂದ್ಯದಲ್ಲಿ ಸೆಹ್ವಾಗ್ ಅವರ ಕ್ಯಾಲೆಂಡರ್ ವರ್ಷದಲ್ಲಿ ಸಿಕ್ಸರ್‌ಗಳ ಸಂಖ್ಯೆಯನ್ನು ಮೀರಿಸಿದ್ದಾರೆ. ಆದರೆ ಮಾಜಿ ಆರಂಭಿಕ ಬ್ಯಾಟರ್ ಈ ದಾಖಲೆಯನ್ನು ಸ್ಥಾಪಿಸಲು 2008ರಲ್ಲಿ 14 ಪಂದ್ಯಗಳು ಮತ್ತು 27 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡಿದ್ದರು.
ಯಶಸ್ವಿ ಜೈಸ್ವಾಲ್ ಇದೀಗ 2024ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 23 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ 2008ರಲ್ಲಿ ಸೆಹ್ವಾಗ್ ಸಿಡಿಸಿದ 22 ಸಿಕ್ಸರ್‌ಗಳ ದಾಖಲೆ ಮತ್ತು 2022ರಲ್ಲಿ ರಿಷಭ್ ಪಂತ್ ಅವರ 21 ಸಿಕ್ಸರ್‌ಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ಒಂದು ಕ್ಯಾಲೆಂಡರ್ ವರ್ಷದಲ್ಲಿ ಭಾರತ ಪರ ಅತಿ ಹೆಚ್ಚು ಟೆಸ್ಟ್ ಸಿಕ್ಸರ್ ಬಾರಿಸಿದ ಬ್ಯಾಟರ್ಸ್
ಯಶಸ್ವಿ ಜೈಸ್ವಾಲ್: 2024ರಲ್ಲಿ 23 ಸಿಕ್ಸರ್
ವೀರೇಂದ್ರ ಸೆಹ್ವಾಗ್: 2008ರಲ್ಲಿ 22 ಸಿಕ್ಸರ್
ರಿಷಭ್ ಪಂತ್: 2022ರಲ್ಲಿ 21 ಸಿಕ್ಸರ್
ರೋಹಿತ್ ಶರ್ಮಾ: 2019ರಲ್ಲಿ 20 ಸಿಕ್ಸರ್
ಮಯಾಂಕ್ ಅಗರ್ವಾಲ್: 2019ರಲ್ಲಿ 18 ಸಿಕ್ಸರ್
ಸದ್ಯ ಎರಡು ಅರ್ಧಶತಕ ಮತ್ತು ಎರಡು ದ್ವಿಶತಕಗಳೊಂದಿಗೆ ಯಶಸ್ವಿ ಜೈಸ್ವಾಲ್ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ವಿನೋದ್ ಕಾಂಬ್ಳಿ ನಂತರ ಭಾರತ ಪರ ಸತತ ದ್ವಿಶತಕಗಳನ್ನು ಸಿಡಿಸಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾದರು.
ರಾಜ್‌ಕೋಟ್‌ನಲ್ಲಿ ತಮ್ಮ ಅಜೇಯ ದ್ವಿಶತಕದ ನಂತರ, ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಇತ್ತೀಚಿನ ಐಸಿಸಿ ಪುರುಷರ ಟೆಸ್ಟ್ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ 14 ಸ್ಥಾನಗಳನ್ನು ಮೇಲಕ್ಕೇರಿ 15ನೇ ಸ್ಥಾನಕ್ಕೆ ಏರಿದರು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಈಗಾಗಲೇ 600ಕ್ಕೂ ಹೆಚ್ಚು ರನ್ ಗಳಿಸಿರುವ ಯಶಸ್ವಿ ಜೈಸ್ವಾಲ್, ದ್ವಿಪಕ್ಷೀಯ ಸರಣಿಯಲ್ಲಿ 700ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಭಾರತೀಯ ಎಂಬ ದಾಖಲೆ ಬರೆದಿರುವ ಲೆಜೆಂಡ್ ಸುನಿಲ್ ಗವಾಸ್ಕರ್ ಅವರ ದಾಖಲೆಯನ್ನು ಹಿಂದಿಕ್ಕುವ ಗುರಿಯನ್ನು ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications