ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಹಾರ್ದಿಕ್ ಪಾಂಡ್ಯ ಕಿರಿಯರಲ್ಲೇ ಅತ್ಯಂತ ಪ್ರಬುದ್ಧ ನಾಯಕ ಎಂದ ಮಾಜಿ ಕ್ರಿಕೆಟಿಗ

Ind vs Ierland: Hardik Pandya Is The Most Mature Captain Among The Youngest Says Akash Chopra

ಭಾರತದ ಮಾಜಿ ಆರಂಭಿಕ ಆಟಗಾರ ಆಕಾಶ್ ಚೋಪ್ರಾ ಅವರು ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಶ್ಲಾಘಿಸಿದ್ದಾರೆ. ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕಿರಿಯ ಆಟಗಾರರಲ್ಲೇ ಅತ್ಯಂತ ಪ್ರಬುದ್ಧ ನಾಯಕ ಎಂದು ಹೇಳಿದರು.

ಹಾರ್ದಿಕ್ ಪಾಂಡ್ಯ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಕೆಲವು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್‌ಗಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ ಮತ್ತು ಫೈನಲ್‌ನಲ್ಲಿ ಆಲ್‌ರೌಂಡ್ ಪ್ರದರ್ಶನಕ್ಕಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

17 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ

17 ಸದಸ್ಯರ ತಂಡವನ್ನು ಆಯ್ಕೆ ಮಾಡಿದೆ

ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಬುಧವಾರ 17 ಸದಸ್ಯರ ತಂಡವನ್ನು ಆಯ್ಕೆ ಮಾಡಿದ್ದು, ಐರ್ಲೆಂಡ್ ವಿರುದ್ಧ ಎರಡು ಟಿ20 ಪಂದ್ಯಗಳಿಗೆ ಭಾರತ ತಂಡದ ನಾಯಕರಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಹೆಸರಿಸಿದೆ. ಐಪಿಎಲ್ 2022ರ ಪ್ರಶಸ್ತಿಗೆ ಗುಜರಾತ್ ಟೈಟನ್ಸ್ ಪರ ನಾಯಕತ್ವದಲ್ಲಿ ಅವರು ಪ್ರದರ್ಶಿಸಿದ ನಾಯಕತ್ವ ಕೌಶಲ್ಯವನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಾಯಕನಾಗುವ ಅವಕಾಶವನ್ನು ಹಾರ್ದಿಕ್ ಪಾಂಡ್ಯ ಪಡೆದಿದ್ದಾರೆ.

ಐರ್ಲೆಂಡ್ ಪ್ರವಾಸದ ವೇಳೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಂಡವನ್ನು ಮುನ್ನಡೆಸಲಿದ್ದು, ವೇಗಿ ಭುವನೇಶ್ವರ್ ಕುಮಾರ್ ಉಪ ನಾಯಕರಾಗಿರುತ್ತಾರೆ. ಟೀಂ ಇಂಡಿಯಾ ಜೂನ್ 26 ಮತ್ತು ಜೂನ್ 28ರಂದು ಡಬ್ಲಿನ್‌ನಲ್ಲಿ ಎರಡು ಟಿ20 ಪಂದ್ಯಗಳನ್ನು ಆಡಲಿದೆ.

ಟೀಮ್ ಇಂಡಿಯಾದ ನಾಯಕತ್ವ ಹುದ್ದೆಗಾಗಿ ಶುಭಕೋರಿದ ಆಕಾಶ್ ಚೋಪ್ರಾ

ಟೀಮ್ ಇಂಡಿಯಾದ ನಾಯಕತ್ವ ಹುದ್ದೆಗಾಗಿ ಶುಭಕೋರಿದ ಆಕಾಶ್ ಚೋಪ್ರಾ

"ಹಾರ್ದಿಕ್ ಪಾಂಡ್ಯ ಕ್ರಿಕೆಟ್‌ನಲ್ಲಿ ಬೆಳೆಯುತ್ತಿದ್ದಾರೆ. ಅವರು ಕೇವಲ ಒಂದು ಐಪಿಎಲ್ ಋತುವಿನಲ್ಲಿ ನಾಯಕರಾಗಿದ್ದರೂ ಸಹ ಅವರು ಕಿರಿಯ ಸ್ಪರ್ಧಿಗಳ ಪೈಕಿ ಅತ್ಯಂತ ಪ್ರಬುದ್ಧ ನಾಯಕ ಎಂದು ನಾನು ಭಾವಿಸುತ್ತೇನೆ. ಐರ್ಲೆಂಡ್ ವಿರುದ್ಧದ ಟೀಮ್ ಇಂಡಿಯಾದ ನಾಯಕತ್ವ ಹುದ್ದೆಗಾಗಿ ಅವರಿಗೆ ಶುಭ ಹಾರೈಸುತ್ತೇನೆ,'' ಎಂದು ಆಕಾಶ್ ಚೋಪ್ರಾ Koo ಅಪ್ಲಿಕೇಶನ್‌ನಲ್ಲಿ ಹೇಳಿದರು.

ಈ ಮಧ್ಯೆ ಐಪಿಎಲ್ 2022ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಅನ್ನು ಪ್ರತಿನಿಧಿಸಿದ್ದ ಬ್ಯಾಟರ್ ರಾಹುಲ್ ತ್ರಿಪಾಠಿ ಅವರು ತಮ್ಮ ಮೊದಲ ರಾಷ್ಟ್ರೀಯ ತಂಡಕ್ಕೆ ಕರೆ ಪಡೆದಿದ್ದಾರೆ. ಬ್ಯಾಟ್ಸ್‌ಮನ್‌ಗಳಾದ ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ಕೂಡ ರಾಷ್ಟ್ರೀಯ ತಂಡಕ್ಕೆ ಮರಳಲಿದ್ದಾರೆ.

ದಿನೇಶ್ ಕಾರ್ತಿಕ್ ಅವರಿಗೆ ವಿಕೆಟ್ ಕೀಪರ್ ಜವಾಬ್ದಾರಿ

ದಿನೇಶ್ ಕಾರ್ತಿಕ್ ಅವರಿಗೆ ವಿಕೆಟ್ ಕೀಪರ್ ಜವಾಬ್ದಾರಿ

ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ, ದಿನೇಶ್ ಕಾರ್ತಿಕ್ ಅವರಿಗೆ ವಿಕೆಟ್ ಕೀಪರ್ ಜವಾಬ್ದಾರಿ ನೀಡಲಾಗಿದೆ. ಆದರೆ ರಿಷಭ್ ಪಂತ್ ಅವರ ಅನುಪಸ್ಥಿತಿಯಲ್ಲಿ ಕಾರ್ತಿಕ್ ಮತ್ತು ಇಶಾನ್ ಕಿಶನ್ ಇಬ್ಬರೂ ವಿಕೆಟ್ ಕೀಪರ್ ಪಾತ್ರವನ್ನು ನಿರ್ವಹಿಸಬಹುದು.

2022ರ ಜೂನ್ ಅಂತ್ಯದಲ್ಲಿ ನಡೆಯುವ ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದ ನಂತರ ಗುಜರಾತ್ ಟೈಟನ್ಸ್ ಆಲ್‌ರೌಂಡರ್ ರಾಹುಲ್ ತೆವಾಟಿಯಾ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಐರ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾದ ತಂಡದಲ್ಲಿ ಹೆಚ್ಚಾಗಿ ಜೂನಿಯರ್ ಆಟಗಾರರು ಇದ್ದಾರೆ. ತಮ್ಮ ಚೊಚ್ಚಲ ಐಪಿಎಲ್ 2022 ಟ್ರೋಫಿಗೆ ಗುಜರಾತ್ ಟೈಟನ್ಸ್ ಪ್ರಯಾಣದಲ್ಲಿ ಪ್ರಮುಖ ಆಟಗಾರನಾಗಿದ್ದ ರಾಹುಲ್ ತೆವಾಟಿಯಾ, ರಾಷ್ಟ್ರೀಯ ತಂಡಕ್ಕೆ ಕಡೆಗಣಿಸಿದ್ದಕ್ಕೆ ನಿರಾಸೆಗೊಂಡಿದ್ದಾರೆ. ಈ ಕುರಿತು ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಐರ್ಲೆಂಡ್ ವಿರುದ್ಧದ ಸರಣಿಗೆ ಸೆಲೆಕ್ಟ್ ಆಗಿಲ್ಲ ಅಂತ ರಾಹುಲ್ ತೆವಾಟಿಯಾ ಮಾಡಿದ್ದೇನು?|*Cricket | OneIndia Kannada
ಐರ್ಲೆಂಡ್ ವಿರುದ್ಧ ಭಾರತದ ಟಿ20 ತಂಡ

ಐರ್ಲೆಂಡ್ ವಿರುದ್ಧ ಭಾರತದ ಟಿ20 ತಂಡ

ರಾಹುಲ್ ತೆವಾಟಿಯಾ ಟ್ವಿಟ್ಟರ್‌ನಲ್ಲಿ ಎರಡು ದುಃಖ ಮತ್ತು ಕೋಪದ ಎಮೋಜಿಗಳೊಂದಿಗೆ "ನಿರೀಕ್ಷೆಗಳು ನೋವುಂಟುಮಾಡುತ್ತವೆ' ಎಂದು ಪೋಸ್ಟ್ ಮಾಡಿದ್ದಾರೆ. ಐರ್ಲೆಂಡ್ ವಿರುದ್ಧದ ಸರಣಿ ವೇಳೆ ಹೆಚ್ಚಿನ ಹಿರಿಯ ಆಟಗಾರರು ಇಂಗ್ಲೆಂಡ್‌ನಲ್ಲಿರುವುದರಿಂದ ರಾಹುಲ್ ತೆವಾಟಿಯಾ ತನಗೆ ಅವಕಾಶ ಸಿಗಬಹುದೆಂದು ನಿರೀಕ್ಷಿಸುತ್ತಿದ್ದರು. ಆದರೆ ಆಯ್ಕೆದಾರರು ಕೆಲವು ಹೊಸ ಮುಖಗಳಿಗೆ ಅವಕಾಶವನ್ನು ನೀಡಿದ್ದಾರೆ.

ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪ ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಆರ್. ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.

Story first published: Thursday, June 16, 2022, 17:39 [IST]
Other articles published on Jun 16, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X