ಐರ್ಲೆಂಡ್-ಭಾರತ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ: ಟಾಸ್ ಗೆದ್ದಿರುವ ಟೀಂ ಇಂಡಿಯಾ

ಐಲೆಂಡ್ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಡಬ್ಲಿನ್‌ನ ದಿ ವಿಲೇಜ್‌ನಲ್ಲಿ ನಡೆಯುತ್ತಿರುವ ಮೊದಲ ಟಿ20 ಪಂದ್ಯದ ಟಾಸ್ ಬಳಿಕ ಮಳೆ ಕಾಟ ಹೆಚ್ಚಾಗಿದ್ದು, ಪಂದ್ಯ ಪ್ರಾರಂಭವಾಗುವುದು ವಿಳಂಭವಾಗಿದೆ.
ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಟೀಂ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಕಳೆದ ಟಿ20 ಸರಣಿಯಲ್ಲಿ ಆಡಿದ ಬಹುತೇಕ ಆಟಗಾರರು ಪ್ರಸ್ತುತ ತಂಡದಲ್ಲಿದ್ದಾರೆ. ಜಮ್ಮು ಕಾಶ್ಮೀರ ವೇಗದ ಬೌಲರ್ ಉಮ್ರಾನ್ ಮಲ್ಲಿಕ್ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದು, ಟೀಂ ಇಂಡಿಯಾ ಪರ ಮೊದಲ ಜೆರ್ಸಿ ತೊಟ್ಟಿದ್ದಾರೆ.

ಸೂರ್ಯಕುಮಾರ್ ಕಂಬ್ಯಾಕ್
ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಮಿಸ್ ಆಗಿದ್ದ, ಐಪಿಎಲ್ 2022ರ ಸೀಸನ್ ಮಧ್ಯದಲ್ಲೇ ಇಂಜ್ಯುರಿಯಿಂದ ತಂಡದಿಂದ ಹೊರನಡೆದಿದ್ದ ಸೂರ್ಯಕುಮಾರ್ ಕೂಡ ಕಂಬ್ಯಾಕ್ ಮಾಡಿರುವುದು ಅಭಿಮಾನಿಗಳಿಗೆ ಖುಷಿ ತರಿಸಿದ್ರೆ, ಪಂದ್ಯಕ್ಕೆ ಮಳೆ ಅಡ್ಡಿಪಡಿಸಿರುವುದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಮಳೆ ನಿಲ್ಲದೆ ಬರುತ್ತಿರುವ ಹಿನ್ನಲೆಯಲ್ಲಿ ಪಂದ್ಯ ರದ್ದಾಗುವ ಭೀತಿ ಎದುರಾಗಿದೆ.
ಭಾರತ ತಂಡದ ಭವಿಷ್ಯದ ನಾಯಕ ನಿಶ್ಚಿತವಾಗಿಯೂ ಈತನೇ ಎಂದ ದಿಲೀಪ್ ವೆಂಗ್‌ಸರ್ಕಾರ್

ಟೀಂ ಇಂಡಿಯಾ ಪ್ಲೇಯಿಂಗ್ 11
ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್
ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ಎರಡರಲ್ಲೂ ದ್ವಿಶತಕ ಸಿಡಿಸಿದ ನಾಲ್ವರು ಬ್ಯಾಟ್ಸ್‌ಮನ್‌ಗಳು

ಐರ್ಲೆಂಡ್ ಪ್ಲೇಯಿಂಗ್ 11
ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications