ಬೂಮ್ ಬೂಮ್ ಬೂಮ್ರಾ...: ಮೊದಲ ಓವರ್‌ನಲ್ಲೇ 2 ವಿಕೆಟ್ ಕಿತ್ತು ಭರ್ಜರಿ ಕಮ್‌ಬ್ಯಾಕ್!!
ಟೀಮ್ ಇಂಡಿಯಾದ ಅನುಭವಿ ವೇಗಿ ಜಸ್ಪ್ರೀತ್ ಬೂಮ್ರಾ ಟೀಮ್ ಇಂಡಿಯಾಗೆ ಅದ್ಭುತ ರೀತಿಯಲ್ಲಿ ಕಮ್‌ಬ್ಯಾಕ್ ಮಾಡಿದ್ದಾರೆ. ಸುದೀರ್ಘ 10 ತಿಂಗಳ ಬಳಿಕ ಟೀಮ್ ಇಂಡಿಯಾ ಪರವಾಗಿ ಆಡುತ್ತಿರುವ ಬೂಮ್ರಾ ಫಾರ್ಮ್, ಫಿಟ್‌ನೆಸ್ ಬಗ್ಗೆ ಸಾಕಷ್ಟು ಪ್ರಶ್ನೆಗಳು ಮೂಡಿದ್ದವು. ಇದಕ್ಕೆ ಬೂಮ್ರಾ ಮೊದಲ ಫವರ್‌ನಲ್ಲಿಯೇ ತನ್ನದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ.
ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡ ಬಳಿಕ ಆರಂಭಿಕ ಓವರ್‌ನಲ್ಲಿಯೇ ಬೂಮ್ರಾ ಅಮೋಘ ಪ್ರದರ್ಶನ ನೀಡಿದ್ದಾರೆ. ತನ್ನ ಮೂಲಕವೇ ಬೌಲಿಂಗ್ ಆರಂಭಿಸಿದ ಬೂಮ್ರಾ ಆರಂಭಿಕ ಎಸೆತದಲ್ಲಿ ಬೌಂಡರಿ ಬಾರಿಸಿಕೊಂಡರು. ಆದರೆ ಅದಾದ ಮುಂದಿನ ಎಸೆತದಲ್ಲಿಯೇ ಆರಂಭಿಕ ಆಟಗಾರ ಆಂಟ್ರ್ಯೋ ಬಲ್ಬರ್ನೈ ಅವರನ್ನು ಬೌಲ್ಡ್ ಮಾಡಿ ಫೆವಿಲಿಯನ್‌ಗೆ ಅಟ್ಟಿದರು. ಈ ಮೂಲಕ ಎರಡನೇ ಎಸೆತದಲ್ಲಿಯೇ ವಿಕೆಟ್ ಪಡೆದರು.

ನಂತರ ನಾಲ್ಕನೇ ಎಸೆತವನ್ನು ತೀಕ್ಷ್ಣ ಯಾರ್ಕರ್ ಮೂಲಕ ಎದುರಾಳಿ ಲೋರ್ಕಾನ್ ಟಕ್ಕರ್ ಅವರನ್ನು ಒಂದು ಕ್ಷಣ ತಬ್ಬಿಬ್ಬುಗೊಳಿಸಿದ್ದರು. ಐದನೇ ಎಸೆತದಲ್ಲಿ ಬೂಮ್ರಾ ಎಸೆತವನ್ನು ಸ್ಕೂಪ್ ಮಾಡುವ ವಿಫಲ ಯತ್ನ ನಡೆಸಿದ ಟಕ್ಕರ್ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ಈ ಮೂಲಕ ಮೊದಲ ಓವರ್‌ನಲ್ಲಿಯೇ ಜಸ್ಪ್ರೀತ್ ಬೂಮ್ರಾ ಎರಡು ವಿಕೆಟ್ ಕಬಳಿಸಿ ಐರ್ಲೆಂಡ್ ತಂಡಕ್ಕೆ ದೊಡ್ಡ ಆಘಾತ ನೀಡಿದ್ದಾರೆ.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿತು. ಹೀಗಾಗಿ ಐರ್ಲೆಂಡ್ ತಂಡ ಆರಂಭದಲ್ಲಿ ಬ್ಯಾಟಿಂಗ್‌ಗೆ ಇಳಿದಿದೆ. ಟೀಮ್ ಇಂಡಿಯಾ ಪರವಾಗಿ ಇಬ್ಬರು ಆಟಗಾರರು ಟಿ20 ಮಾದರಿಗೆ ಪದಾರ್ಪಣೆ ಮಾಡಿದ್ದಾರೆ. ರಿಂಕು ಸಿಂಗ್ ಇದೇ ಮೊದಲ ಬಾರಿಗೆ ಭಾರತ ತಂಡದ ಪರವಾಗಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದರೆ ಪ್ರಸಿದ್ಧ್ ಕೃಷ್ಣ ಕೂಡ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದ್ದಾರೆ.
ಭಾರತ ಹಾಗೂ ಐರ್ಲೆಂಡ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್‌ನಲ್ಲಿ ಅಮೋಘ ಯಶಸ್ಸು ಸಾಧಿಸಿದೆ. ನಾಯಕ ಜಸ್ಪ್ರೀತ್ ಬೂಮ್ರಾ ನೇತೃತ್ವದಲ್ಲಿ ನಡೆದ ಅಮೋಘ ದಾಳಿಗೆ ಐರ್ಲೆಂಡ್ ತಂಡದ ಅಗ್ರ ಕ್ರಮಾಂಕ ಸಂಪೂರ್ಣವಾಗಿ ತತ್ತರಿಸಿತ್ತು. ಆದರೆ ಕೊನೆಯ ಹಂತದಲ್ಲಿ ಉತ್ತಮ ಹೋರಾಟ ಪ್ರದರ್ಶಿಸಿದ ಕಾರಣ ಗೌರವಯುತ ಮೊತ್ತವನ್ನು ಆತಿಥೇಯ ಐರ್ಲೆಂಡ್ ಪೇರಿಸುವಲ್ಲಿ ಯಶಸ್ವಿಯಾಗಿದೆ.
ಟೀಮ್ ಇಂಡಿಯಾ ಆಡುವ ಬಳಗ: ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಅರ್ಶ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ(ನಾಯಕ), ರವಿ ಬಿಷ್ಣೋಯ್
ಐರ್ಲೆಂಡ್ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್(ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್(ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications