ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಐರ್ಲೆಂಡ್ 2ನೇ ಟಿ20: ಹೂಡಾ ಶತಕ, ಸ್ಯಾಮ್ಸನ್ ಅಬ್ಬರ; ಐರ್ಲೆಂಡ್‌ಗೆ ಬೃಹತ್ ರನ್‌ಗಳ ಗುರಿ

IND vs IRE 2nd T20: Deepak Hoodas century helps Team India to mount 227/7 against Ireland

ಡಬ್ಲಿನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಐರ್ಲೆಂಡ್ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 225 ರನ್ ಕಲೆಹಾಕಿ ಎದುರಾಳಿ ಐರ್ಲೆಂಡ್ ತಂಡಕ್ಕೆ 226 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.

ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ಜತೆ ಅರ್ಜುನ್ ತೆಂಡೂಲ್ಕರ್ ಡೇಟಿಂಗ್; ವೈರಲ್ ಆದ್ವು ಫೋಟೋಸ್!ಇಂಗ್ಲೆಂಡ್ ಕ್ರಿಕೆಟ್ ಆಟಗಾರ್ತಿ ಜತೆ ಅರ್ಜುನ್ ತೆಂಡೂಲ್ಕರ್ ಡೇಟಿಂಗ್; ವೈರಲ್ ಆದ್ವು ಫೋಟೋಸ್!

ಕಳೆದ ಪಂದ್ಯಕ್ಕಿಂತ ತಂಡದಲ್ಲಿ 3 ಬದಲಾವಣೆಗಳನ್ನು ಮಾಡಿಕೊಂಡು ಕಣಕ್ಕಿಳಿದ ಟೀಮ್ ಇಂಡಿಯಾ ಪರ ಇಂದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್, ಹರ್ಷಲ್ ಪಟೇಲ್ ಹಾಗೂ ರವಿ ಬಿಷ್ಣೋಯಿ ಸ್ಥಾನ ಗಿಟ್ಟಿಸಿಕೊಂಡಿದ್ದರು. ಅದರಲ್ಲಿಯೂ ಗಾಯಕ್ಕೊಳಗಾದ ರುತುರಾಜ್ ಗಾಯಕ್ವಾಡ್ ಬದಲು ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 77 ರನ್ ಚಚ್ಚಿದರು. ಕಳೆದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ದೀಪಕ್ ಹೂಡಾ ಈ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು 57 ಎಸೆತಗಳಲ್ಲಿ 104 ರನ್ ಕಲೆಹಾಕಿ ಟೀಮ್ ಇಂಡಿಯಾ ಬೃಹತ್ ಮೊತ್ತ ಕಲೆ ಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.

176 ರನ್‌ಗಳ ಜತೆಯಾಟವಾಡಿದ ಹೂಡಾ - ಸ್ಯಾಮ್ಸನ್

176 ರನ್‌ಗಳ ಜತೆಯಾಟವಾಡಿದ ಹೂಡಾ - ಸ್ಯಾಮ್ಸನ್

ಸಂಜು ಸ್ಯಾಮ್ಸನ್ ಜತೆ ಆರಂಭಿಕನಾಗಿ ಕಣಕ್ಕಿಳಿದ ಇಶಾನ್ ಕಿಶನ್ 3 ರನ್ ಕಲೆಹಾಕಿ ಔಟ್ ಆದ ಬೆನ್ನಲ್ಲೇ ದೀಪಕ್ ಹೂಡಾ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಹೀಗೆ ಎರಡನೇ ವಿಕೆಟ್‍ಗೆ ಜತೆಯಾದ ದೀಪಕ್ ಹೂಡಾ ಮತ್ತು ಸಂಜು ಸ್ಯಾಮ್ಸನ್ ಜೋಡಿ 17ನೇ ಓವರ್‌ವರೆಗೂ ಐರ್ಲೆಂಡ್ ಬೌಲರ್‌ಗಳನ್ನು ಕಾಡಿತು. ಬರೋಬ್ಬರಿ 176 ರನ್‌ಗಳ ಜತೆಯಾಟವಾಡಿದ ಈ ಜೋಡಿ ತಂಡ ಬೃಹತ್ ಮೊತ್ತ ಕಲೆ ಹಾಕುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿತು. 9 ಬೌಂಡರಿ ಮತ್ತು 4 ಸಿಕ್ಸರ್ ಚಚ್ಚಿದ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 77 ರನ್ ಕಲೆಹಾಕಿದರೆ, ದೀಪಕ್ ಹೂಡಾ 57 ಎಸೆತಗಳಲ್ಲಿ 9 ಬೌಂಡರಿ ಮತ್ತು 6 ಸಿಕ್ಸರ್ ಸೇರಿದಂತೆ 104 ರನ್ ಬಾರಿಸಿ ಅಬ್ಬರಿಸಿದರು.

ಸ್ಯಾಮ್ಸನ್ ವಿಕೆಟ್ ಉರುಳಿದ ನಂತರ ಕುಸಿದ ಟೀಮ್ ಇಂಡಿಯಾ

ಸ್ಯಾಮ್ಸನ್ ವಿಕೆಟ್ ಉರುಳಿದ ನಂತರ ಕುಸಿದ ಟೀಮ್ ಇಂಡಿಯಾ

ಸಂಜು ಸ್ಯಾಮ್ಸನ್ 77 ರನ್ ಕಲೆ ಹಾಕಿದ್ದಾಗ 17ನೇ ಓವರ್‌ನಲ್ಲಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಟೀಮ್ ಇಂಡಿಯಾ ಆಟಗಾರರು ಸಾಲುಸಾಲಾಗಿ ವಿಕೆಟ್ ಒಪ್ಪಿಸುತ್ತಾ ಪೆವಿಲಿಯನ್ ಪರೇಡ್ ನಡೆಸಿದರು. ಸೂರ್ಯಕುಮಾರ್ ಯಾದವ್ 15 ರನ್ ಕಲೆಹಾಕಿ ಔಟ್ ಆದರೆ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ ಮೂವರೂ ಸಹ ಗೋಲ್ಡನ್ ಡಕ್ ಔಟ್ ಆದರು. ಇನ್ನುಳಿದಂತೆ ನಾಯಕ ಹಾರ್ದಿಕ್ ಪಾಂಡ್ಯ ಅಜೇಯ 13 ಮತ್ತು ಭುವನೇಶ್ವರ್ ಕುಮಾರ್ ಅಜೇಯ 1 ರನ್ ಕಲೆ ಹಾಕಿದರು. ಐರ್ಲೆಂಡ್ ತಂಡದ ಪರ ಮಾರ್ಕ್ ಅಡೈರ್ 3 ವಿಕೆಟ್ ಮತ್ತು ಜೋಶ್ವಾ ಲಿಟಲ್ ಹಾಗೂ ಕ್ರೈಗ್ ಯಂಗ್ ತಲಾ 2 ವಿಕೆಟ್‍ಗಳನ್ನು ಪಡೆದರು.

ಆಡುವ ಬಳಗಗಳು

ಆಡುವ ಬಳಗಗಳು

ಭಾರತ ಆಡುವ ಬಳಗ

ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ವಿಕೆಟ್ ಕೀಪರ್), ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್

ಈ ಪಂದ್ಯದಲ್ಲಿ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದು, ಸಂಜು ಸ್ಯಾಮ್ಸನ್ ಕಣಕ್ಕಿಳಿದಿದ್ದಾರೆ. ಇನ್ನು ತಂಡದಲ್ಲಿ ಮತ್ತೆರಡು ಬದಲಾವಣೆಗಳಾಗಿದ್ದು ಅವೇಶ್ ಖಾನ್ ಬದಲಾಗಿ ಹರ್ಷಲ್ ಪಟೇಲ್ ಕಣಕ್ಕಿಳಿದಿದ್ದಾರೆ ಹಾಗೂ ಯುಜುವೇಂದ್ರ ಚಹಲ್ ಬದಲಾಗಿ ರವಿ ಬಿಷ್ಣೋಯಿ ಕಣಕ್ಕಿಳಿದಿದ್ದಾರೆ.

ಐರ್ಲೆಂಡ್ ಆಡುವ ಬಳಗ

ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್

Story first published: Tuesday, June 28, 2022, 23:13 [IST]
Other articles published on Jun 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X