Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs IRE 2nd T20: ಭಾರತ vs ಐರ್ಲೆಂಡ್ 2ನೇ ಟಿ20 ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ

ಭಾನುವಾರ, ಆಗಸ್ಟ್ 20ರಂದು ಡಬ್ಲಿನ್‌ನ ದಿ ವಿಲೇಜ್‌ನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಸೆಣಸಾಡುತ್ತಿವೆ. ಇದೇ ವೇಳೆ ಜಸ್ಪ್ರೀತ್ ಬುಮ್ರಾ ನಾಯಕತ್ವದ ತಂಡ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಟಾಸ್ ಗೆದ್ದ ಐರ್ಲೆಂಡ್ ತಂಡದ ನಾಯಕ ಪಾಲ್ ಸ್ಟಿರ್ಲಿಂಗ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಜಸ್ಪ್ರೀತ್ ಬುಮ್ರಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

IND vs IRE 2nd T20: Ireland Won The Toss And Elected To Bowl First Aganst India

ಮೊದಲ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಪ್ರವಾಸಿ ಭಾರತ ತಂಡ ಡಿಎಲ್‌ಎಸ್ ವಿಧಾನದ ಮೂಲಕ 2 ರನ್‌ಗಳಿಂದ ಗೆಲುವು ಸಾಧಿಸಿತು ಮತ್ತು ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

11 ತಿಂಗಳ ವಿಶ್ರಾಂತಿಯ ನಂತರ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ ಜಸ್ಪ್ರೀತ್ ಬುಮ್ರಾ ಅವರು ಪಂದ್ಯದ ಮೊದಲ ಓವರ್‌ನಲ್ಲಿ ಎರಡು ವಿಕೆಟ್ ಪಡೆದರು. ಅಂತಿಮವಾಗಿ 4 ಓವರ್‌ಗಳಲ್ಲಿ 24 ರನ್‌ ನೀಡಿ 2 ವಿಕೆಟ್‌ ಅಂಕಿಯೊಂದಿಗೆ ಮುಗಿಸಿದರು.

ಭಾರತ vs ಐರ್ಲೆಂಡ್ ಟಿ20 ಸರಣಿ ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ

ಭಾರತ vs ಐರ್ಲೆಂಡ್ ಟಿ20 ಸರಣಿಯ ಎರಡನೇ ಪಂದ್ಯವು ಭಾರತದಲ್ಲಿ News18 ಟಿವಿ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, JioCinema ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

2ನೇ ಟಿ20 ಪಂದ್ಯಕ್ಕಾಗಿ ಭಾರತ vs ಐರ್ಲೆಂಡ್ ಅಡುವ 11ರ ಬಳಗ

ಭಾರತ: ರುತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ (ನಾಯಕ), ಅರ್ಶ್‌ದೀಪ್ ಸಿಂಗ್, ರವಿ ಬಿಷ್ಣೋಯ್.

ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಕ್ರೇಗ್ ಯಂಗ್, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

Story first published: Sunday, August 20, 2023, 19:12 [IST]
Other articles published on Aug 20, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+