ಭಾರತ vs ಐರ್ಲೆಂಡ್: ಪ್ರಥಮ ಟಿ20 ಪಂದ್ಯದ ಸಂಭಾವ್ಯ ಆಡುವ ಬಳಗ, ಪಿಚ್ ವರದಿ ಮತ್ತು ನೇರಪ್ರಸಾರದ ಮಾಹಿತಿ

ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸಿದ್ದ ಟೀಂ ಇಂಡಿಯಾ ತನ್ನ ಮುಂದಿನ ಅಂತರರಾಷ್ಟ್ರೀಯ ಟಿ ಟ್ವೆಂಟಿ ಸರಣಿಯಲ್ಲಿ ಐರ್ಲೆಂಡ್ ವಿರುದ್ಧ ಸೆಣಸಾಟ ನಡೆಸಲಿದೆ.
ಹೌದು, ಐರ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತ ತಂಡ ಹಾರ್ದಿಕ್ ಪಾಂಡ್ಯ ನಾಯಕತ್ವದಡಿಯಲ್ಲಿ 2 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಕಣಕ್ಕಿಳಿಯಲಿದೆ. ತಂಡದ ಹಲವು ಅನುಭವಿ ಆಟಗಾರರು ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿರುವ ಕಾರಣ ಐರ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾದಲ್ಲಿ ಕಮ್ ಬ್ಯಾಕ್ ಮಾಡಿರುವ ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಹಾಗೂ ಚಾಹಲ್ ಜತೆಗೆ ಅತಿ ಹೆಚ್ಚು ಯುವ ಆಟಗಾರರೇ ಇದ್ದಾರೆ.
ಇನ್ನು ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಪ್ರತಿಷ್ಠಿತ ಐಸಿಸಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುತ್ತಿರುವ ಹಿನ್ನೆಲೆ ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಕೂಡ ಈ ಪ್ರವಾಸ ಕೈಗೊಳ್ಳಲಿದ್ದು, ಸರಣಿಯಲ್ಲಿ ಆಟಗಾರರು ನೀಡುವ ಪ್ರದರ್ಶನದತ್ತ ಕಣ್ಣಿಡಲಿದ್ದಾರೆ ಹಾಗೂ ಉತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಭಾರತ ತಂಡವನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಪ್ರತಿನಿಧಿಸುವ ಸದಾವಕಾಶ ಬಂದರೂ ಬರಬಹುದು. ಹೀಗಾಗಿ ಈ ಟಿ ಟ್ವೆಂಟಿ ಸರಣಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದುಕೊಂಡಿರುವ ಅನೇಕ ಆಟಗಾರರಿಗೆ ಅತ್ಯಮೂಲ್ಯವಾಗಿದ್ದು, ಸರಣಿಯ ಪ್ರಥಮ ಪಂದ್ಯ ನಾಳೆ ( ಜೂನ್ 26 ) ಡಬ್ಲಿನ್‌ನ ಕ್ಯಾಷಲ್ ಅವೆನ್ಯೂ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದ ಕುರಿತಾದ ಮಾಹಿತಿ, ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಸಂಭಾವ್ಯ ಆಡುವ ಬಳಗ ಹಾಗೂ ನೇರಪ್ರಸಾರದ ಮಾಹಿತಿ ಮುಂದೆ ಇದೆ ಓದಿ.

ಪಂದ್ಯದ ಸಮಯ ಮತ್ತು ಪಿಚ್ ವರದಿ
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ ಟ್ವೆಂಟಿ ಪಂದ್ಯ ಡಬ್ಲಿನ್‌ನ ಕ್ಯಾಷಲ್ ಅವೆನ್ಯೂ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಾಳೆ ( ಜೂನ್ 26, ಭಾನುವಾರ ) ನಡೆಯಲಿದ್ದು, ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8.30ಕ್ಕೆ ಶುರುವಾಗಲಿದೆ.
ಡಬ್ಲಿನ್ ಕ್ರೀಡಾಂಗಣದ ಪಿಚ್ ಆರಂಭದಲ್ಲಿ ಬೌಲರ್‌ಗಳಿಗೆ ಹೆಚ್ಚು ಸಹಕಾರಿಯಾಗಲಿದ್ದು, ಬ್ಯಾಟ್ಸ್‌ಮನ್‌ಗಳು ಜಾಗರೂಕತೆಯಿಂದ ಬ್ಯಾಟ್ ಬೀಸಬೇಕಿದೆ. ನಂತರ ಎರಡನೇ ಇನ್ನಿಂಗ್ಸ್‌ನಲ್ಲಿ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಸಹಕರಿಸಲಿದ್ದು, ಟಾಸ್ ಗೆಲ್ಲುವ ನಾಯಕ ಹೆಚ್ಚಾಗಿ ಮೊದಲು ಬೌಲಿಂಗ್ ಮಾಡುವ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಸಂಭಾವ್ಯ ಆಡುವ ಬಳಗ
ಭಾರತ: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ರಾಹುಲ್ ತ್ರಿಪಾಠಿ, ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ಐರ್ಲೆಂಡ್: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಪಾಲ್ ಸ್ಟಿರ್ಲಿಂಗ್, ಸ್ಟೀಫನ್ ಡೊಹೆನಿ, ಗರೆಥ್ ಡೆಲಾನಿ, ಕರ್ಟಿಸ್ ಕ್ಯಾಂಫರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡ್ರ್ಯೂ ಮೆಕ್‌ಬ್ರೈನ್, ಕಾನರ್ ಓಲ್ಫರ್ಟ್, ಜೋಶ್ ಲಿಟಲ್

ನೇರಪ್ರಸಾರದ ಮಾಹಿತಿ
ಇನ್ನು ಭಾರತ ಮತ್ತು ಐರ್ಲೆಂಡ್ ನಡುವಿನ ಈ ಪ್ರಥಮ ಟಿ ಟ್ವೆಂಟಿ ಪಂದ್ಯದ ನೇರ ಪ್ರಸಾರವನ್ನು ಸೋನಿ ನೆಟ್‌ವರ್ಕ್ ಚಾನೆಲ್ ಹಾಗೂ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications