ಭಾರತ vs ಐರ್ಲೆಂಡ್ 2ನೇ ಟಿ20: ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಮತ್ತು ನೇರಪ್ರಸಾರದ ಮಾಹಿತಿ

ಒಂದೆಡೆ ರೋಹಿತ್ ಶರ್ಮಾ ನಾಯಕತ್ವದ ಹಿರಿಯರ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಕಳೆದ ವರ್ಷದಿಂದ ಮುಂದೂಡಲ್ಪಟ್ಟಿದ್ದ ಟೆಸ್ಟ್ ಪಂದ್ಯ, 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ ಸೆಣಸಾಟವನ್ನು ನಡೆಸಲಿದೆ. ಇತ್ತ ಇದಕ್ಕೂ ಮುನ್ನ ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸವನ್ನು ಕೈಗೊಂಡು 2 ಪಂದ್ಯಗಳ ಟಿ ಟ್ವೆಂಟಿ ಸರಣಿಯನ್ನು ಆಡುತ್ತಿದ್ದು, ತಂಡದ ಅನೇಕ ಪ್ರಮುಖರು ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿರುವ ಕಾರಣ ಬಿಸಿಸಿಐ ಆಯ್ಕೆ ಸಮಿತಿ ಕಮ್ ಬ್ಯಾಕ್ ಮಾಡಿರುವ ಆಟಗಾರರು ಹಾಗೂ ಅತಿ ಹೆಚ್ಚು ಯುವ ಆಟಗಾರರನ್ನೊಳಗೊಂಡ ಭಾರತ ತಂಡವನ್ನು ರಚಿಸಿ ಐರ್ಲೆಂಡ್ ಪ್ರವಾಸಕ್ಕೆ ಕಳುಹಿಸಿದೆ.
ಈ ತಂಡದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವವನ್ನು ವಹಿಸಿಕೊಂಡಿದ್ದು, ಸಂಜು ಸ್ಯಾಮ್ಸನ್, ದಿನೇಶ್ ಕಾರ್ತಿಕ್, ಯಜುವೇಂದ್ರ ಚಾಹಲ್ ಹಾಗೂ ಭುವನೇಶ್ವರ್ ಕುಮಾರ್ ಮತ್ತೆ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇನ್ನು ಈ ಸರಣಿಯ ಮೇಲೆ ಬಿಸಿಸಿಐ ಆಯ್ಕೆ ಸಮಿತಿಯ ಅಧ್ಯಕ್ಷ ಚೇತನ್ ಶರ್ಮಾ ಕಣ್ಣಿಟ್ಟಿದ್ದು, ಆಟಗಾರರು ಉತ್ತಮ ಪ್ರದರ್ಶನ ನೀಡುವತ್ತ ಚಿತ್ತ ನೆಟ್ಟಿದ್ದಾರೆ.
ಇನ್ನು ಈ ಪಂದ್ಯಗಳ ಪೈಕಿ ಪ್ರಥಮ ಟಿ ಟ್ವೆಂಟಿ ಪಂದ್ಯ ಈಗಾಗಲೇ ಮುಕ್ತಾಯಗೊಂಡಿದ್ದು, ನಿನ್ನೆ ( ಜೂನ್ 26 ) ಡಬ್ಲಿನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆತಿಥೇಯ ಐರ್ಲೆಂಡ್ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿದೆ ಹಾಗೂ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು ಮುನ್ನಡೆಯನ್ನು ಕಾಯ್ದುಕೊಂಡಿದೆ. ಇತ್ತಂಡಗಳ ನಡುವಿನ ದ್ವಿತೀಯ ಹಾಗೂ ಅಂತಿಮ ಟಿ ಟ್ವೆಂಟಿ ಪಂದ್ಯ ನಾಳೆ ( ಜೂನ್ 28 ) ಡಬ್ಲಿನ್‌ನಲ್ಲಿಯೇ ನಡೆಯಲಿದೆ. ಈ ಕುರಿತಾದ ಇನ್ನಷ್ಟು ಮಾಹಿತಿ, ಪಿಚ್ ವರದಿ, ಸಂಭಾವ್ಯ ಆಡುವ ಬಳಗ ಹಾಗೂ ನೇರಪ್ರಸಾರದ ಮಾಹಿತಿ ಮುಂದೆ ಓದಿ.

ಪಂದ್ಯದ ಸಮಯ ಮತ್ತು ಪಿಚ್ ವರದಿ
ಭಾರತ ಮತ್ತು ಐರ್ಲೆಂಡ್ ನಡುವಿನ ಈ ದ್ವಿತೀಯ ಟಿ ಟ್ವೆಂಟಿ ಪಂದ್ಯ ಡಬ್ಲಿನ್‌ನ ಕ್ಯಾಶಲ್ ಅವೆನ್ಯೂ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಪಂದ್ಯ ರಾತ್ರಿ 8.30ಕ್ಕೆ ಆರಂಭಗೊಳ್ಳಲಿದೆ. ಇನ್ನು ಈ ಕ್ರೀಡಾಂಗಣದ ಮೊದಲ ಪಂದ್ಯದಂತೆಯೇ ಮೊದಲು ಬೌಲರ್‌ಗಳಿಗೆ ಸಹಕರಿಸಲಿದ್ದು, ಟಾಸ್ ಗೆಲ್ಲುವ ತಂಡದ ನಾಯಕ ಹೆಚ್ಚಾಗಿ ಚೇಸಿಂಗ್ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಈ ಪಂದ್ಯದಲ್ಲಿಯೂ ಮಳೆಯಾಗುವ ಸಾಧ್ಯತೆಯಿದ್ದು, ಪಿಚ್ ತೇವವಾಗುವ ಕಾರಣ ಬೌಲರ್‌ಗಳಿಗೆ ಇದು ಅನುಕೂಲಕರವಾಗಲಿದೆ. ಆದರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರಲಿದೆ.

ಸಂಭಾವ್ಯ ಆಡುವ ಬಳಗಗಳು
ಐರ್ಲೆಂಡ್ ಸಂಭಾವ್ಯ ಆಡುವ ಬಳಗ: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್
ಭಾರತ ಸಂಭಾವ್ಯ ಆಡುವ ಬಳಗ: ರುತುರಾಜ್ ಗಾಯಕ್ವಾಡ್/ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್

ನೇರಪ್ರಸಾರದ ಮಾಹಿತಿ
ಭಾರತ ಮತ್ತು ಐರ್ಲೆಂಡ್ ನಡುವಿನ ಈ ಪಂದ್ಯದ ನೇರ ಪ್ರಸಾರವನ್ನು ಭಾರತದಲ್ಲಿ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ನಲ್ಲಿ ಹಾಗೂ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications