ಭಾರತ vs ಐರ್ಲೆಂಡ್ 2ನೇ ಟಿ20: ಟಾಸ್ ವರದಿ ಲೈವ್ ಸ್ಕೋರ್; ತಂಡದಲ್ಲಿ ಭಾರೀ ಬದಲಾವಣೆ

ಐರ್ಲೆಂಡ್ ಪ್ರವಾಸ ಕೈಗೊಂಡಿರುವ ಟೀಮ್ ಇಂಡಿಯಾ ಇಂದು ( ಜೂನ್ 28 ) ನಡೆಯುತ್ತಿರುವ ಎರಡನೇ ಟಿ ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದಿದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಒಂದೆಡೆ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿದು ಸೆಣಸಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ನಾಯಕತ್ವದ ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, 2 ಪಂದ್ಯಗಳ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದೆ.
ಇನ್ನು ಈಗಾಗಲೇ ಭಾರತ ಮತ್ತು ಐರ್ಲೆಂಡ್ ನಡುವಿನ ಪ್ರಥಮ ಟಿ ಟ್ವೆಂಟಿ ಪಂದ್ಯ ಮುಕ್ತಾಯವಾಗಿದ್ದು, ಜೂನ್ 26ರ ಭಾನುವಾರದಂದು ಡಬ್ಲಿನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು, ಸರಣಿಯಲ್ಲಿ 1-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಅತ್ತ ತವರಿನಲ್ಲಿ ಟೀಮ್ ಇಂಡಿಯಾ ವಿರುದ್ಧ ಸೋತು ಮುಖಭಂಗವನ್ನು ಅನುಭವಿಸಿರುವ ಐರ್ಲೆಂಡ್ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಜಯ ಸಾಧಿಸಿ ಗೆಲುವಿನ ಖಾತೆ ತೆರೆಯುವತ್ತ ಚಿತ್ತ ನೆಟ್ಟಿದ್ದರೆ, ಈ ಪಂದ್ಯವನ್ನೂ ಗೆದ್ದು ವೈಟ್ ವಾಶ್ ಬಳಿಯುವತ್ತ ಟೀಮ್ ಇಂಡಿಯಾ ಕಣ್ಣಿಟ್ಟಿದೆ.
ಇನ್ನು ಭಾರತ ಮತ್ತು ಐರ್ಲೆಂಡ್ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯ ಕೂಡ ಡಬ್ಲಿನ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಭಾರತ ಮತ್ತು ಐರ್ಲೆಂಡ್ ನಡುವಿನ ಎರಡನೇ ಟಿ ಟ್ವೆಂಟಿ ಪಂದ್ಯದ ಲೈವ್ ಸ್ಕೋರ್ ಇಲ್ಲಿದೆ:
{cricket_680-2022_53595}

ಭಾರತ ಆಡುವ ಬಳಗ
ಸಂಜು ಸ್ಯಾಮ್ಸನ್, ಇಶಾನ್ ಕಿಶನ್(ವಿಕೆಟ್ ಕೀಪರ್), ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ(ನಾಯಕ), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್
ಈ ಪಂದ್ಯದಲ್ಲಿ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದು, ಸಂಜು ಸ್ಯಾಮ್ಸನ್ ಕಣಕ್ಕಿಳಿದಿದ್ದಾರೆ. ಇನ್ನು ತಂಡದಲ್ಲಿ ಮತ್ತೆರಡು ಬದಲಾವಣೆಗಳಾಗಿದ್ದು ಅವೇಶ್ ಖಾನ್ ಬದಲಾಗಿ ಹರ್ಷಲ್ ಪಟೇಲ್ ಕಣಕ್ಕಿಳಿದಿದ್ದಾರೆ ಹಾಗೂಯುಜುವೇಂದ್ರ ಚಹಲ್ ಬದಲಾಗಿ ರವಿ ಬಿಷ್ಣೋಯಿ ಕಣಕ್ಕಿಳಿದಿದ್ದಾರೆ.

ಐರ್ಲೆಂಡ್ ಆಡುವ ಬಳಗ
ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಗರೆಥ್ ಡೆಲಾನಿ, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಜಾರ್ಜ್ ಡಾಕ್ರೆಲ್, ಮಾರ್ಕ್ ಅಡೇರ್, ಆಂಡಿ ಮ್ಯಾಕ್‌ಬ್ರೈನ್, ಕ್ರೇಗ್ ಯಂಗ್, ಜೋಶುವಾ ಲಿಟಲ್, ಕಾನರ್ ಓಲ್ಫರ್ಟ್

ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ಟೀಂ ಇಂಡಿಯಾ
ಇನ್ನು ಭಾರತ ಮತ್ತು ಐರ್ಲೆಂಡ್ ನಡುವೆ ಕಳೆದ ಭಾನುವಾರ ( ಜೂನ್ 26 ) ನಡೆದ ಮೊದಲ ಪಂದ್ಯದಲ್ಲಿ ಮಳೆಯುಂಟಾದ ಕಾರಣದಿಂದಾಗಿ ಪಂದ್ಯದಲ್ಲಿ ಓವರ್‌ಗಳ ಸಂಖ್ಯೆಯನ್ನು 12ಕ್ಕೆ ಇಳಿಸಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ್ದ ಐರ್ಲೆಂಡ್ 12 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 108 ರನ್ ಕಲೆಹಾಕಿತ್ತು. ಇನ್ನು ನಂತರ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ದೀಪಕ್ ಹೂಡಾ ಅಬ್ಬರದ ಆರಂಭದ ನೆರವಿನಿಂದ 9.2 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 111 ರನ್ ಕಲೆಹಾಕಿ 7 ವಿಕೆಟ್‌ಗಳ ಜಯವನ್ನು ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications