IND vs IRE: ಐರ್ಲೆಂಡ್ ತಂಡವನ್ನು 154 ರನ್‌ಗಳಿಗೆ ಕಟ್ಟಿ ಹಾಕಿದ ಟೀಮ್ ಇಂಡಿಯಾ
ಬೆಲ್‌ಫಾಸ್ಟ್: ಭರವಸೆ ಬೌಲರ್‌ಗಳ ಬಿಗುವಿನ ದಾಳಿಯ ನೆರವಿನಿಂದ ಟೀಮ್ ಇಂಡಿಯಾ, ಎರಡನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು 154 ರನ್‌ಗಳಿಗೆ ಕಟ್ಟಿ ಹಾಕಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕರಾದ ಟಿಮ್ ಟೆಕ್ಟರ್ (5), ರಾಸ್ ಅಡೇರ್ ಮೊದಲ ವಿಕೆಟ್‌ಗೆ 17 ರನ್ ಸೇರಿಸಿತು. 16 ರನ್ ಬಾರಿಸಿದ್ದಾಗ ಆರಂಭಿಕ ಆಟಗಾರ ರಾಸ್ ಅಡೇರ್ ಅವರ ಆಟಕ್ಕೆ ಅರ್ಷದೀಪ್ ಸಿಂಗ್ ಅವರು ತೋಡಿದ ಖೆಡ್ಡಾಗೆ ಬಲಿಯಾದರು.

ಮೂರನೇ ವಿಕೆಟ್‌ಗೆ ಹ್ಯಾರಿ ಟೆಕ್ಟರ್, ನಾಯಕ ಲೋರ್ಕನ್ ಟಕರ್ 31 ಎಸೆತಗಳಲ್ಲಿ 27 ರನ್ ಸೇರಿಸಿ ತಂಡಕ್ಕೆ ಆಧಾರವಾಯಿತು. ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ತಂಡಕ್ಕೆ ಆಧಾರವಾಗಿದ್ದ ನಾಯಕ ಲೋರ್ಕನ್ ಟಕರ್ 2 ಬೌಂಡರಿ ನೆರವಿನಿಂದ 15 ರನ್ ಬಾರಿಸಿ ಪ್ರಿನ್ಸ್ ಯಾದವ್ ಅವರಿಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಪ್ರಿನ್ಸ್ ಯಾದವ್ ಟಿ20 ಅಂತಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿ ವಿಕೆಟ್ ಪಡೆದ ಸಾಧನೆ ಮಾಡಿದರು.
4ನೇ ವಿಕೆಟ್‌ಗೆ ಹ್ಯಾರಿ ಟೆಕ್ಟರ್, ಬೆನ್ ಕ್ಯಾಲಿಟ್ಜ್ ಟೀಮ್ ಇಂಡಿಯಾದ ಬೌಲರ್‌ಗಳನ್ನು ಕಾಡಿದರು. ಈ ಜೋಡಿ 44 ಎಸೆತಗಳಲ್ಲಿ 65 ರನ್ ಸೇರಿಸಿತು. ಈ ಹಂತದಲ್ಲಿ ಮಧ್ಯಮ ಕ್ರಮಾಂಕದ ಭರವಸೆಯ ಆಟಗಾರ ಬೆನ್ ಕ್ಯಾಲಿಟ್ಜ್ 3 ಬೌಂಡರಿ, 2 ಸಿಕ್ಸರ್ ಸಹಾಯದಿಂದ 37 ರನ್ ಬಾರಿಸಿ ಔಟ್ ಆದರು.

ಮೂರನೇ ಕ್ರಮಾಂಕದ ಸ್ಟಾರ್ ಆಟಗಾರ ಹ್ಯಾರಿ ಟೆಕ್ಟರ್ ಅರ್ಧಶತಕ ಬಾರಿಸಿ ಮಿಂಚಿದರು. ಇವರು 5 ಬೌಂಡರಿ, 1 ಸಿಕ್ಸರ್ ಸಹಾಯದಿಂದ 53 ರನ್ ಸಿಡಿಸಿದರು. ಅಂತಿಮವಾಗಿ ಐರ್ಲೆಂಡ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 154 ರನ್ ಸೇರಿಸಿತು.
ಭಾರತದ ಪರ ಪದಾರ್ಪಣೆ ಮಾಡಿದ ಪ್ರಿನ್ಸ್ ಯಾದವ್ 3, ಶಿವಂ ದುಬೆ ಹಾಗೂ ಅರ್ಷದೀಪ್ ಸಿಂಗ್ ತಲಾ 2 ವಿಕೆಟ್ ಕಬಳಿಸಿದರು.
ಪ್ರಿನ್ಸ್ ಯಾದವ್ ಪದಾರ್ಪಣೆ
24 ವರ್ಷದ ನವದೆಹಲಿ ತಂಡದ ವೇಗದ ಬೌಲರ್ ಪ್ರಿನ್ಸ್ ಯಾದವ್ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಇವರು ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಇವರು ಅಫ್ಘಾನಿಸ್ತಾನ ವಿರುದ್ಧ ಏಕದಿನ ಕ್ರಿಕೆಟ್‌ಗೆ ಈ ಮೊದಲೇ ಪದಾರ್ಪಣೆ ಮಾಡಿದ್ದರು. ಇನ್ನು ಇದೇ ಪಂದ್ಯದಲ್ಲಿ ಯುವ ಆಟಗಾರ ಸೂರ್ಯಾಂಶ್ ಶೆಡ್ಗೆ ಅವರು ಸಹ ಪದಾರ್ಪಣೆ ಮಾಡಿದ್ದಾರೆ.
ವೈಭವ್ ಸೂರ್ಯವಂಶಿಗೆ ನೋ ಚಾನ್ಸ್
15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಎರಡನೇ ಟಿ20 ಪಂದ್ಯದಲ್ಲಿ ಅವಕಾಶ ನೀಡಬಹುದು ಎಂದು ಎಲ್ಲರೂ ಲೆಕ್ಕಾಚಾರವನ್ನು ಹಾಕಿಕೊಂಡಿದ್ದರು. ಆದರೆ ಎರಡನೇ ಟಿ20 ಪಂದ್ಯದಲ್ಲೂ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ಲಭಿಸಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications