Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs IRE T20: ಭಾರತ-ಐರ್ಲೆಂಡ್ ಪಂದ್ಯದ ಸಮಯ ಹಠಾತ್ ಬದಲಾವಣೆ; ಇಲ್ಲಿದೆ ಅಸಲಿ ಕಾರಣ

ಬಹುನಿರೀಕ್ಷಿತ ಐರ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಶುಕ್ರವಾರ ಕಣಕ್ಕೆ ಇಳಿಯಲಿದೆ. ಈ ಪಂದ್ಯದಲ್ಲಿ ಯಂಗ್‌ ಟೀಮ್ ಇಂಡಿಯಾ ಕಣಕ್ಕೆ ಇಳಿಯಲಿದೆ. ಈ ಪಂದ್ಯವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಸರಣಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಪದಾರ್ಪಣೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಎಲ್ಲರ ಕಣ್ಣುಗಳು ಈ ಯುವ ಆಟಗಾರನ ಮೇಲೆ ನೆಟ್ಟಿವೆ. ಆದರೆ ಈ ಸರಣಿಗೆ ಸಂಬಂಧಿಸಿದಂತೆ ಈಗ ಬಿಗ್‌ ಅಪ್‌ಡೇಟ್ ಬಂದಿದೆ. ಸರಣಿಯ ಸಮಯವನ್ನು ಬದಲಿಸಲಾಗಿದೆ. ಇದಕ್ಕೆ ಕಾರಣ ಏನು? ಎಂಬ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.

ಕ್ರಿಕೆಟ್‌ ಐರ್ಲೆಂಡ್ ಬುಧವಾರ ರಾತ್ರಿ ಭಾರತ ಹಾಗೂ ಐರ್ಲೆಂಡ್‌ ನಡುವಣ ಎರಡು ಪಂದ್ಯಗಳ ಟಿ20 ಸರಣಿಯ ಸಮಯದ ಬಗ್ಗೆ ಬಿಗ್‌ ಅಪ್‌ ಡೇಟ್‌ ನೀಡಿದೆ. ಸ್ಥಳೀಯ ಕಾಲಮಾನದ ಪ್ರಕಾರ ಪಂದ್ಯ 1.30ಕ್ಕೆ ಆರಂಭವಾಗುತ್ತದೆ. ಅಂದರೆ ಭಾರತೀಯ ಕಾಲಮಾನದಂತೆ ಸಂಜೆ 6ಕ್ಕೆ ಪಂದ್ಯ ನಡೆಯಲಿದೆ. ಈ ಪಂದ್ಯಗಳು ಒಂದು ಗಂಟೆ ಮೊದಲೇ ಆರಂಭವಾಗುತ್ತಿವೆ. ಇದಕ್ಕೆ ಅಸಲಿ ಕಾರಣ ಈಗ ತಿಳಿದು ಬಂದಿದೆ.

IND vs IRE T20

ಇಂಗ್ಲೆಂಡ್‌ನಲ್ಲಿ ಮಹಿಳಾ ಟಿ20 ವಿಶ್ವಕಪ್‌ ನಡೆಯುತ್ತಿದೆ. ಈ ವಿಶ್ವಕಪ್‌ ಪಂದ್ಯಗಳು ಸಂಜೆ 7ಕ್ಕೆ ಆರಂಭವಾಗಲಿವೆ. ಇದನ್ನು ಗಮನದಲ್ಲಿಟ್ಟುಕೊಂಡು, ಈಗ ಪಂದ್ಯದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಭಾನುವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಲೀಗ್‌ ಹಂತದ ಬಿಗ್ ಫೈಟ್ ನಡೆಯಲಿದೆ. ಈ ಪಂದ್ಯ ಹರ್ಮನ್‌ಪ್ರೀತ್ ಕೌರ್ ಪಡೆಗೆ ದೊಡ್ಡ ಸವಾಲಾಗಿದೆ. ಪಂದ್ಯಾವಳಿಯ ಹೈವೋಲ್ಟೇಜ್ ಪಂದ್ಯದೊಂದಿಗೆ ಸಮಯದ ಸಂಘರ್ಷವನ್ನು ತಪ್ಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಐರ್ಲೆಂಡ್‌ ಸರಣಿಯನ್ನು ನೇರಪ್ರಸಾರ ಮಾಡುವ ಹಕ್ಕನ್ನು ಪಡೆದಿರುವ ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಕ್ರಿಕೆಟ್ ಐರ್ಲೆಂಡ್ ಪರಸ್ಪರ ಚರ್ಚಿಸಿ ಈ ಮಾಸ್ಟರ್ ಪ್ಲಾನ್ ಮಾಡಿವೆ.

ಜೂನ್ 28ರ ಭಾನುವಾರದಂದು ಲಾರ್ಡ್ಸ್ ಮೈದಾನದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡ ಹಾಗೂ ಬಲಿಷ್ಠ ಆಸ್ಟ್ರೇಲಿಯಾ ಮಹಿಳಾ ತಂಡಗಳ ಮಹತ್ವದ ವಿಶ್ವಕಪ್ ಪಂದ್ಯ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಆರಂಭವಾಗಲಿದೆ. ಒಂದು ವೇಳೆ ಪುರುಷರ ಪಂದ್ಯವೂ ಅದೇ ಸಮಯಕ್ಕೆ ಆರಂಭವಾದರೆ, ಅಭಿಮಾನಿಗಳಿಗೆ ಪಂದ್ಯ ವೀಕ್ಷಿಸಲು ಅಡಚಣೆಯಾಗುತ್ತದೆ ಎಂಬುದನ್ನು ಗಮನಿಸಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ವೈಭವ್ ಸೂರ್ಯವಂಶಿ ಆಕರ್ಷಣೆ

ಭಾರತ ತಂಡದ ಯುವ ಆಟಗಾರ ವೈಭವ್ ಸೂರ್ಯವಂಶಿ ಈ ಸರಣಿಯ ಮೂಲಕ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಇವರು ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಬಲದಿಂದ ಇವರಿಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ನೀಡಲಾಗಿದೆ. ಇವರು ಐರ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪದಾರ್ಪಣೆ ಮಾಡುವ ಸಾಧ್ಯತೆ ಇದೆ.

Story first published: Friday, June 26, 2026, 12:34 [IST]
Other articles published on Jun 26, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+