IND vs IRE: ಡಬ್ಲಿನ್‌ನಲ್ಲಿ 2ನೇ ಟಿ20 ಪಂದ್ಯಕ್ಕೂ ಮತ್ತೆ ಮಳೆ ಅಡ್ಡಿಯಾಗಲಿದೆಯೇ?

ಮಂಗಳವಾರ, ಜೂನ್ 28ರಂದು ಐರ್ಲೆಂಡ್‌ನ ಮಲಾಹೈಡ್ ಕ್ರಿಕೆಟ್ ಕ್ಲಬ್‌ನಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ 2ನೇ ಮತ್ತು ಅಂತಿಮ ಟಿ20 ಪಂದ್ಯವನ್ನು ಆಡುತ್ತಿರುವಾಗ, ಹಾರ್ದಿಕ್ ಪಾಂಡ್ಯ ಅವರು ಭಾರತ ತಂಡದ ನಾಯಕರಾಗಿ ತಮ್ಮ ಚೊಚ್ಚಲ ಸರಣಿ ಗೆಲುವು ಸಾಧಿಸಲು ಎದುರು ನೋಡುತ್ತಿದ್ದಾರೆ. ಭಾರತವು ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಭಾನುವಾರ ನಡೆದ ಪಂದ್ಯದಲ್ಲಿ ಆತಿಥೇಯರ ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿತು.

ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದ ಗೆಲುವಿನ ನಂತರ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದು ಸರಣಿಯನ್ನು ತನ್ನದಾಗಿಸಿಕೊಳ್ಳುವ ಉತ್ಸಾಹದಲ್ಲಿದೆ. ಆದಾಗ್ಯೂ ಮೆನ್ ಇನ್ ಬ್ಲೂ ತಂಡ ವಿಜಯದ ಹಾದಿಯಲ್ಲಿ ಅಡ್ಡಿಯಾಗಬಹುದಾದ ಒಂದು ಅಂಶವೆಂದರೆ ಅದು ಹವಾಮಾನ, ವಿಶೇಷವಾಗಿ ಮಳೆ.

IRE vs IND 2ನೇ ಟಿ20: ಚೊಚ್ಚಲ ನಾಯಕತ್ವದಲ್ಲೇ ಕ್ಲೀನ್‌ಸ್ವೀಪ್ ಮೇಲೆ ಕಣ್ಣಿಟ್ಟ ಹಾರ್ದಿಕ್ ಪಾಂಡ್ಯIRE vs IND 2ನೇ ಟಿ20: ಚೊಚ್ಚಲ ನಾಯಕತ್ವದಲ್ಲೇ ಕ್ಲೀನ್‌ಸ್ವೀಪ್ ಮೇಲೆ ಕಣ್ಣಿಟ್ಟ ಹಾರ್ದಿಕ್ ಪಾಂಡ್ಯ

ಎರಡನೇ ಪಂದ್ಯಕ್ಕೆ ರುತುರಾಜ್ ಗಾಯಕ್ವಾಡ್ ಅವರ ಲಭ್ಯತೆಯ ಬಗ್ಗೆ ಭಾರತವು ಎಚ್ಚೆತ್ತುಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಯುವಕರ ಸಮಸ್ಯೆಯನ್ನು ಉಲ್ಬಣಗೊಳಿಸುವ ಅಪಾಯವನ್ನು ಬಯಸುವುದಿಲ್ಲ ಎಂದು ಹಾರ್ದಿಕ್ ಪಾಂಡ್ಯ ಒತ್ತಿ ಹೇಳಿದರು. ರುತುರಾಜ್ ಪೂರ್ಣ ಫಿಟ್ನೆಸ್ ಮರಳಿ ಪಡೆಯದಿದ್ದರೆ, ಭಾರತವು ಸಂಜು ಸ್ಯಾಮ್ಸನ್ ಅವರನ್ನು ಕರೆತರಬಹುದು ಅಥವಾ ರಾಹುಲ್ ತ್ರಿಪಾಠಿ ಚೊಚ್ಚಲ ಬಾರಿಗೆ ಭಾರತದ ಕ್ಯಾಪ್ ಧರಿಸಬಹುದು.

ರಾಜಸ್ಥಾನ ರಾಯಲ್ಸ್ ಪರವಾಗಿ ಉತ್ತಮವಾಗಿ ಆಡಿದ್ದ ಸಂಜು ಸ್ಯಾಮ್ಸನ್

ರಾಜಸ್ಥಾನ ರಾಯಲ್ಸ್ ಪರವಾಗಿ ಉತ್ತಮವಾಗಿ ಆಡಿದ್ದ ಸಂಜು ಸ್ಯಾಮ್ಸನ್

ಸಂಜು ಸ್ಯಾಮ್ಸನ್ ಐಪಿಎಲ್ 2022ರಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಉತ್ತಮವಾಗಿ ಆಡಿದ್ದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಸರಣಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ. ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ಸೀಸನ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ಪರ ಲೀಡಿಂಗ್ ಸ್ಕೋರರ್ ಆಗಿದ್ದ ರಾಹುಲ್ ತ್ರಿಪಾಠಿಗೆ ಅದೇ ರೀತಿಯಾಗಿದೆ.

ಡಬ್ಲಿನ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮಳೆಯ ಕಾರಣದಿಂದಾಗಿ ಟಿ20 ಪಂದ್ಯದ ಓವರ್‌ಗಳನ್ನು 12 ಓವರ್‌ಗಳಿಗೆ ಕಡಿತಗೊಳಿಸಿ ಆಡಿಸಲಾಗಿತ್ತು. ಆದರೆ ಇಂದು ಮಳೆಯು ದೂರ ಸರಿಯುತ್ತದೆ ಎಂದು ಭಾರತವು ಆಶಿಸುತ್ತಿದೆ.

10ನೇ ಓವರ್‌ನಲ್ಲಿ ಸತತ ಎರಡು ಬೌಂಡರಿ ಬಾರಿಸಿ ಭಾರತಕ್ಕೆ ಗೆಲುವು

10ನೇ ಓವರ್‌ನಲ್ಲಿ ಸತತ ಎರಡು ಬೌಂಡರಿ ಬಾರಿಸಿ ಭಾರತಕ್ಕೆ ಗೆಲುವು

ಮೊದಲ ಪಂದ್ಯದಲ್ಲಿ ಭಾರತ ನಾಯಕ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಐರ್ಲೆಂಡ್ 12 ಓವರ್‌ಗಳಲ್ಲಿ 108 ರನ್ ಗಳಿಸಿದ್ದರು. ಇದರಲ್ಲಿ ಹ್ಯಾರಿ ಟೆಕ್ಟರ್ 64 ರನ್ ಬಾರಿಸಿದ್ದರು. ಮೆನ್ ಇನ್ ಬ್ಲೂ ಪರ ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ಅವೇಶ್ ಖಾನ್ ಮತ್ತು ಯುಜ್ವೇಂದ್ರ ಚಾಹಲ್ ತಲಾ 1 ವಿಕೆಟ್ ಪಡೆದರು.

109 ರನ್‌ಗಳ ಚೇಸಿಂಗ್ ಮಾಡಿದ ಭಾರತ ತಂಡಕ್ಕೆ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ದೀಪಕ್ ಹೂಡಾ ಮತ್ತು ಇಶಾನ್ ಕಿಶನ್ ಕ್ರಮವಾಗಿ 47 ರನ್ ಮತ್ತು 26 ರನ್ ಪೇರಿಸಿದರು. ಕ್ರೇಗ್ ಯಂಗ್ ಅವರು ಐರ್ಲೆಂಡ್ ಪರ 2 ವಿಕೆಟ್‌ಗಳನ್ನು ಬೇಟೆಯಾಡಿದರು. ಕಿಶನ್ ಔಟಾದ ನಂತರ ಬಂದ ನಾಯಕ ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ 24 ರನ್ ಗಳಿಸಿದರು. 10ನೇ ಓವರ್‌ನಲ್ಲಿ ಸತತ ಎರಡು ಬೌಂಡರಿ ಬಾರಿಸಿ ಭಾರತಕ್ಕೆ ಗೆಲುವು ತಂದುಕೊಟ್ಟರು.

ಮಳೆ ಬಂದರೆ 2ನೇ ಟಿ20ನೂ ಅಪೂರ್ಣವೇ?

ಮಳೆ ಬಂದರೆ 2ನೇ ಟಿ20ನೂ ಅಪೂರ್ಣವೇ?

ಮೊದಲ ಪಂದ್ಯದಲ್ಲಿ ಆರಂಭದಲ್ಲೇ ಮಳೆ ಬಂದು ಭಾರತೀಯ ಮತ್ತು ಐರ್ಲೆಂಡ್ ಕ್ರಿಕೆಟ್ ಅಭಿಮಾನಿಗಳಿಗೆ ಇನ್ನಷ್ಟು ನಿರಾಸೆಯನ್ನುಂಟು ಮಾಡಿದ್ದು, ಮಂಗಳವಾರವೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. weather.com ಪ್ರಕಾರ, ತಾಪಮಾನವು 11 ಮತ್ತು 19° C ನಡುವೆ ಇರುತ್ತದೆ. ಆದರೆ ಗಾಳಿಯು ನೈಋತ್ಯದಿಂದ 25-33 ಕಿಮೀ/ ಗಂಟೆ ವೇಗದಲ್ಲಿ ಬೀಸುತ್ತದೆ. ಶೇ.77-83 ರಷ್ಟು ಮಳೆಯಾಗುವ ಸಾಧ್ಯತೆಗಳಿವೆ. ಇದರಿಂದ ಎರಡನೇ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.

ಭಾರತ vs ಐರ್ಲೆಂಡ್ ಸಂಭಾವ್ಯ ಆಡುವ 11ರ ಬಳಗ

ಭಾರತ vs ಐರ್ಲೆಂಡ್ ಸಂಭಾವ್ಯ ಆಡುವ 11ರ ಬಳಗ

ಭಾರತ: ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್

ಐರ್ಲೆಂಡ್: ಪಾಲ್ ಸ್ಟಿರ್ಲಿಂಗ್, ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಕರ್ಟಿಸ್ ಕ್ಯಾಂಫರ್, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಜಾರ್ಜ್ ಡಾಕ್ರೆಲ್, ಕ್ರೇಗ್ ಯಂಗ್, ಆಂಡಿ ಮೆಕ್‌ಬ್ರೈನ್, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್

For Quick Alerts
ALLOW NOTIFICATIONS
For Daily Alerts
Story first published: Tuesday, June 28, 2022, 17:46 [IST]
Other articles published on Jun 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X